ದ.ಕ ದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ,ಡ್ರಗ್ಸ್‌ ವಿರುದ್ಧ ಕಠಿನ ಕ್ರಮ: ಗುಂಡೂರಾವ್‌

ಉದಯವಾಣಿ ಬೆಂಗಳೂರು ಕಚೇರಿಯಲ್ಲಿ ಸಂವಾದ

Team Udayavani, Sep 8, 2023, 10:21 PM IST

dinesh gunduroa

ಬೆಂಗಳೂರು: ದಕ್ಷಿಣ ಕನ್ನಡ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವುದರ ಜತೆಗೆ ಅಲ್ಲಿನ ಡ್ರಗ್ಸ್‌ ದಂಧೆ, ಕೋಮುಸಾಮರಸ್ಯ ಕದಡುವವರ ವಿರುದ್ಧ ಕಠಿನ ಕ್ರಮ, ಬೆಂಗಳೂರು – ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿ ಸುರಂಗ ಮಾರ್ಗ ಚಿಂತನೆ, ಕಡಲ್ಕೊರತೆಕ್ಕೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಬೆಂಗಳೂರು “ಉದಯವಾಣಿ’ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶಗಳಿವೆ. ಈ ಬಾರಿಯ ಬಜೆಟ್‌ನಲ್ಲಿ ಸರ್ಫಿಂಗ್‌ ವ್ಯವಸ್ಥೆ ಅಭಿವೃದ್ಧಿಪಡಿಸುವುದಾಗಿ ಘೋಷಿಸಿದ್ದೇವೆ. ಕೇರಳ, ಗೋವಾದಲ್ಲಿ ಪ್ರವಾಸೋದ್ಯಮ ಬೆಳೆದ ಮಾದರಿಯಲ್ಲೇ ಕರಾವಳಿ ಕರ್ನಾಟಕದಲ್ಲೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಸದ್ಯದಲ್ಲೇ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ದಕ್ಷಿಣ ಕನ್ನಡದಲ್ಲಿ ಸುಂದರ ಬೀಚ್‌ಗಳು, ಧಾರ್ಮಿಕ ಸ್ಥಳಗಳಿವೆ. ಧಾರ್ಮಿಕ ಪ್ರವಾಸೋದ್ಯಮದಿಂದ ಆರ್ಥಿಕ ವ್ಯವಸ್ಥೆಗೆ ಅಷ್ಟೊಂದು ಅನುಕೂಲ ಆಗುವುದಿಲ್ಲ. ಪ್ರವಾಸಿಗರು ಅಲ್ಲೇ ಉಳಿದುಕೊಂಡು ಹೋಗುವ ವ್ಯವಸ್ಥೆ ಕಲ್ಪಿಸಿದರೆ ಆರ್ಥಿಕತೆಗೆ ಸಹಾಯವಾಗಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗುತ್ತವೆ. ಹೀಗಾಗಿ ಈ ಮಾದರಿಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ವಿವರಿಸಿದರು.

ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ರೆಸಾರ್ಟ್‌, ಆಯುರ್ವೆದ, ಪ್ರಕೃತಿ ಚಿಕಿತ್ಸೆಯಂತಹ ಹೊಸ ವ್ಯವಸ್ಥೆ ಸೃಷ್ಟಿಸಿ ಜನರನ್ನು ಆಕರ್ಷಿಸುವಂತೆ ಮಾಡಬೇಕಾಗಿದೆ. ಕರಾವಳಿಯಲ್ಲಿ ಸಾಕಷ್ಟು ದ್ವೀಪ, ಬೀಚ್‌, ಹಿನ್ನೀರುಗಳಿವೆ. ಅವುಗಳನ್ನು ಅಭಿವೃದ್ಧಿಪಡಿಸಿದರೆ ಜನ ಬರುತ್ತಾರೆ. 15 ವರ್ಷಗಳ ಹಿಂದೆ ಪ್ರವಾಸಕ್ಕಾಗಿ ಮಂಗಳೂರಿಗೆ ಸಾಕಷ್ಟು ಮಂದಿ ಹೋಗುತ್ತಿದ್ದರು. ಇತ್ತೀಚೆಗೆ ಇದರ ಪ್ರಮಾಣ ಕಡಿಮೆಯಾಗಿದೆ. ಸದ್ಯ ದಕ್ಷಿಣ ಕನ್ನಡದಲ್ಲಿ ಮನರಂಜನೆ, ಪ್ರವಾಸೋದ್ಯಮಕ್ಕೆ ಹೆಚ್ಚು ಪ್ರಾತಿನಿಧ್ಯ ಸಿಗುತ್ತಿಲ್ಲ. ಇದರಿಂದ ಅಲ್ಲಿನ ಯುವಕರು ನಿರುದ್ಯೋಗಿಗಳಾಗಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಅಲ್ಲಿ ನಿರೀಕ್ಷೆಗೆ ತಕ್ಕಂತೆ ಪ್ರವಾಸೋದ್ಯಮ ಬೆಳೆಯದಿರಲು ಸ್ಥಳೀಯ ಗಲಾಟೆ, ಸಂಘರ್ಷಗಳು ಒಂದು ರೀತಿಯಲ್ಲಿ ಕಾರಣವಾಗಿರಬಹುದು ಎಂದರು.

