ಸತ್ತಂತೆ ನಟಿಸಿ ಬಂಧನದಿಂದ ಪಾರಾಗಲು ಯತ್ನ
Team Udayavani, May 29, 2020, 3:28 PM IST
ಮಣಿಪಾಲ: ಎರಡು ತಿಂಗಳಿಂದ ಜಾರಿಯಲ್ಲಿದ್ದ ಲಾಕ್‌ಡೌನ್ ನಿಯಮಗಳನ್ನು ಒಂದು ಹಂತಕ್ಕೆ ಸಡಿಲಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾನೂನು ರೂಪಿಸಲಾಗಿದೆ. ಆದರೆ, ಅರ್ಧಕ್ಕರ್ಧ ಜನ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ಬೇಕಾಬಿಟ್ಟಿ ನಡೆದುಕೊಳ್ಳುತ್ತಿದ್ದಾರೆ. ಜನನಾಯಕರೂ ಇಂತಹ ತಪ್ಪೆಸಗುತ್ತಿದ್ದು, ಸಾಮಾಜಿಕ ಅಂತರವನ್ನು ಗಾಳಿಗೆ ತೂರಿ ಸಭೆ- ಸಮಾರಂಭಗಳನ್ನು ನಡೆಸುತ್ತಿರುವುದು ಟೀಕೆಗೆ ಗುರಿಯಾಗಿದೆ.
ಇದೀಗ ಪೆರುವಿನ ಟಂಟಾರಾ ಮೇಯರ್ ಜೈಮ್ ರೋಲ್ಯಾಂಡ್ ಉರ್ಬಿನಾ ಟೋರೆಸ್ ಅವರೂ ಇಂತಹ ಮೂರ್ಖತನ ಪ್ರದರ್ಶಿಸಿ, ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿ ಸಿಕ್ಕಿಬಿದ್ದಿದ್ದಾರೆ. ಈ ಮೇಯರ್ ಬಂಧನದಿಂದ ತಪ್ಪಿಸಿಕೊಳ್ಳಲು ಸತ್ತಂತೆ ನಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತನ್ನ ಸ್ನೇಹಿತರೊಂದಿಗೆ ಲಾಕ್‌ಡೌನ್ ನಿಯಮಗಳನ್ನು ಕಡೆಗಣಿಸಿ ಪಾರ್ಟಿ ಮಾಡಿದ ಮೇಯರ್ ವಿಚಾರ ಪೊಲೀಸರಿಗೆ ತಿಳಿಯುತ್ತಿದ್ದಂತೆಯೇ ಅವರು ಸ್ಥಳಕ್ಕೆ ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮೇಯರ್ ಸ್ನೇಹಿತರು ಅಡಗಿ ಕುಳಿತರೆ, ತನ್ನನ್ನು ಬಂಧಿಸುತ್ತಾರೆಂಬ ಭಯದಲ್ಲಿ ಮೇಯರ್ ಮಹಾಶಯ ಶವಪೆಟ್ಟಿಗೆಯಲ್ಲಿ ಮಲಗಿ, ಸತ್ತಂತೆ ನಟಿಸಿದ್ದರು. ಬೇಲಿಯೇ ಎದ್ದು ಹೊಲ ಮೇಯ್ದ ಕಥೆ ನೆನಪಾಗಿ ಪೆರುವಿನ ಜನರೀಗ ಈ ಮೇಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪಾರ್ಟಿ ಮಾಡಿದ ಎಲ್ಲರನ್ನೂ ಠಾಣೆಗೆ ಕರೆದೊಯ್ದು, ಶಿಸ್ತಿನ ಪಾಠ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.