ವರದಿ ಸಲ್ಲಿಸಲು 9 ಜನರ ಸಮಿತಿ ರಚನೆ
ಮಂಗಳೂರಿನಲ್ಲಿ ಮೀನುಗಾರಿಕೆ ವಿಜ್ಞಾನ ವಿಶ್ವ ವಿದ್ಯಾನಿಲಯ ಸ್ಥಾಪನೆ ಪ್ರಸ್ತಾವ
Team Udayavani, Dec 21, 2021, 5:40 AM IST
ಮಂಗಳೂರು: ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂಗಳೂರಿನ ಮೀನುಗಾರಿಕೆ ಕಾಲೇಜನ್ನು ಪ್ರತ್ಯೇಕಿಸಿ ಮೀನುಗಾರಿಕೆ ವಿಜ್ಞಾನ ವಿ.ವಿ. ಸ್ಥಾಪಿಸುವ ಬಗ್ಗೆ ವರದಿಯನ್ನು ಸಲ್ಲಿಸಲು ಸಮಿತಿಯನ್ನು ಪುನಾರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
9 ಮಂದಿ ಸದಸ್ಯರಿರುವ ಈ ಸಮಿತಿಗೆ ಬೆಂಗಳೂರಿನ ಹೆಬ್ಟಾಳದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರು ಅಧ್ಯಕ್ಷರಾಗಿದ್ದು, ಮೀನುಗಾರಿಕಾ ಕಾಲೇಜಿನ ನಿವೃತ್ತ ಪ್ರೊಫೆಸರ್ ಹಾಗೂ ಪ್ರಸ್ತುತ ನಿಟ್ಟೆ ವಿ.ವಿ.ಯ ಸಂಶೋಧನಾ ಮತ್ತು ಪೇಟೆಂಟ್ ವಿಭಾಗದ ಸಲಹೆಗಾರರಾಗಿರುವ ಪ್ರೊ| ಐ. ಕರುಣಾ ಸಾಗರ್ ಸಹ- ಅಧ್ಯಕ್ಷರಾಗಿರುತ್ತಾರೆ. ದ.ಕ. ಜಿ.ಪಂ. ಸಿಇಒ ಡಾ| ಕುಮಾರ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕರು, ಕೃಷಿ ವಿ.ವಿ. ಕುಲ ಸಚಿವರು, ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿ.ವಿ.ಯ ಕುಲ ಸಚಿವರು, ಮೀನುಗಾರಿಕಾ ಕಾಲೇಜಿನ ಡೀನ್ ಪ್ರೊ| ಸೆಂಥಿಲ್ ವೇಲ್, ಕಾಲೇಜಿನ ಮುಖ್ಯಸ್ಥ ಡಾ| ಆಂಜನಪ್ಪ ಸಮಿತಿಯ ಸದಸ್ಯರಾಗಿರುತ್ತಾರೆ. ಮೀನುಗಾರಿಕಾ ನಿರ್ದೇಶನಾಲಯದ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.
ಜ. 31 ರೊಳಗೆ ವರದಿ ಸಲ್ಲಿಕೆ
ಈ ಸಮಿತಿಯು ಮೀನುಗಾರಿಕಾ ಕಾಲೇಜನ್ನು ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದಿಂದ ಪ್ರತ್ಯೇಕಿಸಿ ಮೀನುಗಾರಿಕಾ ವಿಜ್ಞಾನಗಳ ವಿಶ್ವ ವಿದ್ಯಾನಿಲಯ ಸ್ಥಾಪಿಸುವ ಬಗ್ಗೆ ಅಥವಾ ಪ್ರಸ್ತುತ ಸಂಯೋಜನೆಗೊಂಡಿರುವ ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದ ಅಧೀನದಲ್ಲಿಯೇ ಮುಂದುವರಿಸುವ ಬಗ್ಗೆ ವರದಿಯನ್ನು 2022ರ ಜನವರಿ 31 ರೊಳಗೆ ಸರಕಾರಕ್ಕೆ ಸಲ್ಲಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ಒಂದೊಮ್ಮೆ ಮೀನುಗಾರಿಕಾ ಕಾಲೇಜನ್ನು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದಿಂದ ಪ್ರತ್ಯೇಕಿಸಿ ಮೀನುಗಾರಿಕಾ ವಿಜ್ಞಾನಗಳ ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸಬಹುದಾದಲ್ಲಿ ಸೂಕ್ತ ಸಲಹೆ, ಸೂಚನೆಗಳನ್ನು ವರದಿಯಲ್ಲಿ ಉಲ್ಲೇಖೀಸಬೇಕು. ಅಲ್ಲದೆ ವರದಿ ಸಲ್ಲಿಸುವ ಮೊದಲು ಮೀನುಗಾರಿಕಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಪ್ರಸ್ತುತ ವಿದ್ಯಾರ್ಥಿಗಳ ಸಂಘದ ಅಭಿಪ್ರಾಯವನ್ನು ಪಡೆಯಬೇಕೆಂದು ಸೂಚಿಸಲಾಗಿದೆ.
