Mysore: ಮೈಸೂರಿಗೂ ಮೆಟ್ರೋ ಸುಳಿವು ನೀಡಿದ ಪ್ರಧಾನಿ ನರೇಂದ್ರ ಮೋದಿ
Team Udayavani, Oct 20, 2023, 11:43 PM IST
ಹೊಸದಿಲ್ಲಿ/ಬೆಂಗಳೂರು: ಮುಂಬರುವ ವರ್ಷಗಳಲ್ಲಿ ಅರಮನೆ ನಗರಿ ಮೈಸೂರು ಸಹಿತ ರಾಜ್ಯದ ಹಲವು ಪ್ರಮುಖ ನಗರಗಳಲ್ಲೂ ಮೆಟ್ರೋ ರೈಲುಗಳು ಓಡಾಡಲಿವೆ!
ಪ್ರಧಾನಿ ನರೇಂದ್ರ ಮೋದಿ ಈ ಸುಳಿವನ್ನು ನೀಡಿದ್ದಾರೆ. ಬೆಂಗಳೂರಿನ ಮಾದರಿಯಲ್ಲಿ ಇತರ ನಗರಗಳಲ್ಲೂ ಮೆಟ್ರೋ ಸೇವೆಗಳನ್ನು ವಿಸ್ತರಿಸುವ ಯೋಚನೆ ಇದೆ ಎಂದಿದ್ದಾರೆ.
ಶುಕ್ರವಾರ “ನಮ್ಮ ಮೆಟ್ರೋ’ ಮಿಸ್ಸಿಂಗ್ ಲಿಂಕ್‌ಗಳಾದ ಬೈಯಪ್ಪನಹಳ್ಳಿ- ಕೆ.ಆರ್. ಪುರಂ ಮತ್ತು ಕೆಂಗೇರಿ- ಚಲ್ಲಘಟ್ಟ ನಡುವಿನ ವಿಸ್ತರಿತ ಮಾರ್ಗವನ್ನು ಉ. ಪ್ರದೇಶದ ಸಾಹಿಬಾಬಾದ್‌ನಿಂದಲೇ ಲೋಕಾರ್ಪಣೆ ಗೊಳಿಸಿ ಅವರು ಮಾತನಾಡಿದರು.
ಮೆಟ್ರೋ ಮೂರನೇ ಹಂತ
“ನಮ್ಮ ಮೆಟ್ರೋ”ದ 3ನೇ ಹಂತದ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಶುಕ್ರವಾರ ಮೆಟ್ರೋ ಮಾರ್ಗ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬೆಂಗಳೂರು ಮೆಟ್ರೋ ರೈಲು ಯೋಜನೆಯ 3ನೇ ಹಂತದಲ್ಲಿ 45 ಕಿ.ಮೀ.ಗಳ ಉದ್ದದ ಮಾರ್ಗವನ್ನು ಅಂದಾಜು ರೂ. 15,611 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಸಂಬಂಧದ ಸಮಗ್ರ ಯೋಜನಾ ವರದಿ (ಡಿಪಿಆರ್)ಯನ್ನು ಈಗಾಗಲೇ ಅನುಮೋದನೆಗಾಗಿ ಕಳುಹಿಸಿದೆ. ಇದಕ್ಕೆ ಶೀಘ್ರ ಅನುಮೋದನೆ ನೀಡಬೇಕು ಎಂದರು. ಇದಲ್ಲದೆ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ “3ಎ’ಗೆ ಕೂಡ ಡಿಪಿಆರ್ ತಯಾರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.