Politics: ಅದಾನಿ ಗ್ರೂಪ್‌ನಿಂದ 12,000 ಕೋಟಿ ರೂ. ವಂಚನೆ- ರಾಹುಲ್ ಆರೋಪ
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮತ್ತೂಂದು ಸುತ್ತಿನ ವಾಕ್ ಸಮರ
Team Udayavani, Oct 18, 2023, 9:02 PM IST
ನವದೆಹಲಿ: ಅದಾನಿ ಗ್ರೂಪ್‌ಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮತ್ತೂಂದು ಸುತ್ತಿನ ವಾಕ್ ಸಮರ ಏರ್ಪಟ್ಟಿದೆ.
“ನಿಜವಾದ ದರಕ್ಕಿಂತ ಹೆಚ್ಚಿನ ಬೆಲೆಗೆ ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗಿದೆ ಎಂದು ತೋರಿಸಿ, ವಿದ್ಯುತ್ ದರವಾಗಿ ಜನರಿಂದ ಹೆಚ್ಚುವರಿಯಾಗಿ 12,000 ಕೋಟಿ ರೂ.ಗಳನ್ನು ಅದಾನಿ ಗ್ರೂಪ್ ಸಂಗ್ರಹಿಸಿದೆ’ ಎಂದು ಮಾಧ್ಯಮಗಳ ವರದಿಯನ್ನು ಉಲ್ಲೇಖೀಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಅವರು, “ಈ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತನಿಖೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿದರು.
“2024ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಪ್ರಕರಣದ ತನಿಖೆಗೆ ಆದೇಶಿಸಲಾಗುವುದು’ ಎಂದು ಭರವಸೆ ನೀಡಿದ ಅವರು, “ಈ ವಿಚಾರದಲ್ಲಿ ಪ್ರಧಾನಿ ಮೋದಿ ಏಕೆ ಮೌನ ತಾಳಿದ್ದಾರೆ?. ತಮ್ಮ ವಿಶ್ವಾಸರ್ಹತೆಯನ್ನು ಕಾಪಾಡಿಕೊಳ್ಳಲು ಈ ಪ್ರಕರಣದ ತನಿಖೆಯನ್ನು ಏಕೆ ಆರಂಭಿಸುತ್ತಿಲ್ಲ’ ಎಂದು ಪ್ರಶ್ನಿಸಿದರು.
ವಿಶ್ವದ ಅತ್ಯಂತ ಭ್ರಷ್ಟ ಕುಟುಂಬ:
ಅದಾನಿ ಗ್ರೂಪ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಟೀಕೆ ಮಾಡಿದ ಬೆನ್ನಲ್ಲೇ ಅವರ ವಿರುದ್ಧ ಬಿಜೆಪಿ ಮುಗಿಬಿದ್ದಿದೆ. ಈ ಬಗ್ಗೆ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ “ವಿಶ್ವದಲ್ಲೇ ಗಾಂಧಿ ಕುಟುಂಬವು ಅತ್ಯಂತ ಭ್ರಷ್ಟ ಕುಟುಂಬವಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸ್ವತಃ ರಾಹುಲ್ ಗಾಂಧಿ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ತಮ್ಮ ಭಾವ ರಾಬರ್ಟ್ ವಾದ್ರಾ ಅವರ ವಿರುದ್ಧದ ಆರೋಪಗಳ ಕುರಿತು ಅವರು ಎಂದೂ ಮಾತನಾಡುವುದಿಲ್ಲ’ ಎಂದು ಟೀಕಿಸಿದರು. ಅದಾನಿ ಗ್ರೂಪ್ ವಿರುದ್ಧದ ಕೇಸು ಇನ್ನೂ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ ಎಂದರು.
ಶರದ್ ಪ್ರಧಾನಿಯಲ್ಲ…
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಉದ್ಯಮಿ ಗೌತಮ್ ಅದಾನಿಯವರನ್ನು ಯಾಕೆ ಭೇಟಿ ಮಾಡಿದ್ದರು ಎಂಬುದನ್ನು ಪ್ರಶ್ನಿಸಿಲ್ಲ ಎಂದು ರಾಹುಲ್ ಹೇಳಿದ್ದಾರೆ. “ಶರದ್ ಪವಾರ್ ಪ್ರಧಾನಿ ಅಲ್ಲ. ಹೀಗಾಗಿ, ಅವರು ಅದಾನಿಯವರನ್ನು ಭೇಟಿ ಮಾಡುವುದರಲ್ಲಿ ತಪ್ಪು ಇಲ್ಲ. ಪವಾರ್ ಅವರು ಅದಾನಿಯವರನ್ನು ರಕ್ಷಿಸುತ್ತಿಲ್ಲ. ಆದರೆ, ಮೋದಿಯವರು ಅವರನ್ನು ಬೆಂಬಲಿಸಿ, ರಕ್ಷಿಸುತ್ತಿದ್ದಾರೆ’ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.