ಆಕ್ಷೇಪ-ಹೊಸ ಆದೇಶ
ಮೀನುಗಾರಿಕಾ ಕಾಲೇಜನ್ನು ವಿ.ವಿ.ಯಿಂದ ಪ್ರತ್ಯೇಕಿಸಿ ಮಿನುಗಾರಿಕೆ ವಿಜ್ಞಾನ ವಿಶ್ವ ವಿದ್ಯಾನಿಲಯದ ಬದಲು ಮೀನುಗಾರಿಕಾ ಸಂಶೋಧನಾ ಮತ್ತು ತಂತ್ರಜ್ಞಾನ ಸಂಸ್ಥೆ (ಸ್ವಾಯತ್ತ)ಯನ್ನಾಗಿ ಸ್ಥಾಪಿಸುವ ಬಗ್ಗೆ ಪರಿಶೀಲಿಸಿ, ಸಾಧಕ ಬಾಧಕಗಳ ಬಗ್ಗೆ ವರದಿಯನ್ನು ಸಲ್ಲಿಸುವಂತೆ 7 ಮಂದಿ ಸದಸ್ಯರ ಸಮಿತಿಯನ್ನು ರಚಿಸಿ ಡಿ. 1ರಂದು ಸರಕಾರ ಆದೇಶ ಹೊರಡಿಸಿತ್ತು. ಆದರೆ ಈ ಸಮಿತಿಯ ಬಗ್ಗೆ ಗೊಂದಲ ಹಾಗೂ ಸರಕಾರದ ವಿರುದ್ಧ ಟೀಕೆಗಳು ಕೇಳಿ ಬಂದಿದ್ದವು. ಹಾಗಾಗಿ ಸರಕಾರ ಡಿ. 1ರ ಆದೇಶವನ್ನು ಹಿಂಪಡೆದು ಸೋಮವಾರ (ಡಿ.20) ಪುನರ್ ಆದೇಶವನ್ನು ಹೊರಡಿಸಿದೆ. ಈ ಪರಿಷ್ಕೃತ ಆದೇಶದಲ್ಲಿ ಮೀನುಗಾರಿಕಾ ಸಂಶೋಧನಾ ಮತ್ತು ತಂತ್ರಜ್ಞಾನ ಸಂಸ್ಥೆ (ಸ್ವಾಯತ್ತ) ಸ್ಥಾಪನೆಯ ಬಗ್ಗೆ ಪ್ರಸ್ತಾವ ಇಲ್ಲ. ಬದಲಾಗಿ ವಿಶ್ವ ವಿದ್ಯಾನಿಲಯ ಸ್ಥಾಪನೆಯ ಕುರಿತಂತೆ ವರದಿ ಸಲ್ಲಿಸಲು ಮಾತ್ರ ಪ್ರಸ್ತಾವ ಇದೆ. ಮೊದಲು ರಚಿಸಲಾಗಿದ್ದ ಸಮಿತಿಯಲ್ಲಿ 7 ಮಂದಿ ಇದ್ದರೆ, ಈಗಿನ ಸಮಿತಿಯಲ್ಲಿ 9 ಮಂದಿ ಇದ್ದಾರೆ.
ಗಮನ ಸೆಳೆದಿದ್ದ ಉದಯವಾಣಿ
ಮಂಗಳೂರಿನ ಮೀನುಗಾರಿಕಾ ಕಾಲೇಜನ್ನು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದಿಂದ ಪ್ರತ್ಯೇಕಿಸಿ ಮೀನುಗಾರಿಕಾ ವಿಜ್ಞಾನಗಳ ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸುವ ಅಗತ್ಯತೆ ಕುರಿತಂತೆ ಉದಯವಾಣಿ ಈ ಹಿಂದೆ ವರದಿಯನ್ನು ಪ್ರಕಟಿಸಿತ್ತು.
ಕರಾವಳಿ ಭಾಗದಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಮೀನುಗಾರಿಕೆಗೆ ಸಂಬಂಧಿಸಿದ ವಿಶ್ವ ವಿದ್ಯಾನಿಲಯ ಕರಾವಳಿಯಲ್ಲಿದ್ದರೆ ಇಲ್ಲಿನ ಜನರಿಗೆ ಅನುಕೂಲ. ಅದು ದೂರದ ಬೀದರ್‌ನಲ್ಲಿರುವುದರಿಂದ ಮೀನುಗಾರರಿಗೆ ಯಾವುದೇ ರೀತಿಯಲ್ಲಿ ಉಪಯೋಗಕ್ಕೆ ಬರುವುದಿಲ್ಲ. ಆದುದರಿಂದ ಅದು ಬೇಗನೆ ಮಂಗಳೂರಿಗೆ ಬರಬೇಕೆಂದು ಆಗ್ರಹಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.