ಶೆಟ್ಟರ ಮನೆಯೆದುರು ಮುತಾಲಿಕ ಪ್ರತಿಭಟನೆ

ಪ್ರಾರ್ಥನಾ ಮಂದಿರಗಳ ಮೈಕ್‌ಗಳಿಂದ ಶಬ್ದ ಮಾಲಿನ್ಯ ; ಮೈಕ್‌ ತೆರವುಗೊಳಿಸುವಲ್ಲಿ ಬಿಜೆಪಿ ಸರಕಾರ ವಿಫಲ

Team Udayavani, Jun 9, 2022, 9:55 AM IST

2

ಹುಬ್ಬಳ್ಳಿ: ಪ್ರಾರ್ಥನಾ ಮಂದಿರಗಳ ಮೈಕ್‌ಗಳಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದ್ದು, ಅದರಲ್ಲೂ ಆಜಾನ್‌ ಗೆ ಬಳಸುವ ಮೈಕ್‌ ಸಾಕಷ್ಟು ಸಮಸ್ಯೆ ಉಂಟು ಮಾಡುತ್ತಿದ್ದು, ಇವುಗಳನ್ನು ತೆರವುಗೊಳಿಸುವಲ್ಲಿ ಬಿಜೆಪಿ ಸರಕಾರ ವಿಫಲವಾಗಿ ಎಂದು ಆರೋಪಿಸಿ ಇಲ್ಲಿನ ಬದಾಮಿ ನಗರದಲ್ಲಿರುವ ಮಾಜಿ ಸಿಎಂ ಜಗದೀಶ ಶೆಟ್ಟರ ನಿವಾಸ ಮುಂಭಾಗದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಶಬ್ದ ಮಾಲಿನ್ಯ ಉಂಟು ಮಾಡುವ ಮೈಕ್‌ಗಳನ್ನು ತೆರವುಗೊಳಿಸುವಂತೆ ಸುಪ್ರಿಂ ಕೋರ್ಟ್‌ ಸ್ಪಷ್ಟ ಆದೇಶ ನೀಡಿದೆ. ಆದರೆ ಸರಕಾರಗಳನ್ನು ಇದನ್ನು ಅನುಷ್ಠಾನಕ್ಕೆ ತರುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿವೆ. ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರಕಾರ ಕೂಡ ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಈ ಕುರಿತು ಹಲವು ಬಾರಿ ಎಚ್ಚರಿಸುವ, ಹೋರಾಟಗಳನ್ನು ಮಾಡಿದರೂ ಪ್ರಯೋಜನವಾಗಿಲ್ಲ. ಕೇವಲ ಅಧಿಕಾರಕ್ಕಾಗಿ ಮಾತ್ರ ಹಿಂದುತ್ವದ ಅಜೆಂಡಾ ಬಿಜೆಪಿ ಅನುಸರಿಸುತ್ತಿದೆ ಎಂದು ಆರೋಪಿಸಲಾಯಿತು.

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಮಾತನಾಡಿ, ಬಿಜೆಪಿ ಶಾಸಕರು ಕೇವಲ ಅಧಿಕಾರಕ್ಕಾಗಿ ಮಾತ್ರ ಹಿಂದುತ್ವದ ಹೆಸರು ಬಳಸಿದ್ದಾರೆ ಎನ್ನುವುದು ಜನರಲ್ಲಿ ಖಾತ್ರಿಯಾಗಿದೆ. ಚುನಾವಣೆ ಪೂರ್ವದಲ್ಲಿ ಹಿಂದುತ್ವದ ಕೆಲಸ ಮಾಡುವುದಾಗಿ ನಂಬಿಸಿ ಅಧಿಕಾರಕ್ಕೆ ಬಂದ ನಂತರ ವಂಚಿಸುವ ಕೆಲಸ ಆಗಿದೆ. ಕಾಟಾಚಾರಕ್ಕೆಂಬಂತೆ ಸರಕಾರ ನೋಟಿಸ್‌ ಜಾರಿ ಮಾಡಿದೆ. ಆದರೆ ಬೆಳಿಗ್ಗೆ 5 ಗಂಟೆಯ ಆಜಾನ್‌ ನಿಲ್ಲಿಸಿಲ್ಲ. ಇದನ್ನು ಕಡ್ಡಾಯವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಈ ಕುರಿತು ಹಿಂದೂಗಳು ನಿರಂತರ ಹೋರಾಟ ಮಾಡುತ್ತಿದ್ದರೂ ಬಿಜೆಪಿ ಶಾಸಕರು ಮಾತ್ರ ಯಾವುದೇ ಧ್ವನಿ ಎತ್ತುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಹಿಂದೂಪರ ಸಂಘಟನೆಗಳ ಹೋರಾಟ, ಪರಿಶ್ರಮ ದೊಡ್ಡದು. ಅದರೆ ಅಧಿಕಾರಕ್ಕೆ ಬಂದ ನಂತರ ಎಲ್ಲವನ್ನೂ ಮರೆತಿದ್ದಾರೆ. ಹೋರಾಟ, ಪ್ರತಿಭಟನೆ ಮಾಡಿ ಕೇಸ್‌ ಹಾಕಿಸಿಕೊಂಡು ಕೋರ್ಟ್‌ಗಳಿಗೆ ನಾವು ಅಲೆದಾಡಬೇಕು. ಇವರು ಅಧಿಕಾರ ಪಡೆದು ಐಷಾರಾಮಿ ಜೀವನದಲ್ಲಿ ನೀಡಿದ ಭರವಸೆಗಳು, ಮಾಡಬೇಕಾದ ಕಾರ್ಯಗಳನ್ನು ಮರೆತು ಅಧಿಕಾರ ಅನುಭವಿಸುತ್ತಿದ್ದಾರೆ. ಇದನ್ನು ಎಚ್ಚರಿಸುವ ನಿಟ್ಟಿನಲ್ಲಿ ವಿವಿಧ 10 ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಶಾಸಕರ ಕಚೇರಿ ಮುಂಭಾಗದಲ್ಲಿಯೇ ಹೋರಾಟ ಹಮ್ಮಿಕೊಳ್ಳಲಾಗಿದೆ. ಸುಪ್ರಿಂ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರಕಾರ ನಿರ್ಲಕ್ಷ್ಯ ತೋರಿದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಗೆ ತಕ್ಕ ಉತ್ತರ ನೀಡಲಾಗುವುದು. ಮುಂದೆ ಬಿಜೆಪಿ ಎಲ್ಲಾ ಶಾಸಕರ ಮನೆ ಮುಂಭಾಗ ಲೌಡ್‌ಸ್ಪೀಕರ್ ಅಳವಡಿಸಿ ಭಜನೆ ಮಾಡಲಾಗುವುದು ಎಂದು ಪ್ರಮೋದ ಮುತಾಲಿಕ ಎಚ್ಚರಿಸಿದರು‌.

ಪ್ರಮುಖರಾದ ಅಣ್ಣಪ್ಪ ದಿವಟಗಿ, ಬಸವರಾಜ ದುರಗದ, ಮಂಜುನಾಥ ಕಾಟ್ಕರ, ಪ್ರವೀಣ, ರಾಜು, ಮಹಾಂತೇಶ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.