ಕಾಯ್ದೆ ವಿರುದ್ಧ ಪ್ರತಿಭಟನೆ ರಾಜಕೀಯ ಪ್ರೇರಿತ
Team Udayavani, Jan 26, 2021, 3:11 PM IST
ರಾಮನಗರ: ರೈತರ ಕಲ್ಯಾಣಕ್ಕಾಗಿ ರೂಪಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ದೂರಿದರು.
ತಾಲೂಕು ಬಿಡದಿ ಪಟ್ಟಣದಲ್ಲಿ ಟೊಯೋಟ ಕಿರ್ಲೋಸ್ಕರ್ ಮೋಟಾರ್ ಕಂಪನಿ ತನ್ನ ಸಿ.ಎಸ್.ಆರ್. ನಿಧಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಮಾದರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಮತ್ತು ಕೃಷಿಗೆ ಪೂರಕ ವಾತಾವರಣದ ಬಗ್ಗೆ ಕಳೆದ 73 ವರ್ಷಗಳಲ್ಲಿ ಮಾಡಲಾಗದ್ದನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಅಪಪ್ರಚಾರ ನಡೆಸುತ್ತ
ರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.
ಇದು ರೈತ ವಿರೋಧಿ ಷಡ್ಯಂತ್ರ: ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾತ್ರ ಸೀಮಿತವಾಗಿದ್ದ ರೈತರು ತಾವು ಬೆಳೆದ ಬೆಳೆಗಳನ್ನು ಈಗ ಎಲ್ಲಿ ಬೇಕಾದರೂ ಮಾರಿಕೊಳ್ಳಬಹುದು. ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕತೆ ಇದ್ದರೆ ಅನ್ನದಾತನಿಗೆ ಉತ್ತಮ ಬೆಲೆ ಸಿಗುತ್ತದೆ. ದಲ್ಲಾಳಿಗೆ ಇದನ್ನು ಸಹಿಸಲು ಆಗುತ್ತಿಲ್ಲ. ಹೀಗಾಗಿಯೇ ರೈತರನ್ನು ಎತ್ತಿಕಟ್ಟಲಾಗುತ್ತಿದೆ. ರೈತ ವಿರೋಧಿ ಕೆಲಸಗಳಲ್ಲಿ ತೊಡಗಿರುವ ಕೆಲವರು ಈ ಎಲ್ಲ ಷಡ್ಯಂತ್ರಗಳ ಹಿಂದೆ ಇದ್ದಾರೆ. ದೇಶ ಮುನ್ನಡೆಯುವುದನ್ನು ವ್ಯವಸ್ಥಿತವಾಗಿ ತಡೆಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ರೈತರು ಆರ್ಥಿಕವಾಗಿ ಪ್ರಬಲರಾಗುವುದು ಅವರಿಗೆ ಇಷ್ಟವಿಲ್ಲ. ಯಾವತ್ತಿಗೂ ಅವರು ಮತ ಬ್ಯಾಂಕ್‌ನ ಬಲಿಪಶುಗಳಾಗಿಯೇ ಇರಬೇಕು ಎಂಬುದು ಅವರ ದುರದ್ದೇಶ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ:ಹವ್ಯಾಸಕ್ಕೆ ಅನುಗುಣವಾಗಿ ಖಾತೆ ಹಂಚಿಕೆ ಮಾಡಲಾಗಿದೆ: ಡಿಸಿಎಂ ಲಕ್ಷ್ಮಣ ಸವದಿ
ಪ್ರತಿಭಟನೆ ಹಿಂದೆ ದುರುದ್ದೇಶ: ಕೃಷಿ ಕಾಯ್ದೆಗಳಲ್ಲಿ ರೈತರಿಗೆ ಮಾರಕವಾದ ಒಂದು ಅಂಶವೂ ಇಲ್ಲ. ಸ್ವತಃ ಪ್ರಧಾನಮಂತ್ರಿಗಳೇ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರು ಎಲ್ಲ ಅನುಮಾನಗಳನ್ನು ಬಗೆಹರಿಸಿದ್ದಾರೆ. ಇಷ್ಟಾದರೂ ಹಠಕ್ಕೆ ಬಿದ್ದು ರೈತರನ್ನು ಹಾದಿ ತಪ್ಪಿಸುತ್ತಿದ್ದಾರೆ. ಇದರ ಹಿಂದೆ ಯಾವುದೋ ದುರುದ್ದೇಶ ಅಡಗಿದೆ. ಇಂಥಹ ಜನಪರ ಕಾರ್ಯಕ್ರಮಗಳಿಂದ ಹಿಂದೆ
ಸರಿಯುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕೃಷಿ ಕೇಂದ್ರಗಳ ಲೋಪ ಸರಿಮಾಡುತ್ತೇವೆ:
ರಾಮನಗರ ಜಿಲ್ಲೆಯ ಕೃಷಿ ಸೇವಾ ಕೇಂದ್ರಗಳಲ್ಲಿ ಲೋಪಗಳಿವೆ ಎಂದು ಸುದ್ದಿಗಾರರು ಗಮನ ಸೆಳೆದಾಗ ಪ್ರತಿಕ್ರಿಯಿಸಿ, ಲೋಪಗಳನ್ನು ಖಂಡಿತಾ ಸರಿಪಡಿಸಲಾಗುವುದು. ಯಾವ ಉದ್ದೇಶಕ್ಕೆ ಆ ಕೇಂದ್ರಗಳನ್ನು ಸ್ಥಾಪಿಸಲಾಗಿದೆಯೋ ಅದು
ಈಡೇರಲೇಬೇಕು. ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಈ ಕೇಂದ್ರಗಳಲ್ಲಿನ ಯಂತ್ರೋಪಕರಣಗಳನ್ನು ಕೂಡಲೇ ಅರ್ಹ
ಫಲಾನುಭವಿಗಳಿಗೆ ವಿತರಿಸುವಂತೆ ಆದೇಶ ನೀಡಲಾಗುವುದು ಎಂದರು.
ಮಾಗಡಿ ಶಾಸಕ ಎ.ಮಂಜುನಾಥ, ಎಂ.ಎಲ್.ಸಿ ಸಿ.ಎಂ.ಲಿಂಗಪ್ಪ, ಜಿಪಂ ಅಧ್ಯಕ್ಷ ಅಶೋಕ್, ಜಿಲ್ಲಾಧಿಕಾರಿ ಎಂ.ಎ ಸ್.ಅರ್ಚನಾ, ಜಿಪಂ ಸಿಇಒ ಇಕ್ರಂ, ಎಸ್‌ಪಿ ಗಿರೀಶ್, ಬಿಡದಿ ಪುರಸಭಾಧ್ಯಕ್ಷೆ ಸರಸ್ವತಿ, ಡಿಎಚ್‌ಒ ಡಾ.ನಿರಂಜನ, ಟೊಯೋಟಾ ಜನರಲ್ ಮೇನೇಜರ್ (ಸಿಎಸ್‌ಆರ್) ರಾಜೇಂದ್ರ ಹೆಗ್ಡೆ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.