ಅಂತಾರಾಜ್ಯ ಸಂಚಾರ ಆರಂಭದ ಸಾಧ್ಯತೆ
Team Udayavani, May 1, 2020, 6:05 AM IST
ಉಡುಪಿ: ಅಂತಾರಾಜ್ಯ ಸಂಚಾರ ಆರಂಭವಾಗುವ ಲಕ್ಷಣಗಳಿದ್ದು ಅದನ್ನು ಹೇಗೆ ನಿರ್ವಹಿಸಬಹುದು ಎಂದು ಜಿಲ್ಲಾಡಳಿತ ಚಿಂತನ ಮಂಥನ ನಡೆಸಿದೆ.
ಜಿಲ್ಲೆಯಲ್ಲಿರುವ ಹೊರ ರಾಜ್ಯದ ಕಾರ್ಮಿಕರ ವಿವರಗಳನ್ನು ಸಂಗ್ರಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಹೊರರಾಜ್ಯದವರು ಉಡುಪಿ ಜಿಲ್ಲೆಗೆ ಆಗಮಿಸಬೇಕಾದರೆ ಅವರು ಆ ರಾಜ್ಯ ಸರಕಾರದ ನಿರ್ದೇಶನ ಅನುಸಾರ ಬರಬೇಕಾಗುತ್ತದೆ. ಇಂತಹವರು ಬಂದಾಗ ಅವರನ್ನು ಹೇಗೆ ಪರೀಕ್ಷಿಸಬಹುದು? ಚೆಕ್‌ಪೋಸ್ಟ್ ಕ್ರಮ ಹೇಗೆ? ಕ್ವಾರಂಟೈನ್ ಮಾಡುವುದಾದರೆ ಎಲ್ಲಿ ಮಾಡಬಹುದು ಎಂಬಿತ್ಯಾದಿ ಪ್ರಾಥಮಿಕ ಚರ್ಚೆಗಳು ನಡೆದಿವೆ.
ರಾಜ್ಯ ಮಟ್ಟದಲ್ಲಿ ರಾಜ್ಯಕ್ಕೆ ಬರುವವರು ಮತ್ತು ಹೋಗುವವರ ನಿರ್ವಹಣೆಗಾಗಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ. ಹೊರ ದೇಶದವರ ಆಗಮನಕ್ಕೆ ಕೇಂದ್ರ ಸರಕಾರ ಮಾರ್ಗದರ್ಶಿ ಸೂತ್ರಗಳನ್ನು ಕೊಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಶುಕ್ರವಾರ ಬ್ರಹ್ಮಾವರ, ಉಡುಪಿ, ಕಾರ್ಕಳ, ಕುಂದಾಪುರ, ಕಾಪುವಿನಿಂದ ತಲಾ ಐದು ಬಸ್‌ಗಳಲ್ಲಿ ಹೊರ ಜಿಲ್ಲೆಗಳಿಗೆ ತೆರಳಬೇಕಾದ ವಲಸೆ ಕಾರ್ಮಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಇದುವರೆಗೆ ಜಿಲ್ಲಾಡಳಿತವೇ ಈ ಖರ್ಚನ್ನು ಭರಿಸಿದರೆ, ಮುಂದೆ ಪ್ರಯಾಣಿಕರಿಂದಲೇ ಭರಿಸುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿದೆ. ಬಸ್‌ನ ಸಾಮರ್ಥ್ಯದ ಶೇ. 40ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಲು ಸೂಚಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.