ಅಡಿಕೆ ಬೆಳೆಗಾರರಿಗೆ ಪ್ರಧಾನಿ ರಕ್ಷಣೆ ಭರವಸೆ: ಸಚಿವೆ ಶೋಭಾ ಕರಂದ್ಲಾಜೆ

ಪುತ್ತೂರು: ಬೃಹತ್‌ ಕೃಷಿಯಂತ್ರ ಮೇಳ-2023

Team Udayavani, Feb 11, 2023, 1:57 AM IST

shಅಡಿಕೆ ಬೆಳೆಗಾರರಿಗೆ ಪ್ರಧಾನಿ ರಕ್ಷಣೆ ಭರವಸೆ: ಸಚಿವೆ ಶೋಭಾ ಕರಂದ್ಲಾಜೆ

ಪುತ್ತೂರು: ಅಡಿಕೆಯು ಹಾನಿಕಾರಕ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರೇ ನಮ್ಮ ನಿಯೋಗಕ್ಕೆ ಹೇಳಿದ್ದು, ನುರಿತ ವಕೀಲರ ತಂಡದಿಂದ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿ ಅಡಿಕೆಗೆ ರಕ್ಷಣೆ ನೀಡುವ ಧೈರ್ಯ ತುಂಬಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕ್ಯಾಂಪ್ಕೋ, ಎಆರ್‌ಡಿಎಫ್‌, ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ, ಮಂಗಳೂರು ವಿ.ವಿ. ಆಶ್ರಯದಲ್ಲಿ ನೆಹರೂ ನಗರದ ವಿವೇಕಾನಂದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಎಂಡ್‌ ಟೆಕ್ನಾಲಜಿಯ ಆವರಣದಲ್ಲಿ ಫೆ. 10ರಿಂದ 12ರ ತನಕ 3 ದಿನಗಳ ಕಾಲ ನಡೆಯಲಿರುವ 5ನೇ ಬೃಹತ್‌ ಕೃಷಿಯಂತ್ರ ಮೇಳ-2023 ಮತ್ತು ಕನಸಿನ ಮನೆ ಪ್ರದರ್ಶನವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಡಿಕೆ: ಕನಿಷ್ಠ ಆಮದು ಸುಂಕ
321 ರೂ.ಗೆ ಶೀಘ್ರ ಏರಿಕೆ
ಆಮದಾಗುವ ಅಡಿಕೆ ಮೇಲೆ ನಿಯಂತ್ರಣದ ದೃಷ್ಟಿಯಿಂದ ಕನಿಷ್ಠ ಆಮದು ಸುಂಕವನ್ನು 251 ರೂ.ಗಳಿಂದ 351 ರೂ.ಗೆ ಏರಿಕೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕೃಷಿ ಇಲಾಖೆ ಒಪ್ಪಿಗೆ ಕೊಟ್ಟು ಡಿಜಿಎಫ್‌ಟಿಗೆ ಕಳುಹಿಸಿದೆ. ಅಲ್ಲಿಂದ ವಾಣಿಜ್ಯ ಸಚಿ ವಾಲಯಕ್ಕೆ ಕಳುಹಿಸಿದ್ದು, ಅಲ್ಲಿ ಒಪ್ಪಿಗೆ ನೀಡುವ ಪ್ರಕ್ರಿಯೆ ಆಗುತ್ತಿದೆ ಶೀಘ್ರ ಘೋಷಣೆಯಾಗಲಿದೆ ಎಂದರು.

ಅಡಿಕೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದ ಬಗ್ಗೆ ಸಂಶೋಧನೆ ನಡೆಸಲು ಕೆನಡಾದ ವಿಜ್ಞಾನಿಗಳ ಜತೆ ಚರ್ಚಿಸಲಾಗಿದೆ ಎಂದರು.

ಆಹಾರ ಧಾನ್ಯದಲ್ಲಿ ಸ್ವಾವಲಂಬನೆ
ದೇಶವು ಮೊದಲ ಬಾರಿಗೆ ಆಹಾರ ಧಾನ್ಯದಲ್ಲಿ ಸ್ವಾವಲಂಬನೆ ಹೊಂದಿದೆ. ಖಾದ್ಯ ತೈಲದಲ್ಲಿ ಸ್ವಾವಲಂಬನೆ ಹೊಂದಬೇಕಿದೆ. ಈ ನಿಟ್ಟಿನಲ್ಲಿ ಕೃಷಿಕರು ತಾಳೆ ಬೆಳೆಗೂ ಒತ್ತು ನೀಡಬೇಕು. ಕ್ಯಾಂಪ್ಕೋ ತೈಲ ಉತ್ಪಾದನ ಘಟಕ ತೆರೆಯಬೇಕು ಎಂದರು.

