ಕೋಳಿ ಮಾಂಸ, ಮೊಟ್ಟೆ ಸುರಕ್ಷಿತ: ಪ್ರಭು ಚವ್ಹಾಣ್
Team Udayavani, Mar 4, 2020, 3:07 AM IST
ಬೆಂಗಳೂರು: ಕೊರೊನಾ ವೈರಸ್ ಸೋಂಕು ಕೋಳಿ ಗಳಿಂದ ಹರಡುತ್ತದೆ ಎಂಬ ವದಂತಿ, ತಪ್ಪು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವದಂತಿಗೆ ಯಾವುದೇ ವೈಜ್ಞಾನಿಕ ಆಧಾರ ಇರುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನಮ್ಮ ದೇಶದಲ್ಲಿ ಕೋಳಿಗಳಿಗೆ ಕೊರೊನಾ ವೈರಾಣು ಸೋಂಕು ಕಾಣಿಸಿಕೊಂಡ ಬಗ್ಗೆ ಇದುವರೆಗೆ ಯಾವುದೇ ವರದಿಗಳಿಲ್ಲ ಹಾಗೂ ಈ ವೈರಾಣು ಸೋಂಕು ಹರಡುವಿಕೆಯಲ್ಲಿ ಕೋಳಿಗಳ ಪಾತ್ರವೇನೂ ಇಲ್ಲ. ಸೋಂಕು ಪೀಡಿತ ಮನುಷ್ಯರ ಸಂಪರ್ಕದಿಂದ ಮಾತ್ರ ಈ ಸೋಂಕು ಇತರರಿಗೆ ಹರಡುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯಿಂದಾಗಿ ಕುಕ್ಕುಟ ಉದ್ಯಮಕ್ಕೆ ಪೆಟ್ಟು ಬೀಳುತ್ತಿದೆ. ಸಾಮಾನ್ಯವಾಗಿ ಕೋಳಿ ಮಾಂಸವನ್ನು 100 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯಲ್ಲಿ ಬೇಯಿಸಲಾಗುತ್ತದೆ. ಈ ಉಷ್ಣತೆಯಲ್ಲಿ ಯಾವುದೇ ವೈರಾಣುಗಳು ಬದುಕುಳಿ ಯಲು ಸಾಧ್ಯವಿಲ್ಲ. ಆದ್ದರಿಂದ, ಸಾರ್ವಜನಿಕರು ಕೊರೊನಾ ವೈರಾಣು ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿಗಳಿಗೆ ಕಿವಿ ಕೊಡಬಾರದು.
ಈ ರೀತಿಯ ವಂದತಿಗಳನ್ನು ಹರಡುವುದರಿಂದ ಸಾರ್ವಜನಿಕರಿಗೆ ಉತ್ತಮ ಪೌಷ್ಟಿಕಾಂಶ ನೀಡುವ ಕೋಳಿ ಮಾಂಸ ಮತ್ತು ಮೊಟ್ಟೆ ಸೇವನೆಯಿಂದ ದೊರಕುವ ಪೋಷಕಾಂಶಗಳ ಕೊರತೆ ಎದುರಾಗುತ್ತದೆ. ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಬಾಣಂತಿಯರು ಪೋಷ ಕಾಂಶ ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ವದಂತಿಗಳು ಸಾಮಾಜಿಕ ಆಹಾರ ಸ್ವಾಸ್ಥ್ಯವನ್ನು ಮತ್ತಷ್ಟು ಹದಗೆಡಿಸುತ್ತವೆ.
ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಕೋಳಿ ಮಾಂಸ ಮತ್ತು ಮೊಟ್ಟೆ ದೇಹಕ್ಕೆ ಉತ್ತಮ ಪ್ರೋಟಿನ್ ಪೂರೈಸುವ ಆಹಾರವಾಗಿವೆ. ಯಾರೂ ಇಂತಹ ವದಂತಿಗಳನ್ನು ಹರಡಬಾರದು ಎಂದು ಮನವಿ ಮಾಡಿ ದ್ದಾರೆ. ಅಲ್ಲದೇ ಯಾವುದೇ ಸಂದೇಹಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ 080 23418075, 080 23416431, ಸಹಾಯವಾಣಿ :1800 425 012, 080 23417100. ಸಂಪರ್ಕಿಸಲು ಕೋರಿದ್ದಾರೆ.
ಸಚಿವರಿಂದ ರಕ್ತ ಪರೀಕ್ಷಾ ಕೇಂದ್ರ ಪರಿಶೀಲನೆ
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ಆವರಣದ ಕೊರೊನಾ ಸೋಂಕು ಪರೀಕ್ಷಾ ಕೇಂದ್ರಕ್ಕೆ ಮಂಗಳವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ಪರೀಕ್ಷೆ ಸೌಲಭ್ಯವಿರದ ಕಾರಣ ಆರಂಭದ ದಿನಗಳಲ್ಲಿ ರಕ್ತದ ಮಾದರಿಯನ್ನು ಪುಣೆಯ ಎನ್‌ಐವಿ ಕೇಂದ್ರಕ್ಕೆ ಪರೀಕ್ಷೆಗೆಂದು ಕಳುಹಿಸಲಾಗುತ್ತಿತ್ತು.
ಇತ್ತೀಚೆಗೆ ಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆ ಹಾಗೂ ರಾಜೀವ್‌ಗಾಂಧಿ ಆಸ್ಪತ್ರೆ ಬಳಿಯ ಎನ್‌ಐವಿ ಕೇಂದ್ರ ಬಳಿ ಕೊರೊನಾ ಸೋಂಕು ರಕ್ತದ ಮಾದರಿ ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಒಂದು ದಿನದಲ್ಲಿ 88 ಜನರ ರಕ್ತ ಮಾದರಿ ಪರೀಕ್ಷೆಯನ್ನು ಇಲ್ಲಿ ಮಾಡಬಹುದಾಗಿದೆ. ಯಾರಿಗಾದರೂ ಸೋಂಕಿನ ಲಕ್ಷಣಗಳಾಗಲಿ ಅಥವಾ ಅನುಮಾನವಿದ್ದಲ್ಲಿ ಇಲ್ಲಿ ಬಂದು ರಕ್ತ ಮಾದರಿ ಪರೀಕ್ಷೆ ಮಾಡಿಸಿಕೊಳ್ಳಬಹುದು. ಇದುವರೆಗೆ 35 ರಕ್ತ ಮಾದರಿ ಪರೀಕ್ಷೆ ನಡೆಸಲಾಗಿದ್ದು ಎಲ್ಲವೂ ನೆಗೆಟಿವ್ ಬಂದಿದೆ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.