Politics: 2024ರಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ: ಎಚ್ಡಿಕೆ
ಆಂತರಿಕ ಕಚ್ಚಾಟದಿಂದ ಸರಕಾರ ಪತನವಾಗಲಿದೆ ಎಂದ ಮಾಜಿ ಸಿಎಂ
Team Udayavani, Oct 8, 2023, 11:00 PM IST
ರಾಮನಗರ: ಮುಂದಿನ ವರ್ಷ ರಾಜ್ಯದಲ್ಲಿ ಮತ್ತೆ ವಿಧಾನಸಭಾ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ “ಆ ವ್ಯಕ್ತಿ’ ಅಭ್ಯರ್ಥಿಯಾಗುವುದೇ ಅನುಮಾನ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ಧಾಳಿ ನಡೆಸಿದರು. ಬಿಡದಿ ಸಮೀಪದ ಕೇತಗಾನಹಳ್ಳಿಯ ತಮ್ಮ ತೋಟದಲ್ಲಿ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಈ ಸರಕಾರದ ಪಾಪದ ಕೊಡ ತುಂಬುತ್ತಿದೆ. ಆಂತರಿಕ ಕಚ್ಚಾಟದಿಂದ ಸರಕಾರ ಬಿದ್ದು ಹೋಗಲಿದೆ ಎಂದು ಹೇಳಿದರು.
ತಿಹಾರ್ ಜೈಲೇ ಶಾಶ್ವತ
ನಮ್ಮನ್ನು ಅವರು ಓಡಿಸಿದರೆ ಹಾಸನಕ್ಕೆ ಓಡಿಸಬಹುದು. ಆದರೆ ಅವರು ಒಮ್ಮೆ ತಿಹಾರ್ ಜೈಲನ್ನು ನೋಡಿ ಬಂದಿದ್ದಾರೆ. ಮುಂದೆ ಖಾಯಂ ಆಗಿ ಅಲ್ಲಿಗೆ ಹೋದರೂ ಅಚ್ಚರಿ ಇಲ್ಲ. ಅವರು ತಿಹಾರ್ ಜೈಲಿಗೆ ಓಡುವ ಕಾಲ ಹತ್ತಿರದಲ್ಲಿದೆ. ಜೀವನದಲ್ಲಿ ಎಂದೂ ಅವರ ಜತೆ ನಾನು ರಾಜಿ ಆಗಿಲ್ಲ. ಒಮ್ಮೆ ಅವರ ಜತೆ ಸರಕಾರ ಮಾಡಿ ಈಗಲೂ ನೋವು ಅನುಭವಿಸುತ್ತಾ ಇದ್ದೇನೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ಧಾಳಿ ನಡೆಸಿದರು.
ನನ್ನ ಸರ್ಕಾರ ಬೀಳಲು ಡಿಕೆಶಿ ಕಾರಣ
2018ರಲ್ಲಿ ಸರಕಾರ ಹೋಗಿದ್ದು ಡಿ.ಕೆ.ಶಿವಕುಮಾರ್ ಅವರಿಂದಲೇ. ರಮೇಶ್ ಜಾರಕಿಹೊಳಿಗೂ ಡಿ.ಕೆ.ಶಿವಕುಮಾರ್‌ಗೂ ವೈಷಮ್ಯ ಇತ್ತು. ನನಗೂ ಅವರಿಗೂ ಇರಲಿಲ್ಲ. ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ. ಅವರು ಬೆಳಗಾವಿ ರಾಜಕಾರಣಕ್ಕೆ ಕೈ ಹಾಕಿದ್ದು ಯಾಕೆ ಎಂದು ಪ್ರಶ್ನಿಸಿದ ಎಚ್‌ಡಿಕೆ, ಎಲ್ಲವನ್ನೂ ಮಾಡಿ ಹೊರಗೆ ನಾನು ಕುಮಾರಣ್ಣನ ಸರಕಾರ ಉಳಿಸೋಕೆ ಪ್ರಯತ್ನಪಟ್ಟೆ ಎಂದು ಮೊಸಳೆ ಕಣ್ಣೀರು ಹಾಕಿದರು ಎಂದು ವಾಗ್ಧಾಳಿ ನಡೆಸಿದರು.
ಮೈತ್ರಿ ಕೂಟ ಗೆಲ್ಲಿಸೋಣ
ಬೆಂಗಳೂರು ಗ್ರಾಮಾಂತರದಲ್ಲಿ ಮೈತ್ರಿ ಅಭ್ಯರ್ಥಿ ಯಾರೇ ಆದರೂ ಅವರ ಗೆಲುವಿಗೆ ಶ್ರಮಿಸೋಣ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ 2ರಿಂದ 3 ಲಕ್ಷ ಮತಗಳ ಅಂತರದಿಂದ ಗೆಲ್ಲಬೇಕು. ಈ ಮೂಲಕ ಮೈತ್ರಿ ಬಗ್ಗೆ ಇಡೀ ರಾಜ್ಯಕ್ಕೆ ಒಳ್ಳೆಯ ಸಂದೇಶ ನೀಡಬೇಕು ಎಂದರು.
