ಬಾಕಿ ಕಡತಗಳ ಶೀಘ್ರ ವಿಲೇವಾರಿಗೆ ಆದ್ಯತೆ;ಉಡಾ ಅಧ್ಯಕ್ಷರಾಗಿ ಮನೋಹರ ಕಲ್ಮಾಡಿ ಅಧಿಕಾರ ಸ್ವೀಕಾರ
Team Udayavani, Mar 15, 2022, 5:45 AM IST
ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ (ಉಡಾ) ನೂತನ ಅಧ್ಯಕ್ಷರಾಗಿ ಮನೋಹರ ಕಲ್ಮಾಡಿ ಸೋಮವಾರ ಅಧಿಕಾರ ಸ್ವೀಕರಿಸಿದರು.
ಆದಿ ಉಡುಪಿ ಪ್ರಾಧಿಕಾರ ಕಚೇರಿಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅಧಿಕಾರ ಹಸ್ತಾಂತರಿಸಿದರು.
ಅನಂತರ ಮಾತನಾಡಿದ ಮನೋ ಹರ ಕಲ್ಮಾ ಡಿ ಅವರು, ಪ್ರಾಧಿಕಾರದಲ್ಲಿ ಬಾಕಿ ಇರುವ ಕಡತಗಳನ್ನು ಪರಿಶೀಲಿಸಿ ಶೀಘ್ರ ವಿಲೇವಾರಿ ಮಾಡ ಲಾಗುವುದು. ಎಲ್ಲರ ಸಹಕಾರದಿಂದ ನಗರದ ಅಭಿವೃದ್ಧಿ ಮತ್ತು ಜನರಿಗೆ ಸಮಸ್ಯೆ ಯಾಗದ ರೀತಿಯಲ್ಲಿ ಕಾರ್ಯ ನಿರ್ವಹಿಸಿಕೊಂಡು ಹೋಗುವು ದಾಗಿ ತಿಳಿಸಿದರು.
ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಪ್ರಾಧಿಕಾರದ ಪ್ರತಿಷ್ಠೆಹೆಚ್ಚಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸಗಳು ನಡೆಯಬೇಕಿದೆ ಎಂದು ಶುಭ ಹಾರೈಸಿದರು.
ಪ್ರಾಧಿಕಾರದ ನೂತನ ಸದಸ್ಯರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಕಿಶೋರ್ ಕುಮಾರ್, ಸುಮಾ ನಾಯ್ಕ, ಮಾಲತಿ ಸುಧಾಕರ್, ಯೋಗೀಶ್ ಚಂದ್ರ ಉಪಸ್ಥಿತರಿದ್ದರು.
ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ರಾಘವೇಂದ್ರ ಕಿಣಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಪೌರಾಯುಕ್ತ ಡಾ| ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮೀನುಗಾರಿಕೆ ಫೆಡರೇಶನ್ ಅಧ್ಯಕ್ಷ ಯಶಪಾಲ್ ಎ. ಸುವರ್ಣ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ನಗರಸಭೆ ಸದಸ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.