ಕಾಲುಬಾಯಿ ರೋಗ ನಿಯಂತ್ರಣಕ್ಕೆ ಲಸಿಕೆಯೇ ಮಾರ್ಗ: ಪ್ರಭು ಚವ್ಹಾಣ್
Team Udayavani, Nov 21, 2022, 5:21 PM IST
ಬೆಂಗಳೂರು: ಕಾಲುಬಾಯಿ ರೋಗ ನಿಯಂತ್ರಿಸಲು ಜಾನುವಾರುಗಳಿಗೆ ಲಸಿಕೆ ಹಾಕಿಸುವುದೊಂದೇ ಏಕೈಕ ಮಾರ್ಗವಾಗಿದೆ. ಈವರೆಗೂ ರಾಜ್ಯಾದಾದ್ಯಂತ 31 ಲಕ್ಷಕ್ಕೂ ಹೆಚ್ಚು ರಾಸುಗಳಿಗೆ ಲಸಿಕೆ ಹಾಕಲಾಗಿದೆ ಎಂದು ಪ್ರಭು ಬಿ.ಚವ್ಹಾಣ್ ಸ್ವಷ್ಟಪಡಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಲುಬಾಯಿ ರೋಗದ ವಿರುದ್ಧ ಪ್ರತಿ ಆರು ತಿಂಗಳಿಗೊಮ್ಮೆ ಲಸಿಕೆ ಕೊಡಿಸಿ ರೋಗ ಬರದಂತೆ ತಡೆಗಟ್ಟಬಹುದಾಗಿದೆ. ಜಾನುವಾರು ಸಾಕುತ್ತಿರುವ ಎಲ್ಲ ರೈತರು ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
84,51,740 ರಾಸುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಈವರೆಗೂ 31,74,880 ರಾಸುಗಳಿಗೆ ಕಾಲುರೋಗ ಲಸಿಕೆ ನೀಡಲಾಗಿದೆ. ಪ್ರತಿ ಜಿಲ್ಲೆ, ತಾಲ್ಲೂಕು ಮತ್ತು ಪ್ರತಿ ಪಶು ಆಸ್ಪತ್ರೆಗಳಲ್ಲಿ ಹಾಗೂ ಜಾನುವಾರುಗಳು ಇರುವ ಜಾಗಗಳಿಗೆ ತೆರಳಿ ಲಸಿಕೆ ಹಾಕಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
20ನೇ ಜಾನುವಾರು ಗಣತಿಯಂತೆ ರಾಜ್ಯಾದ್ಯಂತ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಲಸಿಕೆಯು ಸಂಪೂರ್ಣ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗೆ ಬಂದಾಗ ಸಹಕಾರ ನೀಡಿ ನಾಲ್ಕು ತಿಂಗಳು ಮೇಲ್ಪಟ್ಟ ಎಲ್ಲಾ ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಸಚಿವರು ಮನವಿ ಮಾಡಿದ್ದಾರೆ.
ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರುಗಳ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ನವೆಂಬರ್ 7ರಿಂದ ಡಿಸೆಂಬರ್ 7ರವರೆಗೆ ಒಂದು ತಿಂಗಳ ಕಾಲ ರಾಜ್ಯದಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ರಾಜ್ಯಾದ್ಯಂತ ಎಲ್ಲಾ ರೀತಿಯ ಜಾನುವಾರುಗಳಿಗೆ ಲಸಿಕೆ ಹಾಕಲಾಗುತ್ತಿದ್ದು, ಇದರ ಸದಪಯೋಗ ಪಡೆದು ಕೊಳ್ಳಬೇಕುವಂತೆ ಜಾನುವಾರು ಮಾಲೀಕರುಗಳಿಗೆ ಸಚಿವರು ಮನವಿ ಮಾಡಿದ್ದಾರೆ.
ಜಾನುವಾರುಗಳಿಗೆ ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು, ರೋಗದಿಂದ ಗುಣವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಕಾಲುಬಾಯಿ ರೋಗ ಹಾಲಿನ ಇಳುವರಿ ಕಡಿಮೆಯಾಗಲಿದ್ದು, ಗರ್ಭಪಾತ, ಗರ್ಭ ಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮಥ್ರ್ಯ ಕಡಿಮೆಯಾಗುತ್ತದೆ. ಆದ್ದರಿಂದ ರೈತರು ಸ್ವಯಂ ಪ್ರೇರಿತರಾಗಿ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಲು ಮುಂದಾಗಬೇಕೆಂದು ಸಚಿವ ಪ್ರಭು ಬಿ.ಚವ್ಹಾಣ್ ಕರೆ ನೀಡಿದ್ದಾರೆ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.