ಜೆ.ಪಿ.ನಡ್ಡಾ ಉಡುಪಿ, ಚಿಕ್ಕಮಗಳೂರು ಪ್ರವಾಸ, ಕಾರ್ಯಕ್ರಮಕ್ಕೆ ಸಿದ್ಧತೆ


Team Udayavani, Feb 17, 2023, 6:24 PM IST

ಜೆ.ಪಿ.ನಡ್ಡಾ ಉಡುಪಿ, ಚಿಕ್ಕಮಗಳೂರು ಪ್ರವಾಸಕ್ಕೆ ಸಿದ್ಧತೆ

ಉಡುಪಿ: ಜಿಲ್ಲೆಯಲ್ಲಿ ಚುನಾವಣೆ ಹವಾ ಶುರುವಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಫೆ.20ರಂದು ಜಿಲ್ಲೆಗೆ ಬರುತ್ತಿದ್ದಾರೆ. ಉಡುಪಿ ಮತ್ತು ಬೈಂದೂರಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಫೆ. 19ರಿಂದ ಫೆ.21ರವರೆಗೂ ರಾಷ್ಟ್ರಾಧ್ಯಕ್ಷರು ಉಡುಪಿ, ಚಿಕ್ಕಮಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಹೇಳಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಕಳೆದ ಬಾರಿಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ಜಯ ಸಾಧಿಸಲು ರಾಷ್ಟ್ರೀಯ ಅಧ್ಯಕ್ಷರ ಪ್ರವಾಸ ಹೆಚ್ಚು ಸಹಕಾರಿಯಾಗಲಿದೆ. ಫೆ. 20ರ ಬೆಳಗ್ಗೆ 9.30ಕ್ಕೆ ಆದಿಉಡುಪಿ ಹೆಲಿಪ್ಯಾಡ್‌ಗೆ ನಡ್ಡಾ ಅವರು ಆಗಮಿಸಲಿದ್ದಾರೆ. ಅದಲ್ಲಿಂದ ಶ್ರೀ ಕೃಷ್ಣಮಠದ ಭೇಟಿ ನೀಡಿ ದೇವರ ದರ್ಶನ ಪಡೆದು, ಪರ್ಯಾಯ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆಯಲಿದ್ದಾರೆ. ತದನಂತರ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯುವ ಜಿಲ್ಲೆಯ ಬೂತ್‌ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಅಲ್ಲಿಂದ ಬೈಂದೂರಿಗೆ ತೆರಳಿದ್ದಾರೆ ಎಂದು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯ 1,111 ಬೂತ್‌ಗಳ ಅಧ್ಯಕ್ಷರು ಸಹಿತವಾಗಿ 12 ಮಂದಿ ಕಾರ್ಯಕರ್ತರನ್ನು ಒಳಗೊಂಡ ಸಮಿತಿಯ ಎಲ್ಲ ಸದಸ್ಯರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 13,332ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ. ಅನಂತರ ಬೈಂದೂರು ವಿಧಾನಸಭೆ ಕ್ಷೇತ್ರದ ಮುಳ್ಳಿಕಟ್ಟೆಯ ನಗು ಸಿಟಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮುಖ್ಯ ಭಾಷಣ ಮಾಡಲಿದ್ದಾರೆ. ಸುಮಾರು 20 ಸಾವಿರ ಜನರು ಸೇರುವ ನಿರೀಕ್ಷೆಯಿದೆ. ಎರಡು ಕಾರ್ಯಕ್ರಮಗಳ ಯಶಸ್ವಿಗೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದ್ದೇವೆ ಹಾಗೂ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದೇವೆ ಎಂದು ಹೇಳಿದರು.

ಬೈಂದೂರು ಕ್ಷೇತ್ರದಿಂದ ಶೃಂಗೇರಿಗೆ ಪ್ರಯಾಣ ಬೆಳಸಲಿದ್ದಾರೆ. ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ಇನ್ನೊಂದು ತಿಂಗಳಲ್ಲಿ ಐದು ರಥಯಾತ್ರೆಗಳು ಜಿಲ್ಲೆಗೆ ಬರಲಿದೆ. ಇದರಲ್ಲಿ ವಿಜಯ ಸಂಕಲ್ಪ ರಥಯಾತ್ರೆ ಪ್ರಮುಖವಾಗಿದೆ. ಒಂದೊಂದು ಮಂಡಲಗಳಲ್ಲೂ ವಿವಿಧ ಮೋರ್ಚಾಗಳ ಸಮಾವೇಶವೂ ನಡೆಯಲಿದೆ. ಯಾವುದೇ ಕ್ಷೇತ್ರದಲ್ಲೂ ಅಭ್ಯರ್ಥಿಗಳ ಘೋಷಣೆ ಸದ್ಯಕ್ಕೆ ಇಲ್ಲ. ಪಕ್ಷದ ವರಿಷ್ಠರು ಅಂತಿಮ ನಿರ್ಧಾರವನ್ನು ಚುನಾವಣೆ ಘೋಷಣೆಯ ಅನಂತರವೇ ತಿಳಿಸಲಿದ್ದಾರೆ ಎಂದು ಹೇಳಿದರು.

ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಅಧ್ಯಕ್ಷರೂ ಆದ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್‌ ಶೆಟ್ಟಿ, ಜಿಲ್ಲಾ ವಕ್ತಾರ ಕೆ. ರಾಘವೇಂದ್ರ ಕಿಣಿ, ಸಹ ವಕ್ತಾರರಾದ ಪ್ರತಾಪ್‌ಶೆಟ್ಟಿ ಚೇರ್ಕಾಡಿ, ಶಿವಕುಮಾರ್‌ ಅಂಬಲಪಾಡಿ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.