ಬೆಳಪು ನಲ್ಲಿ ಪೊಲೀಸ್‌ ಸಂಶೋಧನಾ ಕೇಂದ್ರ, ವಸತಿ ಗೃಹ, ಕವಾಯತು ಮೈದಾನ ನಿರ್ಮಾಣಕ್ಕೆ ಚಿಂತನೆ

ಬೆಳಪು ಗ್ರಾ.ಪಂ. ವತಿಯಿಂದ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಕೆ

Team Udayavani, Oct 29, 2020, 3:42 PM IST

ಬೆಳಪು ನಲ್ಲಿ ಪೊಲೀಸ್‌ ಸಂಶೋಧನಾ ಕೇಂದ್ರ, ವಸತಿ ಗೃಹ ನಿರ್ಮಾಣಕ್ಕೆ ಚಿಂತನೆ

ಕಾಪು: ಶೈಕ್ಷಣಿಕ, ಕೈಗಾರಿಕೆ, ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಯಲ್ಲಿ ಗಣನೀಯ ಸಾಧನೆ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಳಪು ಗ್ರಾಮದಲ್ಲಿ ಪೊಲೀಸ್‌ ಸಂಶೋಧನಾ ಕೇಂದ್ರ, ವಸತಿ ಗೃಹ – ಕವಾಯತು ಮೈದಾನ ನಿರ್ಮಾಣಕ್ಕೆ ಪೊಲೀಸ್‌ ಇಲಾಖೆಯ ಮನವಿಯ ಮೇರೆಗೆ ಗ್ರಾಮ ಪಂಚಾಯತ್‌ 5 ಎಕರೆ ಸರಕಾರಿ ಜಮೀನನ್ನು ಮೀಸಲಿರಿಸಿದ್ದು, ಜಾಗ ಮಂಜೂರಾತಿಗೆ ಗ್ರಾಮ ಪಂಚಾಯತ್‌ ಮೂಲಕವಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲೇ ಪ್ರಥಮದ್ದಾದ ಪೊಲೀಸ್‌ ಇಲಾಖಾ ಸಂಶೋಧನಾ ಕೇಂದ್ರ ನಿರ್ಮಾಣ ಸಹಿತ ಕಾಪು ವೃತ್ತ ವ್ಯಾಪ್ತಿಯ ಪೊಲೀಸರ ಉಪಯೋಗಕ್ಕಾಗಿ ಬಹುಮಹಡಿ ವಸತಿ ಗೃಹ ಕಟ್ಟಡ ಮತ್ತು ಪೊಲೀಸ್‌ ಕವಾಯತು ಮೈದಾನ ನಿರ್ಮಾಣಕ್ಕೆ ಜಾಗ ನೀಡುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ನಿರ್ದೇಶನ ಪಡೆದು, ಉಡುಪಿ ಜಿಲ್ಲಾ ವರಿಷ್ಠಾಧಿಕಾರಿಯ ಸೂಚನೆಯಂತೆ ಕಾಪು ವೃತ್ತ ನಿರೀಕ್ಷಕ ಮಹೇಶ್‌ ಪ್ರಸಾದ್‌ ಅವರು ವರ್ಷದ ಹಿಂದೆಯೇ ಪೊಲೀಸ್‌ ಇಲಾಖೆಯ ಪರವಾಗಿ ಜಾಗ ಒದಗಿಸುವಂತೆ ಗ್ರಾಮ ಪಂಚಾಯತ್‌ಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಪೊಲೀಸ್‌ ಇಲಾಖೆಯ ಕೋರಿಕೆಯಂತೆ ಬೆಳಪು ಗ್ರಾಮ ಪಂಚಾಯತ್‌ನ ಹಿಂದಿನ ಆಡಳಿತಾವಧಿಯ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯದೊಂದಿಗೆ ಪೊಲೀಸ್‌ ಇಲಾಖಾ ಸಿಬ್ಬಂದಿಗಳ ಮತ್ತು ಅಧಿಕಾರಿಗಳ ಬಹುಮಹಡಿ ವಸತಿ ಗೃಹ, ಸಂಶೋಧನಾ ಕೇಂದ್ರ ಹಾಗೂ ಪೊಲೀಸ್‌ ಕವಾಯತು ಮೈದಾನ ನಿರ್ಮಾಣಕ್ಕೆ 5 ಎಕ್ರೆ ಸರಕಾರಿ ಜಾಗವನ್ನು ಮೀಸಲಿಡಲಾಗಿತ್ತು. ಇದೀಗ ಆ ಜಾಗವನ್ನು ಇಲಾಖಾ ಮಂಜೂರು ಮಾಡುವಂತೆ ಗ್ರಾಮ ಪಂಚಾಯತ್‌ ಮೂಲಕ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೆಳಪು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಎಚ್‌.ಆರ್‌. ರಮೇಶ್‌ ತಿಳಿಸಿದ್ದಾರೆ.

