“ಆವಾಸ’ದ ಕನಸಿಗೆ ಸಾಕಾರದ ವಿಶ್ವಾಸ
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಮತ್ತಷ್ಟು ಒತ್ತು
Team Udayavani, Feb 2, 2023, 6:38 AM IST
“ಸ್ವಂತ ಮನೆ ಹೊಂದುವ ಕನಸು ಈಡೇರಿದರೆ ಸಾಕಪ್ಪ’ ಎಂದು ಹೇಳುವ ಅನೇಕರು ನಮ್ಮ ಸುತ್ತಮುತ್ತ ಸಿಗುತ್ತಾರೆ. ಅದರಲ್ಲೂ ಬಡ, ಮಧ್ಯಮ ವರ್ಗದವರಂತೂ ಈ ಕನಸನ್ನು ಸಾಕಾರಗೊಳಿಸಲು ಜೀವಮಾನವಿಡೀ ದುಡಿ ಯು ತ್ತಾರೆ. ಈ ವರ್ಗಕ್ಕೆ ನೆರವಾಗುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ “ಆವಾಸ್ ಯೋಜನೆ’ಯನ್ನು ಜಾರಿಗೆ ತಂದಿತ್ತು.
ಈಗ ಸರ್ಕಾರ “ಪ್ರಧಾನಮಂತ್ರಿ ಆವಾಸ್ ಯೋಜನೆ’ಗೆ ನೀಡಲಾಗುವ ಅನುದಾನವನ್ನು ಶೇ.66ರಷ್ಟು ಹೆಚ್ಚಿಸಿದ್ದು, 79,000 ಸಾವಿರ ಕೋಟಿ ರೂ.ಗೆ ಏರಿಸಿದೆ. 2022-23ರ ಆಯವ್ಯಯದಲ್ಲಿ ಈ ಯೋಜನೆಗೆ 48,000 ಸಾವಿರ ಕೋಟಿ ನೀಡಲಾಗಿತ್ತು.
ಶಾಶ್ವತ ಮನೆ ಇಲ್ಲದವರಿಗೆ ಮನೆ ಒದಗಿಸುವುದು ಹಾಗೂ ದೇಶದ ಎಲ್ಲಾ ಜನರು ಮನೆ ಹೊಂದಬೇಕೆಂಬುದು ಈ ಯೋಜನೆಯ ಉದ್ದೇಶವಾಗಿದೆ. ಇದುವರೆಗೆ ಈ ಯೋಜನೆಯಡಿ ಕೋಟ್ಯಂತರ ಜನರು ಲಾಭ ಪಡೆದಿದ್ದಾರೆ.
ಈ ಯೋಜನೆಯಡಿ ಗುಡ್ಡಗಾಡು ಪ್ರದೇಶದ ಫಲಾನು ಭವಿಗಳಿಗೆ 1.30 ಲಕ್ಷ ರೂ. ನೀಡಿದರೆ, ಬಯಲುಸೀಮೆಯ ವರಿಗೆ 1.20 ಲಕ್ಷ ರೂ. ನೀಡಲಾಗುತ್ತದೆ. ಈ ಯೋಜನೆಗೆ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು ಇನ್ನಿತರರನ್ನು ಪರಿಗಣಿಸಲಾಗುತ್ತದೆ.
ಮೂಲಸೌಕರ್ಯ ಅಭಿವೃದ್ಧಿ ನಿಧಿ: ಇದೇ ವೇಳೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮಾದರಿಯಲ್ಲೇ ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿಯನ್ನು ಸ್ಥಾಪಿಸುವುದಾಗಿಯೂ ಘೋಷಿಸಲಾಗಿದೆ. ಈ ನಿಧಿಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನಿರ್ವಹಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.