ಮಂಗಳೂರು, ಉಡುಪಿಯಲ್ಲಿ ಮುನ್ನೆಚ್ಚರಿಕೆ ಕ್ರಮ; ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ

ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆ ಪ್ರಕರಣ

Team Udayavani, Feb 22, 2022, 6:50 AM IST

ಮಂಗಳೂರು, ಉಡುಪಿಯಲ್ಲಿ ಮುನ್ನೆಚ್ಚರಿಕೆ ಕ್ರಮ; ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ

ಮಂಗಳೂರು: ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯ ಕರ್ತನ ಕೊಲೆ ಮತ್ತು ಇತರ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳ ಲಾಗಿದೆ ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ಇಡಲಾಗಿದೆ. ಅಧಿಕಾರಿಗಳ ಸಭೆ ನಡೆಸಿ ಠಾಣಾ ಹಂತದಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಸಿಬಂದಿ ನಿಯೋಜಿಸಲಾಗಿದೆ. ಇತ್ತೀಚೆಗೆ ಕೆಲವು ಕಡೆ ನಡೆದಿದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೋಷಕರು, ಆಡಳಿತ ಮಂಡಳಿ ಹಾಗೂ ವಿವಿಧ ಸಂಘಟನೆಗಳು ಸಹಕರಿಸಿದ್ದರಿಂದ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ನಡೆದಿರಲಿಲ್ಲ. ಅದೇ ರೀತಿ ಮುಂದೆಯೇ ಎಲ್ಲರ ಸಹಕಾರದಿಂದ ಶಾಂತಿ ಮುಂದು ವರಿಯಬೇಕಾಗಿದೆ ಎಂದು ತಿಳಿಸಿದ್ದಾರೆ.

ಫೇಸ್‌ಬುಕ್‌ ಪೇಜ್‌ ಮೇಲೆ ಪ್ರಕರಣ
Mangalore Muslims ಎಂಬ ಫೇಸ್‌ಬುಕ್‌ ಪೇಜ್‌ನಲ್ಲಿ ಶಿವಮೊಗ್ಗದಲ್ಲಿ ನಡೆದ ಕೊಲೆ ಪ್ರಕರಣದ ಕುರಿತು ಆಕ್ಷೇಪಾರ್ಹವಾದ ಪೋಸ್ಟ್‌ಗಳನ್ನು ಹಾಕಿ ಶಾಂತಿ ಕದಡಲು, ಕೋಮು ಗಲಭೆ ನಡೆಸಲು ಪ್ರಯತ್ನಿಸಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ಗುಪ್ತಚರ ಇಲಾಖೆ ಜತೆಗೂ ಸಂವಹನ ನಡೆಸಲಾಗಿದೆ. ಇದಕ್ಕೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಹುಂಬ ಧೈರ್ಯ ಬೇಡ
ಮಂಗಳೂರಿನಲ್ಲಿ ವಿವಿಧ ಸಂಘಟನೆ, ರಾಜಕೀಯ ಪಕ್ಷಗಳು, ಧಾರ್ಮಿಕ, ಜಾತಿ, ರಾಜಕೀಯ ಮುಖಂಡರು, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಸಂಘಟನೆ ಹಾಗೂ ಕೆಲವು ವ್ಯಕ್ತಿಗಳು ನೀಡುತ್ತಿರುವ ಹೇಳಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವ ಪೋಸ್ಟ್‌ಗಳನ್ನು ನಿರಂತರವಾಗಿ ನಿಕಟವಾಗಿ ಗಮನಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳ ಮೂಲಕ ವಿಷಬೀಜ ಬಿತ್ತಲು ಅವಕಾಶ ನೀಡುವುದಿಲ್ಲ. ಇಂತಹ ಸುಮಾರು 1,064 ವ್ಯಕ್ತಿ/ಸಂಘಟನೆಗಳ ಪೋಸ್ಟ್‌ಗಳ ಬಗ್ಗೆ ಕಳೆದ 2 ತಿಂಗಳುಗಳಿಂದ ನಿಗಾ ಇರಿಸಲಾಗಿದೆ. ಇದನ್ನು ಪರಿಶೀಲಿಸಲಾಗುತ್ತಿದ್ದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸ್‌ ಇಲಾಖೆಯ ವಿವಿಧ ಏಜೆನ್ಸಿಗಳಿಗೂ ಮಾಹಿತಿ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್‌ಗಳನ್ನು ಗಂಭೀರವಾಗಿ ಪರಿಗಣಿಸ ಲಾಗುತ್ತಿದೆ. ಹಾಗಾಗಿ ಯಾರೂ ಕೂಡ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಬಾರದು. ಕೇವಲ ಪೋಸ್ಟ್‌ ಮಾಡುವುದು ಮಾತ್ರವಲ್ಲದೆ ಅದನ್ನು ಶೇರ್‌ ಮಾಡುವುದು, ಲೈಕ್‌ ಮಾಡುವುದು ಅಥವಾ ಆಕ್ಷೇಪಾರ್ಹವಾಗಿ ಕಮೆಂಟ್‌ ಹಾಕುವುದು ಕೂಡ ಅಪರಾಧವಾಗುತ್ತದೆ ಎಂದು ಅವರು ತಿಳಿಸಿದರು.