ಸರಕಾರಿ ಯೋಜನೆ, ಸಾಮಾಜಿಕ ಚಟುವಟಿಕೆಗೆ ಮೀಸಲು : ಬೆಳಪು ಗ್ರಾಮದಲ್ಲಿ ಸುಮಾರು 70 ಎಕರೆ ಸರಕಾರಿ ಭೂಮಿಯಿದ್ದು ಅದರಲ್ಲಿ 20 ಎಕರೆ ಮಂಗಳೂರು ವಿವಿ ಸಂಯೋಜಿತ ವಿಜ್ಞಾನ ಸಂಶೋಧನಾ ಕೇಂದ್ರ, 5 ಎಕರೆ ಸರಕಾರಿ ಪಾಲಿಟೆಕ್ನಿಕ್‌ ವಿದ್ಯಾಲಯ, 3 ಎಕರೆ ಕಸ ವಿಲೇವಾರಿ ಘಟಕ, 1 ಎಕರೆ ಮೌಲನಾ ಆಜಾದ್‌ ವಸತಿ ಶಾಲೆ ಮತ್ತು 25 ಸೆಂಟ್ಸ್‌ ಜಮೀನನ್ನು ಸಾರ್ವಜನಿನ ಗ್ರಂಥಾಲಯಕ್ಕೆ ಮೀಸಲಿರಿಸಲಾಗಿದೆ. ಉಳಿದಂತೆ 5 ಎಕರೆ ಜಮೀನನ್ನು ಪೊಲೀಸ್‌ ಇಲಾಖೆಯ ಸಂಶೋಧನಾ ಕೇಂದ್ರ, ವಸತಿ ಗೃಹ ಮತ್ತು ಕವಾಯತು ಮೈದಾನ ನಿರ್ಮಾಣ ಮತ್ತು ತಲಾ 20 ಸೆಂಟ್ಸ್‌ ಜಮೀನನ್ನು ಬಿಲ್ಲವ ಸಂಘ ಮತ್ತು ಕುಲಾಲ ಸಂಘಕ್ಕೆ ಮೀಸಲಿರಿಸಿ, ಜಮೀನು ಮಂಜೂರಾತಿಗಾಗಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೆಳಪು ಗ್ರಾ.ಪಂ. ಮಾಜಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ತಿಳಿಸಿದ್ದಾರೆ.

