Firecrackers: ಅಪಾಯಕಾರಿ ಪಟಾಕಿ ನಿಷೇಧ- ಸುಪ್ರೀಂ, ಹಸುರು ಪೀಠ ಆದೇಶ ಜಾರಿಗೆ ತೀರ್ಮಾನ
Team Udayavani, Oct 10, 2023, 10:07 PM IST
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಬಳಿಕ ಎಚ್ಚೆತ್ತಿರುವ ರಾಜ್ಯ ಸರಕಾರವು ರಾಜಕೀಯ ಸಮಾವೇಶ, ರ್ಯಾಲಿ, ಮೆರವಣಿಗೆ, ದೀಪಾವಳಿ, ಮದುವೆಯಂತಹ ಸಮಾರಂಭಗಳಲ್ಲಿ ಅಪಾಯಕಾರಿ ಪಟಾಕಿಗಳನ್ನು ನಿಷೇಧಿಸಿದೆ. ಇದಕ್ಕೆ ಬದಲಾಗಿ ಹಸುರು ಪಟಾಕಿಯನ್ನಷ್ಟೇ ಬಳಸಬೇಕು ಎಂದು ಕಟ್ಟಾಜ್ಞೆ ಹೊರಡಿಸಿದೆ. ಈ ಮೂಲಕ ಸುಪ್ರೀಂ ಕೋರ್ಟ್ ಹಾಗೂ ಹಸುರು ನ್ಯಾಯಪೀಠ ನೀಡಿರುವ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದೆ.
ಅತ್ತಿಬೆಲೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ವಹಿಸಿರುವ ಸಿಎಂ ಸಿದ್ದರಾಮಯ್ಯ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುಪ್ರೀಂ ಕೋರ್ಟ್ ಆದೇಶ ಜಾರಿಗೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.
ಸಭೆಯ ಅನಂತರ ಮಾತನಾಡಿದ ಸಿಎಂ, ಅಪಾಯಕಾರಿ ಪಟಾಕಿಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪಟಾಕಿ ತಯಾರಕರು, ದಾಸ್ತಾನು ಮಾಡುವವರು ಹಾಗೂ ಮಾರಾಟ ಮಾಡುವವರು ಹಸುರು ಪಟಾಕಿಯನ್ನೇ ಗ್ರಾಹಕರಿಗೆ ನೀಡಬೇಕು. ನಿಯಮ ಉಲ್ಲಂಘಿಸಿದವರ ಪರವಾನಿಗೆ ರದ್ದುಪಡಿಸಲಾಗುತ್ತದೆ. ನಿಯಮ ಉಲ್ಲಂ ಸುವವರು, ಸಭೆ, ಸಮಾರಂಭ ಆಯೋಜಕರ ವಿರುದ್ಧ ಕೂಡ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಸಿದರು.
ಪರವಾನಿಗೆ ರದ್ದು
ಪಟಾಕಿ ತಯಾರಿಕರಿಂದ ಹಿಡಿದು ಮಾರಾಟ ಮಾಡುವವರೆಗೆ ಎಲ್ಲರೂ ಸಂಬಂಧಿಸಿದ ಇಲಾಖೆಗಳಿಂದ ಪರವಾನಗಿ ಪಡೆಯಬೇಕು. ಅದಕ್ಕಾಗಿಯೇ ಇರುವ ಷರತ್ತು, ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ರಾಜ್ಯಾದ್ಯಂತ ಈ ಬಗ್ಗೆ ತಪಾಸಣೆ ನಡೆಸಿ, ನಿಯಮ ಉಲ್ಲಂ ಸಿರುವುದು ಕಂಡುಬಂದರೆ ಅಂತಹವರಿಗೆ ನೀಡಿರುವ ಪರವಾನಗಿ ರದ್ದುಪಡಿಸುವಂತೆ ಆದೇಶಿಸಲಾಗಿದೆ ಎಂದರು.
ಪ್ರತಿವರ್ಷ ನವೀಕರಣ
ಇದುವರೆಗೆ ಒಮ್ಮೆ ಪರವಾನಿಗೆ ಪಡೆದರೆ 5 ವರ್ಷದವರಗೆ ಅದು ಊರ್ಜಿತದಲ್ಲಿರುತ್ತಿತ್ತು. ಆದರೆ ಇನ್ನು ಮುಂದೆ ಪ್ರತೀ ವರ್ಷವೂ ಪರವಾನಿಗೆ ಪಡೆಯಬೇಕು ಎಂದು ಸಿಎಂ ಹೇಳಿದ್ದಾರೆ. ಪರವಾನಿಗೆ ಪಡೆದವರು ಹಿಂದಿನ ವರ್ಷ ಷರತ್ತು, ನಿಬಂಧನೆಗಳಿಗೆ ತಕ್ಕಂತೆ ನಡೆದುಕೊಂಡಿದ್ದರೆ ಮಾತ್ರ ನವೀಕರಿಸಬಹುದು. ಇಲ್ಲದಿದ್ದರೆ ನಿರಾಕರಿಸಬೇಕು ಸಿಎಂ ಹೇಳಿದ್ದಾರೆ.
ಅಧಿಕಾರಿಗಳ ಅಮಾನತು
ಅತ್ತಿಬೆಲೆ ದುರಂತದಲ್ಲಿ ತಹಸೀಲ್ದಾರ್, ಪೊಲೀಸ್ ಇನ್‌ಸ್ಪೆಕ್ಟರ್, ಅಗ್ನಿಶಾಮಕ ದಳದ ಮುಖ್ಯಾಧಿಕಾರಿ ಕರ್ತವ್ಯಲೋಪ ಎದ್ದುಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅದರ ಜತೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ನೀಡಲು ಸೂಚಿಸಲಾಗಿದೆ ಎಂದರು.
ದೀಪಾವಳಿಗೆ ಮುನ್ನೆಚ್ಚರಿಕೆ
ದೀಪಾವಳಿ ಸಂದರ್ಭ ಪ್ರತೀ ಬಾರಿ ಅನೇಕರು ಕಣ್ಣು ಕಳೆದುಕೊಳ್ಳುವುದು, ಸುಟ್ಟ ಗಾಯಗಳಾಗುವುದು, ಸಾಯುವಂತಹ ಪ್ರಸಂಗಗಳನ್ನೂ ಕಾಣುತ್ತಿದ್ದೇವೆ. ಹೀಗಾಗಿ ಸುಪ್ರೀಂ ಕೋರ್ಟ್ ಮತ್ತು ಹಸುರು ನ್ಯಾಯಪೀಠದ ಆದೇಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಹಸುರು ಪಟಾಕಿಗಳ ಸರಬರಾಜು, ದಾಸ್ತಾನು ಹಾಗೂ ಮಾರಾಟವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಿಎಂ ಸೂಚಿಸಿದರು.
ರಾಜಕೀಯ ಸಮಾವೇಶ, ಮದುವೆ, ಶುಭ ಸಮಾರಂಭಗಳಲ್ಲೂ ಇನ್ನು ಮುಂದೆ ಅಪಾಯಕಾರಿ ಪಟಾಕಿಗಳ ಬದಲು ಹಸುರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ. ಇನ್ನು ಮುಂದೆ ಪ್ರತೀ ವರ್ಷವೂ ಪರವಾನಿಗೆ ನವೀಕರಿಸಬೇಕು. ಕಾನೂನು ಉಲ್ಲಂ ಸಿದವರ ಪರವಾನಿಗೆ ರದ್ದುಪಡಿಸಲಾಗುತ್ತದೆ.
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.