ಮಿಂಟೋ ಆಸ್ಪತ್ರೆ ಪ್ರಕರಣದಲ್ಲಿ ರಾಜಕೀಯ ನಡೆಯುವುದಿಲ್ಲ: ಡಾ. ಅಶ್ವತ್ಥನಾರಾಯಣ
Team Udayavani, Nov 5, 2019, 3:12 PM IST
ಬೆಂಗಳೂರು: ಮಿಂಟೋ ಆಸ್ಪತ್ರೆ ಮುಷ್ಕರ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸುವ ಪ್ರಯತ್ನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಂಗಳವಾರ ಹೇಳಿದ್ದಾರೆ.
“ಮಿಂಟೋ ಆಸ್ಪತ್ರೆಯಲ್ಲಿ ಕಳೆದ ಜುಲೈ ತಿಂಗಳಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಆದ ತಪ್ಪಿನಿಂದ ಕಣ್ಣು ಕಳೆದುಕೊಂಡವರು ಹಾಗೂ ಸಂತ್ರಸ್ತರ ಪರ ನಡೆದ ಹೋರಾಟದ ವೇಳೆ ವೈದ್ಯರ ಮೇಲೆ ನಡೆದ ಹಲ್ಲೆ ಪ್ರಕರಣದ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು. ಇಬ್ಬರಿಗೂ ನ್ಯಾಯ ಒದಗಿಸುವುದು ನಮ್ಮ ಜವಾಬ್ದಾರಿ. ಸರ್ಕಾರ ಇರುವುದೇ ಸಮಾಜ ಮತ್ತು ನಾಗರಿಕರಿಗಾಗಿ,” ಎಂದು ಮಾಧ್ಯಮದವರ ಜತೆ ಮಾತನಾಡುತ್ತಾ ಸಚಿವರು ತಿಳಿಸಿದ್ದಾರೆ.
ಡಾ. ರವಿ ಎನ್ನುವವರು ಪ್ರತಿಭಟನೆಗೆ ಕುಮ್ಮುಕ್ಕು ನೀಡುತ್ತಿದ್ದಾರೆ ಎಂಬ ಆರೋಪ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು,” ಇಂಥ ಸೂಕ್ಷ್ಮ ಸಂದರ್ಭಗಳನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುವವರು ಇರುತ್ತಾರೆ. ಈ ರೀತಿ ತಮ್ಮ ಬೇಳೆ ಬೇಯಿಸಿಕೊಳ್ಳುವವರಿಗೆ ಒಂದೊಂದು ರೀತಿಯ ಒಲವು ಇರುತ್ತದೆ. ತಮ್ಮ ಸ್ಥಾನದ ದುರ್ಬಳಕೆ ಮಾಡಿಕೊಳ್ಳುವ ಜನ ಇರುತ್ತಾರೆ. ಅಂಥ ಮಹಾನುಭಾವರ ಪ್ರಚೋದನೆಗೆ ಒಳಗಾಗಬಾರದೆಂದು ಎಲ್ಲ ವೈದ್ಯ ಸ್ನೇಹಿತರು ಹಾಗೂ ಹೋರಾಟಗಾರರಲ್ಲಿ ಮನವಿ ಮಾಡುತ್ತೇನೆ,” ಎಂದಿದ್ದಾರೆ.
“ಎಲ್ಲರೂ ಕಾನೂನನ್ನು ಕೈಗೆ ತಗೆದುಕೊಂಡರೆ ವ್ಯವಸ್ಥೆ ನಿಯಂತ್ರಣ ಹೇಗೆ ಸಾಧ್ಯ ? ಹೋರಾಟಗಾರರು ಅಥವಾ ವೈದ್ಯರು. ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಎಲ್ಲರೂ ಅವರವರ ಕೆಲಸ ಮಾಡಿದರೆ ಯಾರಿಗೂ ತೊಂದರೆ ಆಗದು. ಯಾವುದೇ ಕಾರಣಕ್ಕೂ ಅಮಾಯಕರಿಗೆ ತೊಂದರೆ ಆಗಬಾರದು. ಸಾಮಾನ್ಯ ಜನರು ಇವರ ಆಟಕ್ಕೆ ಬಲಿಪಶು ಆಗಬಾರದು. ಈ ವಿಚಾರದಲ್ಲಿ ರಾಜಕೀಯ ಬೇಡ. ಈ ಎಲ್ಲ ಸಮಸ್ಯೆಗೆ ತಾರ್ಕಿಕ ಅಂತ್ಯ ಕಾಣಿಸುವ ಪ್ರಯತ್ನ ನಡೆಯುವುದು,”ಎಂದು ಅವರು ಭರವಸೆ ನೀಡಿದರು.
ಇನ್ನು ಮುಂದೆ ಇಂಥ ಪ್ರಕರಣಗಳು ಮರುಕಳಿಸದಂತೆ ಯಾವ ಕ್ರಮ ಕೈಗೊಳ್ಳಲಾಗುವುದು ಎಂಬ ಪ್ರಶ್ನೆಗೆ ವಿವರಣೆ ನೀಡಿದ ಸಚಿವರು,”. ವೈದ್ಯರು ಹಲವಾರು ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದ್ದಾರೆ. ವೈದ್ಯರ ಹಿತಾಸಕ್ತಿ ಕಾಯುವಂಥ ಕಾನೂನುನ್ನು ಈ ಹಿಂದೆಯೇ ಪರಿಚಯಿಸಲಾಗಿದೆ. ಕಾನೂನು, ವ್ಯವಸ್ಥೆ, ಸಮಾಜದ ಬಗ್ಗೆ ವೈದ್ಯರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಕೇಂದ್ರ ಅಥವಾ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ನಿಯೋಜಿಸುವ ಪ್ರಸ್ತಾವನೆಯೂ ಸರ್ಕಾರದ ಮುಂದಿದೆ. ವೈದ್ಯರ ರಕ್ಷಣೆಗೆ ಕೃತಕ ಬುದ್ಧಿಮತ್ತೆ, ಆಧುನಿಕ ತಂತ್ರಜ್ಞಾನ ಅನುಸರಿಸಲಾಗುವುದು. ತುರ್ತು ಪರಿಸ್ಥಿತಿ ನಿಭಾಯಿಸಲು ಆಂತರಿಕ ಪಡೆ, ಪೊಲೀಸ್ ಹಾಗೂ ಮೀಸಲು ಪಡೆ ಸ್ಥಳಕ್ಕೆ ಧಾವಿಸುವ ವ್ಯವಸ್ಥೆ ಕಲ್ಪಿಸಲಾಗುವುದು. ಬೆಂಗಳೂರು ಮಾತ್ರ ಅಲ್ಲ ರಾಜ್ಯದ ಎಲ್ಲ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗುವುದು,” ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.