ರಾಜಕೀಯ ನಿವೃತ್ತಿಯಾದರೂ ಸರಿ ಮತ್ತೆ ಪಕ್ಷಕ್ಕೆ ವಾಪಸ್ ಆಗಲ್ಲ; ಅತೃಪ್ತ ಶಾಸಕರ ಗುಡುಗು
Team Udayavani, Jul 26, 2019, 12:13 PM IST
ಬೆಂಗಳೂರು:ನಾವು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಮತ್ತೆ ವಾಪಸ್ ಆಗುವ ಪ್ರಶ್ನೆಯೇ ಇಲ್ಲ. ನಮ್ಮ ಮನವೊಲಿಸುವ ಧೈರ್ಯ ಯಾವ ನಾಯಕರಿಗೂ ಇಲ್ಲ ಎಂದು ಹೆಚ್.ವಿಶ್ವನಾಥ್ ಗುಡುಗಿದ್ದಾರೆ.
ಶುಕ್ರವಾರ ರಾಜ್ಯ ರಾಜಕೀಯದ ಬೆಳವಣಿಗೆ, ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ನಿಟ್ಟಿನಲ್ಲಿ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರ ಜತೆ ಅವರು ಮಾತನಾಡಿದರು.
ನಾವೆಲ್ಲ ಶಾಸಕರು ಬಂಡೆಯಂತೆ ಒಗ್ಗಟ್ಟಾಗಿದ್ದೇವೆ. ನೆಮ್ಮದಿಯಾಗಿದ್ದೇವೆ. ನಾವು ಮತ್ತೆ ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು. ಯಾವ ನಾಯಕನೇ ಇರಲಿ, ನಮ್ಮ ಜೊತೆ ಸಂಪರ್ಕದಲ್ಲಿರುವುದಾಗಿ ಹೇಳಿದರೆ ಅದು ಸುಳ್ಳು ಎಂದರು.
ಹಾಗೆ ಯಾರಾದರೂ ನಾಯಕರು ಹೇಳಿಕೊಂಡರೆ ಅದು ಅವರ ಭ್ರಮೆ. ನಮ್ಮ ದಾರಿ ನಿಚ್ಚಳವಾಗಿದೆ, ಸ್ಪಷ್ಟವಾಗಿದೆ. ಕಾಂಗ್ರೆಸ್-ಜೆಡಿಎಸ್ ಸರಕಾರ ನಮಗೆ ಬೇಡವಾಗಿತ್ತು. ಅದೀಗ ಪತನವಾಗಿದೆ. ಇನ್ನು ನಮ್ಮ ದಾರಿ ನಮಗೆ ಎಂದು ಹೇಳಿದರು.
ರಾಜಕೀಯದಿಂದ ನಿವೃತ್ತಿಯಾದರೂ ಸರಿ ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ನಮ್ಮನ್ನು ಯಾರು ಸಂಪರ್ಕಿಸಿಲ್ಲ ಎಂದು ಶಾಸಕ ಬಿಸಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಮೂವರು ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ತೀರ್ಮಾನದ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸುತ್ತೇವೆ. ಸದ್ಯ ನಾವು ಯಾರೂ ಬೆಂಗಳೂರಿಗೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.