ಕೇಂದ್ರವು ಅಡಿಕೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬೇಡಿಕೆ ಈಡೇರಿಕೆಗೆ ಸ್ಪಂದನೆ ನೀಡಿದೆ. ಅದರೊಂದಿಗೆ ಅಡಿಕೆ ಆಮದಿಗೆ ಸಂಪೂರ್ಣ ನಿಷೇಧ ಹೇರುವ ಮೂಲಕ ದೇಶೀಯ ಅಡಿಕೆಗೆ ಬೆಂಬಲ ನೀಡಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಆಗ್ರಹಿಸಿದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಸಂಜೀವ ಮಠಂದೂರು, ಸಿಪಿಸಿಆರ್‌ಐ ಹಾಗೂ ಐಸಿಎಆರ್‌ ಕಾಸರಗೋಡಿನ ನಿರ್ದೆಶಕ ಡಾ| ಕೆ.ವಿ. ಹೆಬ್ಟಾರ್‌, ಮಂಗಳೂರು ವಿ.ವಿ. ಉಪಕುಲಪತಿ ಡಾ| ಸುಬ್ರಹ್ಮಣ್ಯ ಯಡಪಡಿತ್ತಾಯ, ನಗರಸಭೆ ಅಧ್ಯಕ್ಷ ಜೀವಂಧರ್‌ ಜೈನ್‌, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ.ಎನ್‌. ಕೃಷ್ಣ ಭಟ್‌, ಸಂಚಾಲಕ ಟಿ.ಎಸ್‌. ಸುಬ್ರಹ್ಮಣ್ಯ ಭಟ್‌ ಹಾಗೂ ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರು ಉಪಸ್ಥಿತರಿದ್ದರು.

ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಎಚ್‌.ಎಂ. ಕೃಷ್ಣಕುಮಾರ್‌ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೃಷಿ ಯಂತ್ರ ಮೇಳದ ಸಂಯೋಜಕ ರವಿಕೃಷ್ಣ ಡಿ. ಕಲ್ಲಾಜೆ ಸ್ವಾಗತಿಸಿ, ಉಪನ್ಯಾಸಕಿ ಯರಾದ ನೀಮಾ ಎಚ್‌. ಕುಂಬ್ರ, ನಿಶಾ, ಹರಿಪ್ರಸಾದ್‌ ನಿರೂಪಿಸಿದರು.

ಕಸ್ಟಮರಿಂಗ್‌ ಕೇಂದ್ರಗಳ ಸಂಖ್ಯೆ ಹೆಚ್ಚಳ
ಕೃಷಿಕರ ಅನುಕೂಲಕ್ಕಾಗಿ ಕೇಂದ್ರ ಸರಕಾರವು ಹೋಬಳಿ ಮಟ್ಟ ದಲ್ಲಿ ಕಸ್ಟಮರಿಂಗ್‌ ಕೇಂದ್ರ ತೆರೆದು ಬಾಡಿಗೆ ಆಧಾರದಲ್ಲಿ ಯಂತ್ರೋಪ ಕರಣ ನೀಡುತ್ತಿದೆ. ಇನ್ನಷ್ಟು ರೈತ ರಿಗೆ ನೆರವಾಗಲು ಕಸ್ಟಮ ರಿಂಗ್‌ ಕೇಂದ್ರಗಳ ಸಂಖ್ಯೆ ಹಾಗೂ ಕೃಷಿ ಯಂತ್ರಗಳ ಸಂಖ್ಯೆ ಹೆಚ್ಚಳ ಗೊಳಿಸ ಲಾಗುವುದು ಎಂದರು.

ದಿನ ನಿತ್ಯದ ಸಲಕರಣೆಗಳಿಗೆ ಸಬ್ಸಿಡಿ
ಸಬ್ಸಿಡಿಯಲ್ಲಿ 80 ಸಾವಿರ ಕೋ.ರೂ. ಟ್ಯಾಕ್ಟರ್‌ಗೆ, 4 ಸಾವಿರ ಕೋ.ರೂ. ಬೇರೆ ಬೇರೆ ಸಲಕರಣೆಗಳಿಗೆ ಹೋಗುತ್ತಿದೆ. ಟ್ಯಾಕ್ಟರ್‌ಗೆ ನೀಡುವ ಸಬ್ಸಿಡಿಯನ್ನು ಕಡಿಮೆಗೊಳಿಸಿ ದಿನನಿತ್ಯ ಬಳಕೆಯ ಸಲಕರಣೆಗಳಿಗೆ ನೀಡಬೇಕಿದೆ. ಇದಕ್ಕಾಗಿ ಈ ವರ್ಷದಿಂದಲೇ ಮಾರ್ಗಸೂಚಿ ತಯಾರಿಸಲಾಗುವುದು ಎಂದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

ud

Puttur: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.