ಸಾಮಾಜಿಕ ಜಾಲತಾಣ ನಿಯಂತ್ರಣ ಘಟಕವನ್ನು ಪೊಲೀಸ್‌ ಆಯುಕ್ತರು ಉದ್ಘಾಟಿಸಿದರು. ಡಿಸಿಪಿಗಳಾದ ಹರಿರಾಂ ಶಂಕರ್‌, ದಿನೇಶ್‌ ಕುಮಾರ್‌ ಉಪಸ್ಥಿತರಿದ್ದರು.

ಪೊಲೀಸ್‌ ಪಥಸಂಚಲನ
ಮಂಗಳೂರು ನಗರದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಮುಂದುವರಿಸಿ ಕೊಂಡು ಹೋಗುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಪೊಲೀಸರು ಸೋಮವಾರ ಬೆಳಗ್ಗೆ ಪಥಸಂಚಲನ ನಡೆಸಿದರು. ಅಂತೆಯೇ ಮೂಡುಬಿದಿರೆ ಪೊಲೀಸ್‌ ಉಪನಿರೀಕ್ಷಕ ಸುದೀಪ್‌ ನೇತೃತ್ವದಲ್ಲಿ ಪೊಲೀಸರು ಪೇಟೆಯಲ್ಲಿ ಪಥ ಸಂಚಲನ ನಡೆಸಿದರು.

ಉಡುಪಿಯಲ್ಲೂ ಕಟ್ಟೆಚ್ಚರ
ಉಡುಪಿ ಜಿಲ್ಲೆಯ ಪೊಲೀಸರಿಗೆ ರವಿವಾರ ರಾತ್ರಿಯಿಂದಲೇ ಅಲರ್ಟ್‌ ಆಗಿರುವಂತೆ ಸೂಚನೆ ನೀಡಲಾಗಿದೆ. ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬೀಟ್‌ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಿದ್ದೇವೆ. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ, ಡಿವೈಎಸ್‌ಪಿ, ಇನ್‌ಸ್ಪೆಕ್ಟರ್‌ಗಳು, ಎಸ್‌ಐ ಹಾಗೂ ಸಿಬಂದಿ ವರ್ಗಕ್ಕೆ ಅಹಿತಕರ ಘಟನೆ ನಡೆಯದಂತೆ ಎಚ್ಚರದಿಂದಿರಲು ಸೂಚನೆ ನೀಡಲಾಗಿದೆ.
– ಎನ್‌. ವಿಷ್ಣುವರ್ಧನ,
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು

Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು

Mangaluru: ಯಾವುದೇ ರಾಜ್ಯಕ್ಕೂ ಕೇಂದ್ರ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್‌

Mangaluru: ಯಾವುದೇ ರಾಜ್ಯಕ್ಕೂ ಕೇಂದ್ರ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.