1ರಿಂದ 8ರವರೆಗೆ ಎಲ್ಲಾ ಮಕ್ಕಳು ಪರೀಕ್ಷೆ ಇಲ್ಲದೆ ಪಾಸ್: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
Team Udayavani, Apr 2, 2020, 1:29 PM IST
ಬೆಂಗಳೂರು: ಕೋವಿಡ್-19 ಕಾರಣದಿಂದ ಒಂದನೇ ತರಗತಿಯಿಂದ 8ನೇ ತರಗತಿಯವರೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ಧಾರೆ.
ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಸಚಿವರು, ಈ ಹಿಂದೆ ಒಂದರಿಂದ ಆರನೇ ತರಗತಿಯವರೆಗೆ ಮಕ್ಕಳನ್ನು ಪಾಸ್ ಮಾಡಲು ಸೂಚಿಸಲಾಗಿತ್ತು. ಆದರೆ ಈಗ ಏಳು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳನ್ನು ಕೂಡಾ ಯಾವುದೇ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ಉತ್ತೀರ್ಣ ಮಾಡಲಾಗುವುದು ಎಂದು ಸ್ಪಷ್ಟ ಪಡಿಸಿದರು.
ಈ ವರ್ಷ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ನಡೆಸಲು ಇಚ್ಛಿಸಲಾಗಿತ್ತು. ಆದರೆ ಈ ಕೋವಿಡ್-19 ಕಳವಳದ ಸಂದರ್ಭದಲ್ಲಿ ಇದು ನಡೆಸಲು ಸಾಧ್ಯವಿಲ್ಲ. ಆ ಕಾರಣದಿಂದ ಎಂಟನೇ ತರಗತಿ ಆರಂಭವಾದ ಪ್ರಾರಂಭದಲ್ಲಿ ಮೌಲ್ಯಾಂಕನ ನಡೆಸಲಾಗುವುದು ಎಂದರು.
ಇನ್ನು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿದ್ಯಾರ್ಥಿಗಳಿಗೆ ಫಾರ್ಮೇಟೀವ್ (ರೂಪಣಾತ್ಮಕ), ಸಮ್ಮೇಟೀವ್( ಸಂಕಲನಾತ್ಮಕ) ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರ ಆಧಾರದ ಮೇಲೆ 10ನೇ ತರಗತಿಗೆ ಪಾಸ್ ಮಾಡಲಾಗುತ್ತದೆ. ಈ ಎರಡು ಆಂತರಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇರುವ ವಿದ್ಯಾರ್ಥಿಗಳಿಗೆ ರಜಾ ಅವಧಿಯಲ್ಲಿ ಶಾಲೆಗಳು ಸೂಕ್ತ ಮಾರ್ಗದರ್ಶನ ನೀಡಿ, ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೂಕ್ತ ಪರೀಕ್ಷೆ ನಡೆಸಿ ಉತ್ತೀರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂದ ಏ.14ರ ನಂತರ ಪರಿಸ್ಥಿತಿ ಅವಲೋಕಿಸಿ, ಮಕ್ಕಳಿಗೆ ಸಮಯಾವಕಾಶ ನೀಡಿ ಪರಿಷ್ಕೃತ ವೇಳಾ ಪಟ್ಟಿ ಪ್ರಕಟಿಸಲಿದ್ದೇವೆ. ದ್ವಿತೀಯ ಪಿಯುಸಿ ಇಂಗ್ಲಿಷ ಪರೀಕ್ಷೆಯ ದಿನಾಂಕವನ್ನು ಏ.14ರ ನಂತರ ತೀರ್ಮಾನಿಸಲಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.