Law: ವಕೀಲರ ಮೇಲಿನ ಹಿಂಸಾಚಾರ ನಿಷೇಧ ಮಸೂದೆಗೆ ಅಂಗೀಕಾರ
ನ್ಯಾಯವಾದಿಗಳ ಮೇಲಿನ ಹಲ್ಲೆ ಜಾಮೀನುರಹಿತ ಪ್ರಕರಣ ಎಂದು ಪರಿಗಣನೆ: ಎಚ್.ಕೆ.ಪಾಟೀಲ್
Team Udayavani, Dec 14, 2023, 11:07 PM IST
ಬೆಳಗಾವಿ: ನ್ಯಾಯವಾದಿಗಳ ಮೇಲಿನ ಹಲ್ಲೆ ಹಾಗೂ ಹಿಂಸಾಚಾರ ತಡೆಯುವುದಕ್ಕಾಗಿ ಜಾರಿಗೆ ತಂದಿರುವ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ದೊರೆತಿದೆ.
ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿ ಸಿದ ಮಸೂದೆಗೆ ಸದನ ಒಕ್ಕೊರಲಿನಿಂದ ಬೆಂಬಲ ವ್ಯಕ್ತಪಡಿಸಿದೆ. ಬಹುಕಾಲದಿಂದ ವಕೀಲರು ಸಲ್ಲಿಸಿದ್ದ ಮನವಿಗೆ ಈ ಮೂಲಕ ಸರಕಾರ ಮನ್ನಣೆ ನೀಡಿದೆ. ನ್ಯಾಯ ವಾದಿಗಳು ಯಾವುದೇ ಭಯ ಅಥವಾ ಪ್ರಭಾವಕ್ಕೆ ಒಳಗಾಗದೇ ಮುಕ್ತವಾಗಿ ತಮ್ಮ ಸೇವೆ ಸಲ್ಲಿಸಲು ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಈ ಕಾಯ್ದೆ ಜಾರಿಗೆ ತರಲಾಗಿದೆ. ಹಲ್ಲೆಗೊಳಗಾದ ನ್ಯಾಯವಾದಿಗಳಿಗೆ ವಕೀಲರ ಕಲ್ಯಾಣ ನಿಧಿಯಿಂದ ನ್ಯಾಯಾಲಯ ನಿಗದಿ ಮಾಡಿದ ಹಣವನ್ನು ಪರಿಹಾರವಾಗಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪಾಟೀಲ್ ವಿವರಿಸಿದರು. ಇದರ ಜತೆಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಮಸೂದೆ, ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಗೂ ಸದನ ಒಪ್ಪಿಗೆ ನೀಡಿದೆ.
ಕಾಯ್ದೆಯಲ್ಲಿ ಏನಿದೆ ?
ಈ ಕಾಯ್ದೆ ಪ್ರಕಾರ ವಕೀಲರ ಮೇಲೆ ಹಲ್ಲೆ ನಡೆಸುವುದನ್ನು ಜಾಮೀನುರಹಿತ ಪ್ರಕರಣ ಎಂದು ಪರಿಗಣನೆ. ಹಲ್ಲೆ ಆರೋಪ ಸಾಬೀತಾದರೆ ಆರೋಪಿಗೆ 6 ತಿಂಗಳಿಂದ 3 ವರ್ಷಗಳ ವರೆಗಿನ ಕಾರಾಗೃಹ ವಾಸ, 1 ಲಕ್ಷ ರೂ. ದಂಡ.ಅಪರಾಧ ಸಂದರ್ಭದಲ್ಲಿ ನ್ಯಾಯವಾದಿಯನ್ನು ಪೊಲೀಸರು ಬಂಧಿಸಿದರೆ 24 ಗಂಟೆಯೊಳಗಾಗಿ ಬಾರ್ ಅಸೋಸಿಯೇಶನ್ ಅಧ್ಯಕ್ಷ ಅಥವಾ ಕಾರ್ಯದರ್ಶಿಗೆ ಬಂಧನದ ವಿಚಾರ ತಿಳಿಸಬೇಕು. ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಕಡಿಮೆ ಇಲ್ಲದ ನ್ಯಾಯಾಲಯದ ಮೂಲಕ ವಿಚಾರಣೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.