Politics: ಚಿತ್ರದುರ್ಗದಿಂದಲೇ ಮತ್ತೆ ಸ್ಪರ್ಧೆ: ನಾರಾಯಣ ಸ್ವಾಮಿ
Team Udayavani, Nov 4, 2023, 11:31 PM IST
ಚಿತ್ರದುರ್ಗ: ಮುಂದಿನ ಲೋಕಸಭೆ ಚುನಾವಣೆಗೆ ಚಿತ್ರದುರ್ಗ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ ಎಂದು ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎನ್ನುವ ಕೂಗಿಗೆ ನನ್ನ ವಿರೋಧವಿಲ್ಲ. ಈ ಅಭಿಪ್ರಾಯವನ್ನು ಗೌರವಿಸುತ್ತೇನೆ. ಇದು ಮತದಾರರ ಪ್ರಜ್ಞಾವಂತಿಕೆಯನ್ನು ತೋರಿಸುತ್ತದೆ. ಸ್ಥಳೀಯರಿಗೆ ಪಕ್ಷ ಅವಕಾಶ ನೀಡಿದರೆ ಬೆಂಬಲ ನೀಡುತ್ತೇನೆ ಎಂದರು.
ಕೋಲಾರದಲ್ಲಿ ಸ್ಪರ್ಧಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪಕ್ಷ ಹೇಳಿದರೂ ಕೋಲಾರಕ್ಕೆ ಹೋಗುವುದಿಲ್ಲ. 2019ರ ಲೋಕಸಭೆ ಚುನಾವಣೆಗೆ ಚಿತ್ರದುರ್ಗಕ್ಕೆ ಬಂದಾಗ ಅನೇಕರು ನನ್ನ ಮುಖವನ್ನೇ ನೋಡಿರಲಿಲ್ಲ. ಆದರೂ ಈ ಕ್ಷೇತ್ರದ ಜನತೆ ಮತ ನೀಡಿ ಗೆಲ್ಲಿಸಿದ್ದಾರೆ. ಅವರ ವಿಶ್ವಾಸ ಉಳಿಸಿಕೊಳ್ಳುವುದಷ್ಟೇ ಮುಖ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.