ಡ್ರಗ್ಸ್‌ ದಂಧೆ ವಿರುದ್ಧ ಕಠಿನ ಕ್ರಮ
ನಾನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವನಾದ ಬಳಿಕ ಸ್ಪೀಕರ್‌ ಯು.ಟಿ.ಖಾದರ್‌ ಜತೆ ಅಲ್ಲಿನ ಪೊಲೀಸ್‌ ಆಯುಕ್ತರು, ಎಸ್‌ಪಿ, ಇನ್‌ಸ್ಪೆಕ್ಟರ್‌ಗಳನ್ನು ಕರೆದು ಸಭೆ ನಡೆಸಿ ಮಾದಕ ವಸ್ತು ದಂಧೆ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಸೂಕ್ತ ಯೋಜನೆ ರೂಪಿಸುವಂತೆ ಸಲಹೆ ನೀಡಿದ್ದೇವೆ. ಮುಂದಿನ ಎರಡು-ಮೂರು ತಿಂಗಳಿನಲ್ಲಿ ಜನರಿಗೆ ಗೊತ್ತಾಗುವ ರೀತಿ
ಯಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ಸೂಚನೆ ಕೊಟ್ಟಿದ್ದೆವು. ಅದರಂತೆ ಪೊಲೀಸ್‌ ಕಮೀಷನರ್‌ ಹಾಗೂ ಎಸ್‌ಪಿ ಸಮರ್ಪಕವಾಗಿ ಡ್ರಗ್ಸ್‌ ದಂಧೆ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ನೈತಿಕ ಪೊಲೀಸ್‌ಗಿರಿ, ಕೋಮುದ್ವೇಷ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಯಾವುದೇ ಧರ್ಮ, ಪ್ರಭಾವಿಗಳ ಹಿಂಬಾಲಕರನ್ನು ಲೆಕ್ಕಿಸದೆ ಕ್ರಮ ಕೈಗೊಂಡು ಬಿಸಿ ಮುಟ್ಟಿಸಬೇಕು. ಇದಾದ ಬಳಿಕ ದಕ್ಷಿಣ ಕನ್ನಡದಲ್ಲಿ ಸ್ವಲ್ಪ ಸುಧಾರಣೆ ಕಂಡು ಬಂದಿದೆ ಎಂದರು.

ಪೊಲೀಸ್‌ ಆಯುಕ್ತರ ವರ್ಗಾವಣೆ ಉದ್ದೇಶಪೂರ್ವಕ ಅಲ್ಲ
ಉದ್ದೇಶಪೂರ್ವಕವಾಗಿ ನಾವು ಮಂಗಳೂರು ಪೊಲೀಸ್‌ ಆಯುಕ್ತರನ್ನು ವರ್ಗಾಯಿಸಲಿಲ್ಲ. ಅಧಿಕಾರಿಗಳು ಬರುತ್ತಾರೆ, ಹೋಗುತ್ತಾರೆ. ಅವರಿಗೆ ಅಪರಾಧ ಚಟುವಟಿಕೆ ವಿರುದ್ಧ ಕ್ರಮ ಕೈಗೊಳ್ಳಲು ಪ್ರೋತ್ಸಾಹ ನೀಡುತ್ತೇವೆ ಎಂದರು.

ಕಾನೂನು ಸುವ್ಯವಸ್ಥೆ
ದಕ್ಷಿಣ ಕನ್ನಡದಲ್ಲಿ ಸುರಕ್ಷೆ ಬಗ್ಗೆ ಜನರಲ್ಲಿ ಸ್ವಲ್ಪ ಆತಂಕವಿದೆ. ಅಲ್ಲಿನ ಕಾಲೇಜುಗಳಲ್ಲಿ ಶಿಕ್ಷಣ ಪಡೆಯಲು ಮಕ್ಕಳನ್ನು ಸೇರಿಸಬಹುದೇ ಎಂದು ಹಲವರು ಕೇಳುತ್ತಿದ್ದಾರೆ. ಅಲ್ಲಿ ಸದ್ಯ ಕಾನೂನು ಸುವ್ಯವಸ್ಥೆಗಳು ಉತ್ತಮವಾಗಿದ್ದು, ಆತಂಕಪಡಬೇಕಾಗಿಲ್ಲ ಎಂದು ಸಲಹೆ ಕೊಟ್ಟಿದ್ದೇನೆ ಎಂದರು.

ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ
ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ಸುಲಭವಿಲ್ಲ. ಸಮುದ್ರವನ್ನು ತಡೆಹಿಡಿಯುವುದು ಕಷ್ಟ. ನಾವು ಒಂದು ಕಡೆ ಇದಕ್ಕೆ ವ್ಯವಸ್ಥೆ ಕಲ್ಪಿಸಲು ಹೋದರೂ ಪರಿಣಾಮ ಬೇರೆಯಾಗುತ್ತದೆ. ತಜ್ಞರನ್ನು ಕರೆಸಿ ವೈಜ್ಞಾನಿಕವಾಗಿ ಪರಿಹಾರ ಕಂಡುಕೊಳ್ಳಬೇಕಿದೆ. ಇದರ ಬಗ್ಗೆ ಸೂಕ್ತ ಅಧ್ಯಯನ ನಡೆಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳೂ ಸೂಚಿಸಿದ್ದಾರೆ. ಬಟ್ಟಪ್ಪಾಡಿಯ ಬಳಿಯೂ ತಡೆಗೋಡೆ ಕಟ್ಟಿದ ಮೇಲೆ ಕಡಲ್ಕೊರೆತ ಹೆಚ್ಚಾಗಿದೆ ಎಂದರು.

ಮೀನುಗಾರಿಗೆ ನೀಡಿದ ಆಶ್ವಾಸನೆ ಈಡೇರಿಕೆ
ಮೀನುಗಾರರಿಗೆ ಬಜೆಟ್‌ನಲ್ಲಿ ಕೊಟ್ಟಿರುವ ಆಶ್ವಾಸನೆಯನ್ನು ಈಡೇರಿಸಿದ್ದೇವೆ. ಸಬ್ಸಿಡಿ ಹೆಚ್ಚಿಸುವುದು, ಸಾಲ ಸೌಲಭ್ಯ, ದೊಡ್ಡ ಬೋಟ್‌ಗೆ ಹೆಚ್ಚಿನ ಡೀಸೆಲ್‌ ಕೊಡುವುದು ಸಹಿತ ಹಲವು ಅನುಕೂಲ ಮಾಡಿಕೊಡಲಾಗಿದೆ.

ಸುರಂಗ ಮಾರ್ಗ ನಿರ್ಮಾಣಕ್ಕೆ ಪ್ರಸ್ತಾವನೆ
ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳು ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಅಲ್ಲಿ ಸುರಂಗ ಮಾರ್ಗ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಲೋಕೋಪಯೋಗಿ ಸಚಿವರ ಜತೆಗೆ ಈ ಬಗ್ಗೆ ಚರ್ಚಿಸಿದ್ದೇನೆ. ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜತೆಗೆ ಸಭೆ ನಡೆಸುವುದಾಗಿ ಹೇಳಿದ್ದಾರೆ. ಪರಿಸರಕ್ಕೆ ಹಾನಿಯಾಗದಂತೆ ಸಾಧಕ ಬಾಧಕ ನೋಡಿಕೊಂಡು ಸರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು.

ಸಂವಾದದ ಪ್ರಮುಖ ಅಂಶಗಳು
ಡಿಸೆಂಬರ್‌ ವೇಳೆಗೆ ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಅಗತ್ಯ ಔಷಧ ಪೂರೈಸುವ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ.
ಸರಕಾರಿ ವೈದ್ಯರು ಹೊರಗಡೆ ಚೀಟಿ ಬರೆದುಕೊಡುವ ಪರಿಪಾಠಕ್ಕೆ ಕಡಿವಾಣ ಹಾಕಲಾಗುವುದು.
 ಸ್ವಾಸ್ಥ್ಯದ ಬಗ್ಗೆ ಜಾಗೃತಿ, ಆರೋಗ್ಯ ಸಮಸ್ಯೆಗಳಿಗೆ ಮುಂಜಾಗ್ರತಾ ಕ್ರಮ ಮುಂತಾದವುಗಳಿಗಾಗಿ “ಗೃಹ ಆರೋಗ್ಯ’ ಕಾರ್ಯಕ್ರಮ ಜಾರಿಗೆ ತರಲಾಗುವುದು.
 ಡಯಾಲಿಸಿಸ್‌ ಸೆಂಟರ್‌ಗಳ ನಿರ್ವಹಣೆಗೆ ಮರು ಟೆಂಡರ್‌ ಕರೆಯುವ ಬಗ್ಗೆ ಸೋಮವಾರ ತೀರ್ಮಾನ.
ಆಯುಷ್ಮಾನ್‌ ಭಾರತ್‌ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯಡಿ 2016ರ ಚಿಕಿತ್ಸಾ ದರದ ಪ್ಯಾಕೇಜ್‌ನ್ನು ಪರಿಷ್ಕರಣೆಯಾಗಲಿದೆ.
 ಶುಚಿ ಯೋಜನೆಯಡಿ ಸ್ಯಾನಿಟರಿ ನ್ಯಾಪಕಿನ್‌ ವಿತರಣೆ ಸಂಬಂಧ 2 ವಾರದಲ್ಲಿ ಟೆಂಡರ್‌ ಕರೆಯಲಾಗುವುದು.

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.