Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
ಇನ್ನು ಹಲವು ಪ್ರಸ್ತಾಪಗಳ ಮುಂದಿಟ್ಟ ಆಯೋಗ ಅಧ್ಯಕ್ಷೆ, ಮಹಿಳೆಯರು, ಬಾಲಕಿಯರಿಂದ ಶೋಷಣೆ ದೂರುಗಳಿಂದಾಗಿ ಈ ಕ್ರಮ
Team Udayavani, Nov 8, 2024, 7:56 PM IST
ಹೊಸದಿಲ್ಲಿ: ಮಹಿಳೆಯರ ಬಟ್ಟೆಗಳ ಹೊಲಿಯಲು ಪುರುಷ ಟೈಲರ್ ಅಳತೆ ತೆಗೆಯಬಾರದು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ಪುರುಷರು ಅವರ ಕೂದಲನ್ನು ಕತ್ತರಿಸಬಾರದೆಂಬ ಪ್ರಸ್ತಾವನೆಯನ್ನು ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಬಬಿತಾ ಚೌಹಾಣ್ ಮಂಡಿಸಿದ್ದು ಇದಕ್ಕೆ ಇತರ ಸದಸ್ಯರು ಬೆಂಬಲ ಸೂಚಿಸಿದ್ದಾರೆ. ಮಹಿಳೆಯರ ‘ಕೆಟ್ಟ ಸ್ಪರ್ಶ’ದಿಂದ ರಕ್ಷಿಸಲು ಮತ್ತು ಪುರುಷರ ಕೆಟ್ಟ ಉದ್ದೇಶಗಳ ತಡೆಯುವುದಾಗಿದೆ.
ಈ ಕುರಿತು ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಬಬಿತಾ ಚೌಹಾಣ್ ಮಾತನಾಡಿ ಪುರುಷರಿಗೆ ಮಹಿಳೆಯರ ಅಳತೆ ತೆಗೆದುಕೊಳ್ಳಲು ಅವಕಾಶ ನೀಡಬಾರದು ಮತ್ತು ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸುವುದು ಸೇರಿದಂತೆ ಹಲವು ಸಲಹೆಗಳ ನೀಡಲಾಗಿದೆ. ಮಹಿಳೆಯರು ಹೋಗುವ ಜಿಮ್‌ಗಳಲ್ಲಿ ಮಹಿಳಾ ತರಬೇತುದಾರರು ಇರಬೇಕು. ಎಲ್ಲಾ ಜಿಮ್ ತರಬೇತುದಾರರ ಪೊಲೀಸ್ ಪರಿಶೀಲನೆ ನಡೆಸಬೇಕು. ಒಬ್ಬ ಮಹಿಳೆ ಪುರುಷ ತರಬೇತುದಾರರಿಂದ ತರಬೇತಿ ಪಡೆಯಲು ಬಯಸಿದರೆ, ಅವಳು ಅದನ್ನು ಲಿಖಿತವಾಗಿ ನೀಡಬೇಕು.
ಏಕೆಂದರೆ, ಜಿಮ್‌ಗೆ ಹೋಗುವ ಮಹಿಳೆಯರು ಮತ್ತು ಬಾಲಕಿಯರ ಶೋಷಣೆಯ ದೂರುಗಳು ಮಹಿಳಾ ಆಯೋಗಕ್ಕೆ ನಿರಂತರವಾಗಿ ಬರುತ್ತಿದ್ದು, ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಷ್ಟೇ ಅಲ್ಲ, ಹೆಣ್ಣು ಮಕ್ಕಳು ಪ್ರಯಾಣಿಸುವ ಶಾಲಾ ಬಸ್‌ಗಳಲ್ಲಿ ಮಹಿಳಾ ಉದ್ಯೋಗಿಗಳಿರಬೇಕು. ಸದ್ಯ ಮಹಿಳಾ ಆಯೋಗ ಎಲ್ಲ ಜಿಲ್ಲೆಗಳಿಗೂ ಈ ಸಂಬಂಧ ಆದೇಶ ನೀಡಿದೆ. ಒಪ್ಪದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಎಲ್ಲ ಪುರುಷರಿಗೂ ಕೆಟ್ಟ ಉದ್ದೇಶವಿರಲ್ಲ:
ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯೆ ಹಿಮಾನಿ ಅಗರ್ವಾಲ್ ಮಾತನಾಡಿ, ಇತ್ತೀಚೆಗೆ ನಡೆದ ಮಹಿಳಾ ಆಯೋಗದ ಸಭೆಯಲ್ಲಿ, ಮಹಿಳೆಯರು ಧರಿಸುವ ಬಟ್ಟೆಗಳನ್ನು ಮಹಿಳಾ ಟೈಲರ್‌ಗಳು ಮಾತ್ರ ಅಳತೆ ತೆಗೆದುಕೊಳ್ಳಬೇಕು ಎಂಬ ಪ್ರಸ್ತಾಪ ಮಾಡಲಾಗಿದೆ. ಅಲ್ಲದೇ ಅಂಗಡಿಯಲ್ಲಿ ಸಿಸಿಟಿವಿ ಅಳವಡಿಸಬೇಕು. ಮಹಿಳಾ ಕ್ಷೌರಿಕರು ಮಾತ್ರ ಸಲೂನ್‌ನಲ್ಲಿ ಮಹಿಳಾ ಗ್ರಾಹಕರನ್ನು ನೋಡಿಕೊಳ್ಳಬೇಕು ಎಂದು ನಾವು ಹೇಳಿದ್ದೇವೆ. ಏಕೆಂದರೆ, ಈ ರೀತಿಯ ವೃತ್ತಿಯಲ್ಲಿ ಪುರುಷರು ತಪ್ಪಾಗಿ ವರ್ತಿಸಲು ಪ್ರಯತ್ನಿಸುತ್ತಾರೆ. ಕೆಲವು ಪುರುಷರ ಉದ್ದೇಶಗಳು ಸಹ ಒಳ್ಳೆಯದಲ್ಲ. ಆದರೆ, ಎಲ್ಲ ಪುರುಷರಿಗೂ ಕೆಟ್ಟ ಉದ್ದೇಶವಿರುತ್ತದೆ ಎಂದಲ್ಲ ಎಂದು ಹೇಳಿದರು.
ಅಕ್ಟೋಬರ್ 28ರಂದು ನಡೆದ ಮಹಿಳಾ ಆಯೋಗದ ಸಭೆಯ ನಂತರ, ಹಾಗೆಯೇ ಸದ್ಯ ಇದು ಕೇವಲ ಪ್ರಸ್ತಾವನೆಯಾಗಿದ್ದು, ನಂತರ ಮಹಿಳಾ ಆಯೋಗ ಈ ಬಗ್ಗೆ ಕಾನೂನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಿದೆ. ಮಹಿಳಾ ಆಯೋಗದ ನಿಯಮಗಳನ್ನು ಪಾಲಿಸುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.