Politics: ಕಾಂಗ್ರೆಸ್‌ನದ್ದು ವಿದೇಶಿ ಜೀನ್ಸ್: JDS ಟೀಕೆ
ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ ಎಂದು ಟೀಕೆ
Team Udayavani, Dec 24, 2023, 9:58 PM IST
ಬೆಂಗಳೂರು: ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ, ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ. ಅದರ, ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುವುದಿಲ್ಲ. ಇದೇನು ಹೊಸತಲ್ಲ ಎಂದು ಜೆಡಿಎಸ್, ಕಾಂಗ್ರೆಸ್ ಪಕ್ಷವನ್ನು ಕಟುವಾಗಿ ಟೀಕಿಸಿದೆ.
ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ನೀಡಿದ ಭೇಟಿಯ ಬಗ್ಗೆ ಕಾಂಗ್ರೆಸ್ ಟೀಕೆಗಳಿಗೆ ಪ್ರತಿಕ್ರಿಯಿಸಿ “ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಜೆಡಿಎಸ್, ಕಲುಷಿತ ಮನಸ್ಸಿನ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ. ಎಚ್.ಡಿ.ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ ಎಂದು ಹೇಳಿದೆ.
ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು, ಅಲ್ಲಿನ ಶೈಕ್ಷಣಿಕ ವಾತಾವರಣ, ಮಕ್ಕಳ ಶಿಸ್ತು, ದೇಶಪ್ರೇಮವನ್ನು ಕಣ್ಣಾರೆ ಕಂಡ ಅವರ ಮನಸ್ಸಿನಲ್ಲಿ ಪರಿವರ್ತನೆ ಆಗಿದ್ದರೆ, ಅದೇನು ಮಹಾ ಅಪರಾಧವೇ? ಎಂದು ಜೆಡಿಎಸ್ ಪ್ರಶ್ನಿಸಿದೆ.
ಪರಿವರ್ತನೆಯೇ ಜಗದ ನಿಯಮ, ಪ್ರತಿಗಾಮಿತನವೇ ಮಾರಣಹೋಮ. ತುಷ್ಠಿàಕರಣದ ಅಂಟುವ್ಯಾಧಿಯಿಂದ ಬಳಲುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮಾರಣಹೋಮದಲ್ಲಿಯೇ ನಂಬಿಕೆ ಎಂದು ಜೆಡಿಎಸ್ ಆರೋಪಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಜತೆ ರಾಜ್ಯದ ಅಭಿವೃದ್ಧಿಯ ಬಗ್ಗೆಯೇ ಕುಮಾರಸ್ವಾಮಿ ಅವರು ಚರ್ಚಿಸಿ¨ªಾರೆ. ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ ಚಟ. ಜಾತಿ, ಧರ್ಮಗಳನ್ನು ಒಡೆದು ದೇಶಕ್ಕೆ ಶಾಪವಾಗಿ, ಬೆದರಿಕೆಯಾಗಿರುವ ಪ್ರತಿಗಾಮಿ ಪಕ್ಷಕ್ಕೆ ಶಾಂತಿ, ಸೌಹಾರ್ದತೆ ಎಂದರೇನೇ ಅಪಥ್ಯ ಎಂದು ಜೆಡಿಎಸ್ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.