ಬೆಳಪು ಕಾಡು ಎಂದೇ ಖ್ಯಾತಿ ಪಡೆದಿದ್ದ ಪುಟ್ಟ ಗ್ರಾಮ ಬೆಳಪುವಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಆಧುನಿಕ ಸಂಶೋಧನಾ ಕೇಂದ್ರ ಹಾಗೂ ಪಿ.ಜಿ. ಸೆಂಟರ್‌ನ ಕಾಮಗಾರಿ ಪ್ರಗತಿಯಲ್ಲಿದ್ದು ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಶಿಕ್ಷಣಕ್ಕಾಗಿ ಮೌಲಾನಾ ಆಜಾದ್‌ ವಸತಿ ಶಾಲೆ ಸ್ಥಾಪನೆಗೆ 1.00 ಎಕ್ರೆ ಜಾಗ ಕಾಯ್ದಿರಿಸಲಾಗಿದ್ದು, 68 ಎಕ್ರೆ ಪ್ರದೇಶದಲ್ಲಿ ಸಣ್ಣ ಕೈಗಾರಿಕೆಗಳ ಪಾರ್ಕ್‌ ನಿರ್ಮಾಣವಾಗುತ್ತಿದೆ. ಅದರೊಂದಿಗೆ ಪೊಲೀಸ್‌ ಇಲಾಖೆಯ ಯೋಜನೆಗಳು ಕೂಡಾ ಬೆಳಪು ಗ್ರಾಮಕ್ಕೆ ಬರುವುದಾದರೆ ಅದನ್ನು ಸ್ವಾಗತಿಸುತ್ತೇವೆ.
– ಡಾ| ದೇವಿಪ್ರಸಾದ್‌ ಶೆಟ್ಟಿ, ಅಧ್ಯಕ್ಷರು, ಬೆಳಪು ಗ್ರಾಮ ಪಂಚಾಯತ್‌

ಕಾಪು ಪೊಲೀಸ್‌ ವೃತ್ತ ವ್ಯಾಪ್ತಿಯಲ್ಲಿ ಬರುವ ವೃತ್ತ ನಿರೀಕ್ಷಕರ ಕಛೇರಿ ಸಹಿತವಾಗಿ ಕಾಪು, ಪಡುಬಿದ್ರಿ ಮತ್ತು ಶಿರ್ವ ಪೊಲೀಸ್‌ ಠಾಣೆ ಹಾಗೂ ಕಟಪಾಡಿ ಹೊರಠಾಣೆಗಳಲ್ಲಿ ಸುಮಾರು 150ಕ್ಕೂ ಅಧಿಕ ಮಂದಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದು, ಇವರಲ್ಲಿ ಹೆಚ್ಚಿನವರು ಸರಕಾರಿ ವಸತಿ ವ್ಯವಸ್ಥೆಯಿಲ್ಲದೇ ಬಾಡಿಗೆ ಮನೆಗಳಲ್ಲಿ ಅಥವಾ ಜಿಲ್ಲೆಯ ಬೇರೆ ಕಡೆಗಳಲ್ಲಿ ವಾಸಿಸುವಂತಾಗಿದೆ. ಕಾಪು ವೃತ್ತ ವ್ಯಾಪ್ತಿಯಲ್ಲಿ ಪೊಲೀಸ್‌ ಇಲಾಖೆಗೆ ಸಂಬಂಧಿಸಿದ ಜಾಗದಲ್ಲಿ, ಸಮರ್ಪಕ ಸರಕಾರಿ ಜಮೀನು ಇಲ್ಲದಿರುವುದರಿಂದ ಮನೆ ನಿರ್ಮಾಣ ಕಷ್ಟ ಸಾಧ್ಯವಾಗಿದೆ. ಅದರೊಂದಿಗೆ ಕಾಪು ತಾಲೂಕು ಆಗಿ ಮಾರ್ಪಟ್ಟಿದ್ದು ಪೊಲೀಸ್‌ ಬಲ ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದ್ದು, ಪೊಲೀಸ್‌ ಸಂಶೋಧನಾ ಕೇಂದ್ರ, ವಸತಿಗೃಹ ಮತ್ತು ಕವಾಯತು ಮೈದಾನ ನಿರ್ಮಾಣಕ್ಕೆ 10 ಎಕ್ರೆ ಜಮೀನು ಒದಗಿಸುವಂತೆ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತು.
– ಮಹೇಶ್‌ ಪ್ರಸಾದ್‌ , ಪೊಲೀಸ್‌ ವೃತ್ತ ನಿರೀಕ್ಷಕರು, ಕಾಪು ವೃತ್ತ

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.