ಕಗ್ಗಂಟಾದ ಬಿಜೆಪಿ ಟಿಕೆಟ್: ಸಿಎಂ ಮನೆಮುಂದೆ ಧರಣಿ ಕುಳಿತ ಶರತ್ ಬಚ್ಚೇಗೌಡ ಬೆಂಬಲಿಗರು
Team Udayavani, Sep 24, 2019, 9:58 AM IST
ಸಂಗ್ರಹ ಚಿತ್ರ
ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪಚುನಾವನಣೆ ಘೋಷಣೆಯಾದ ನಂತರ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆಯ ತಲೆನೋವು ಆರಂಭವಾಗಿದೆ. ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಈಗ ಬಿಜೆಪಿಯಲ್ಲಿಯೇ ಲಾಭಿ ಆರಂಭವಾಗಿದ್ದು, ಮಂಗಳವಾರ ಬೆಳಿಗ್ಗೆ ಸಂಸದ ಬಿ ಎನ್ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡರಿಗೆ ಟಿಕೆಟ್ ಕೊಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ನಿವಾಸದ ಮುಂದೆ ಧರಣಿ ನಡೆಯಿತು.
ಸಂಸದ ಬಿ ಎನ್ ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡ ಅವರು ಹೊಸಕೋಟೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅಥವಾ ಅವರ ಕಡೆಯವರಿಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಬಚ್ಚೇಗೌಡ ಬೆಂಬಲಿಗರಿಂದ ಈ ಧರಣಿ ನಡೆಯಿತು.
ಬೆಂಗಳೂರಿನ ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸದ ಮುಂದೆ ಇಂದು ಮುಂಜಾನೆ ಆಗಮಿಸಿದ ಬೆಂಬಲಿಗರು ಬಿಎಸ್ ವೈ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನಾಕಾರರನ್ನು ರಸ್ತೆಯಲ್ಲಿಯೇ ತಡೆದ ಪೊಲೀಸರು ಬಿ ಎನ್ ಬಚ್ಚೇಗೌಡ, ಸಹೋದರ ಗೋಪಾಲ ಗೌಡ ಸೇರಿದಂತೆ ಕೇವಲ ಐವರಿಗೆ ಬಿಎಸ್ ವೈ ಮನೆಯೊಳಗೆ ತೆರಳಲು ಅವಕಾಶ ಮಾಡಿಕೊಟ್ಟರು.
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಉಪಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.