Politics: ಹೊಸದಿಲ್ಲಿಯಲ್ಲಿ ಸಿಎಂ, ಡಿಸಿಎಂ, ಸುರ್ಜೇವಾಲಾ ಸಮಾಲೋಚನೆ
ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಸಿರುವ ಪಟ್ಟಿ ಬಗ್ಗೆ ಪರಾಮರ್ಶೆ
Team Udayavani, Dec 20, 2023, 12:23 AM IST
ಬೆಂಗಳೂರು: ನಿಗಮ, ಮಂಡಳಿಗಳ ನೇಮಕಾತಿ ಸಂಬಂಧ ದಿಲ್ಲಿಯಲ್ಲಿ ತ್ರಿಮೂರ್ತಿಗಳು ಮಹತ್ವದ ಸಭೆ ನಡೆಸಿದರು.
ಭಾನುವಾರ ರಾತ್ರಿಯೇ ದಿಲ್ಲಿ ತಲುಪಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ತಡರಾತ್ರಿವರೆಗೂ ಸಭೆ ನಡೆಸಿ ಪಕ್ಷದ ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರನ್ನು ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸುವ ಸಂಬಂಧ ಸಮಾಲೋಚನೆ ನಡೆಸಿದರು. ಆದರೆ ಸಭೆಯ ವಿವರಗಳು ಲಭ್ಯವಾಗಿಲ್ಲ.
ಮೂರು ಸುತ್ತಿನ ಸಭೆ ನಡೆಸಿ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಸಿರುವ ಪಟ್ಟಿ ಬಗ್ಗೆ ಮತ್ತೂಮ್ಮೆ ಪರಾಮರ್ಶೆ ನಡೆಸಿ ಸಣ್ಣಪುಟ್ಟ ಬದಲಾವಣೆ ಬಗ್ಗೆಯೂ ಚರ್ಚಿಸಿದರೆಂದು ತಿಳಿದುಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಅಂತಿಮ ಸುತ್ತಿನ ಸಭೆ ನಡೆಸಿ ಪಟ್ಟಿಗೆ ಅನುಮೋದನೆ ಪಡೆಯಬೇಕಾಗಿತ್ತು. ಆದರೆ ಖರ್ಗೆ ಅವರು ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಂಡಿದ್ದರಿಂದ ಅವರೊಂದಿಗೆ ಸಭೆ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮೂವರ ಸಭೆ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಕೆಪಿಸಿಸಿ ಪುನಾರಚನೆ ಕುರಿತಂತೆಯೂ ಚರ್ಚೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ.
ಸಿಎಂ, ಡಿಸಿಎಂ ದಿಲ್ಲಿ ಪ್ರವಾಸಕ್ಕೆ ಬಿಜೆಪಿ ವ್ಯಂಗ್ಯ
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ಪ್ರವಾಸದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ವ್ಯಂಗ್ಯಚಿತ್ರದ ಮೂಲಕ ಟೀಕೆ ನಡೆಸಿದೆ. ಕಲೆಕ್ಷನ್ ಹಣವನ್ನು ದಿಲ್ಲಿಗೆ ಒಪ್ಪಿಸಲು ವಾಮಮಾರ್ಗವನ್ನು ಹುಡುಕಿಕೊಂಡ ನಾಡದ್ರೋಹ ಕಾಂಗ್ರೆಸ್ ಸರಕಾರ ಎಂದು ಆರೋಪಿಸಿದೆ. ಯಾವಾಗಲೂ ಸುಜೇìವಾಲಾ ಬೆಂಗಳೂರಿಗೆ ಬಂದರೆ ಸಂಶಯ ಬರುತ್ತದೆ. ಹೀಗಾಗಿ ಈ ಬಾರಿ ನಾವೇ ಹೋಗಿ ಹೈಕಮಾಂಡ್‌ಗೆ ಕಪ್ಪ ಒಪ್ಪಿಸೋಣ ಎಂಬ ಸಿಎಂ ಸಿದ್ದರಾಮಯ್ಯ ಸಲಹೆಗೆ ಡಿ.ಕೆ. ಶಿವಕುಮಾರ್, ಗುಡ್ ಐಡಿಯಾ ಎಂದು ಹೇಳುವ ವ್ಯಂಗ್ಯಚಿತ್ರವನ್ನು “ಎಕ್ಸ್” ಜಾಲತಾಣದಲ್ಲಿ ಬಿಜೆಪಿ ಹಂಚಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.