ಇನ್ನೆರಡು ತಿಂಗಳಲ್ಲಿ ಸರಕಾರ ಪತನ: ಯೋಗೇಶ್ವರ್
ಚನ್ನಪಟ್ಟಣ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರವು ಇನ್ನೆರಡು ತಿಂಗಳಲ್ಲಿ ಬೀಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದರು. ಪಟ್ಟಣದ ಎಲ್.ಎನ್. ಕಲ್ಯಾಣ ಮಂಟಪದಲ್ಲಿ ರವಿವಾರ ಹಮ್ಮಿಕೊಂಡಿದ್ದ ಚನ್ನಪಟ್ಟಣ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ. ನಾನೇ ಸೂಪರ್ ಸಿಎಂ ಎಂದು ಡಿ.ಕೆ.ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಪಕ್ಕಕ್ಕೆ ಸರಿಸಿದ್ದಾರೆ. ಡಿಕೆ ಸಹೋದರರು ಕೇವಲ ಮಾತಿಗೆ ಸೀಮಿತವಾಗಿದ್ದಾರೆ. ಗ್ಯಾರಂಟಿ ಯೋಜನೆಗೆ ಸೀಮಿತವಾಗಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಹೇಳಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಸ್ವಪ್ರತಿಷ್ಠೆಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಿದೆ. ಈಗ ದೊಡ್ಡ ನಾಯಕರು ಕಮಲ-ದಳ ಮೈತ್ರಿ ಮಾಡಿದ್ದಾರೆ. ತಳಮಟ್ಟದ ಕಾರ್ಯಕರ್ತರೂ ಹೊಂದಾಣಿಕೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ-ಜೆಡಿಎಸ್ ಮೈತ್ರಿಗೆ ಶಾಸಕ ಎಸ್.ಟಿ.ಸೋಮಶೇಖರ್ ವಿರೋಧ ವಿಚಾರವಾಗಿ ಮಾತನಾಡಿದ ಯೋಗೇಶ್ವರ್, ಎಸ್.ಟಿ.ಸೋಮಶೇಖರ್ ಬಿಜೆಪಿಯಲ್ಲಿ ದೊಡ್ಡ ಫಲಾನುಭವಿಯಾಗಿದ್ದಾರೆ. ಬಿಜೆಪಿಗೆ ಬಂದಮೇಲೆ ಬಿಡಿಎ ಅಧ್ಯಕ್ಷ ಆದ್ರು, ಮಂತ್ರಿ ಆಗಿ ಪ್ರಬಲ ಖಾತೆ ಪಡೆದರು, ಅಧಿಕಾರ ಅನುಭವಿಸಿದರು. ಇವತ್ತು ಅಧಿಕಾರ ಇಲ್ಲ ಅಂತ ಹೀಗೆ ಮಾತನಾಡುತ್ತಾರೆ. ಒಂದು ವೇಳೆ ಪಕ್ಷದಿಂದ ಹೊರಹೋಗುವ ತೀರ್ಮಾನ ಮಾಡಿದರೆ ನಮ್ಮ ವಿರೋಧ ಇಲ್ಲ. ಸ್ವಾಗತಿಸುತ್ತೇವೆ ಎಂದರು.
ಶಾಮನೂರು ಶಿವಶಂಕರಪ್ಪ ಅವರು ತಮ್ಮ ಅಭಿಪ್ರಾಯವನ್ನು ಧೈರ್ಯವಾಗಿ ಹೇಳಿದ್ದಾರೆ. ಇಲ್ಲಿ ಸಂಖ್ಯೆಗಿಂತ ಇಲಾಖೆಯಲ್ಲಿ ಯಾವ್ಯಾವ ಅ ಧಿಕಾರಿಗೆ ಯಾವ ಇಲಾಖೆ ಕೊಟ್ಟಿದ್ದಾರೆ ಎಂಬುದು ಮುಖ್ಯ. ಕೆಲಸಕ್ಕೆ ಬಾರದ ಜಾಗ ಕೊಟ್ಟು, ಇಂತಹ ಸಮುದಾಯಕ್ಕೆ ಇಷ್ಟು ಸಂಖ್ಯೆ ಕೊಟ್ಟಿದ್ದೇವೆ ಎಂದರೆ ಅದರಿಂದ ಏನು ಉಪಯೋಗ?
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ
ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ-ಜೆಡಿಎಸ್ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಮೈತ್ರಿ ಮಾಡಿಕೊಂಡಿವೆ. ಮುಂದಿನ ಚುನಾವಣೆಗೆ ಬಿಜೆಪಿ, ಜೆಡಿಎಸ್ ಜತೆಗೂಡಿ ಕೆಲಸ ಮಾಡ
ಬೇಕು. ತಮ್ಮಲ್ಲಿರುವ ಎಲ್ಲ ಭಿನ್ನಾಭಿಪ್ರಾಯಗಳನ್ನು ಬದುಗೊತ್ತಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘ ಟನೆ ಮಾಡಿ. ಯಾರಿಗೂ ಭಯಪಡುವ ಅಗತ್ಯವಿಲ್ಲ. ನಿಮ್ಮ ಜತೆಗೆ ನಾವಿದ್ದೇವೆ.
-ಸಿ.ಟಿ.ರವಿ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.