ಮಂಗಳೂರಿಗೆ ರಾಷ್ಟ್ರಪತಿ ಭೇಟಿ ಖಚಿತ : ಶಿಷ್ಟಾಚಾರದಂತೆ ಅಗತ್ಯ ಕ್ರಮ: ಡಿಸಿ
Team Udayavani, Sep 30, 2021, 6:28 AM IST
ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಅ. 7, 8ರಂದು ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದು, ಭದ್ರತೆ ಸೇರಿದಂತೆ ಅಗತ್ಯ ಸಿದ್ಧತೆಗಳು ಆರಂಭಗೊಂಡಿವೆ.
ಬುಧವಾರ ಜಿಲ್ಲಾಡಳಿತದೊಂದಿಗೆ ಬೆಂಗಳೂರಿನಿಂದ ಏರ್ಪಡಿಸಲಾಗಿದ್ದ ವೀಡಿಯೋ ಸಂವಾದದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರಿಗೆ ಪೂರ್ವಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾಹಿತಿ ನೀಡಿದರು.
ರಾಷ್ಟ್ರಪತಿ ಭವನದ ನಿರ್ದೇಶನ ಹಾಗೂ ಶಿಷ್ಟಾಚಾರದಂತೆ ವಾಸ್ತವ್ಯ, ಊಟೋಪಚಾರ ಹಾಗೂ ಜತೆಗೆ ಆಗಮಿಸುವ ಅಧಿಕಾರಿಗಳು, ಸಿಬಂದಿಗೆ ವಸತಿ, ಊಟೋಪಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗುವುದು. ಆ್ಯಂಬುಲೆನ್ಸ್, ವೈದ್ಯರ ತಂಡ ಸಿದ್ಧವಿದೆ ಹಾಗೂ ಸಂಪರ್ಕ ರಸ್ತೆಗಳನ್ನು ಕೂಡಲೇ ದುರಸ್ತಿ ಮಾಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ. ಮುಖ್ಯವಾಗಿ ಕೋವಿಡ್ ನಿಯಮಾವಳಿ ಅನ್ವಯ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳ ಲಾಗು ವುದು. ಮೆಸ್ಕಾಂ ನಿಂದ ವಿದ್ಯುತ್ ಕಡಿತ ವಾಗದಂತೆ ಎಚ್ಚರ ವಹಿಸಲಾ ಗುವುದು ಎಂದು ಹೇಳಿದರು.
ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ಹರಿರಾಮ್ ಶಂಕರ್,ಮೆಸ್ಕಾಂ ಎಂಡಿ ಪ್ರಶಾಂತ್ ಮಿಶ್ರ, ಎಸಿ ಮದನಮೋಹನ್, ಲೋಕೋಪ ಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಯಶವಂತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:ಶಾಸಕರಿಂದ ಶ್ರೀ ಕಾಶೀ ಮಠಾಧೀಶರ ಭೇಟಿ
ರಾಷ್ಟ್ರಪತಿ ಭೇಟಿ
ರಾಷ್ಟ್ರಪತಿಯವರ ಸದ್ಯದ ಪ್ರವಾಸ ವೇಳಾಪಟ್ಟಿಯಂತೆ ಬೆಂಗಳೂರು ಹಾಗೂ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿಯ ಬಳಿಕ ಮೈಸೂರು ವಿಮಾನ ನಿಲ್ದಾಣ ದಿಂದ ಅ. 7ರಂದು ಸಂಜೆ 5.20ಕ್ಕೆ ಹೊರಟು ಮಂಗಳೂರು ವಿಮಾನ ನಿಲ್ದಾಣಕ್ಕೆ 6.10ಕ್ಕೆ ಆಗಮಿಸಿ 6.35ಕ್ಕೆ ನಗರಕ್ಕೆ ಆಗಮಿಸಿ ಖಾಸಗಿ ಹೊಟೇಲ್ ಅಥವಾ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಅ. 8ರಂದು ಬೆಳಗ್ಗೆ ಉಪಾಹಾರದ ಬಳಿಕ 10.45ಕ್ಕೆ ವಿಮಾನ ನಿಲ್ದಾಣಕ್ಕೆ ತಲುಪಿ ವಿಶೇಷ ಹೆಲಿಕಾಪ್ಟರ್‌ನಲ್ಲಿ ಶೃಂಗೇರಿ ದೇವಸ್ಥಾನಕ್ಕೆ 11.40ಕ್ಕೆ ಹೋಗಿಶ್ರೀದೇವಿಯ ದರ್ಶನ ಪಡೆಯಲಿ ದ್ದಾರೆ. 3.15ಕ್ಕೆ ಶೃಂಗೇರಿಯಿಂದ ನಿರ್ಗಮಿಸಿ 3.45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ, 4.10ಕ್ಕೆ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು. ಅ. 9ರಂದು ಬೆಳಗಿನ ಉಪಾಹಾರ ಸ್ವೀಕರಿಸಿ 11 ಗಂಟೆಗೆ ಹೊರಟು 11.25ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊಸದಿಲ್ಲಿಗೆ ನಿರ್ಗಮಿಸಲಿದ್ದಾರೆ.
ಸಸ್ಯಾಹಾರಿ ಖಾದ್ಯಗಳು
ರಾಷ್ಟ್ರಪತಿಯವರು ಸಸ್ಯಾಹಾರಿ ಖಾದ್ಯಗಳನ್ನು ಸೇವಿಸಲಿದ್ದಾರೆ. ಆದ್ಯತಾ ಪಟ್ಟಿಯಲ್ಲಿ ಹಾಲು, ಹಣ್ಣು-ಹಂಪಲು, ತವಾ ಚಪಾತಿ, ಸಲಾಡ್, ಜ್ಯೂಸ್, ಗ್ರೀನ್ ಟೀ, ಸ್ಯಾಂಡ್‌ವಿಚ್ ಮುಂತಾದ ವುಗಳು ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.