Prajwal Revanna Case ಕಾರ್ತಿಕ್ ನಿರೀಕ್ಷಣ ಜಾಮೀನು ಅರ್ಜಿ ವಜಾ
ನಾಲ್ವರ ವಿರುದ್ಧ ಅಶ್ಲೀಲ ವೀಡಿಯೋ ಪೆನ್‌ಡ್ರೈವ್ ಹಂಚಿದ ಆರೋಪ
Team Udayavani, May 8, 2024, 11:23 PM IST
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಚಿತ್ರಗಳಿರುವ ಪೆನ್‌ಡ್ರೈವ್ ಹಂಚಿದ ಆರೋಪದಲ್ಲಿ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಸಹಿತ ನಾಲ್ವರ ನಿರೀಕ್ಷಣ ಜಾಮೀನು ಅರ್ಜಿಯನ್ನು ಹಾಸನದ 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ವಜಾ ಮಾಡಿದೆ.
ಕಾರ್ತಿಕ್, ಹೊಳೆನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜ್ ಅಲಿಯಾಸ್ ಪುಟ್ಟಿ, ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದನೆನ್ನಲಾದ ನವೀನ್ ಗೌಡ, ಮತ್ತೊಬ್ಬ ಆರೋಪಿ ಚೇತನ್, ಹಾಸನದ ಬಿಜೆಪಿ ಮುಖಂಡ ಶರತ್ ಸಹಿತ ಐವರ ವಿರುದ್ಧ ಎ.23ರಂದು ಹಾಸನದ ಸೈಬರ್‌ಕ್ರೈಂ ಠಾಣೆಯಲ್ಲಿ ಜೆಡಿಎಸ್ ದೂರು ನೀಡಿತ್ತು.
ಎಫ್ಐಆರ್ ದಾಖಲಾದ ಬಳಿಕ ಕಾರ್ತಿಕ್, ನವೀನ್, ಪುಟ್ಟರಾಜ್ ಹಾಗೂ ಚೇತನ್ ನಿರೀಕ್ಷಣ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ವಜಾ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಬಂಧನದ ಭೀತಿ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.