ಈ ಸರ್ಕಾರಕ್ಕೆ ಕಣ್ಣಿಲ್ಲ ಎಂಬುದು ಸಾಬೀತು: ಡಿಕೆಶಿ
Team Udayavani, Aug 21, 2021, 10:00 PM IST
ಬೆಂಗಳೂರು: ಬದುಕಿರುವ ಯೋಧನ ಮನೆಗೆ ಹೋಗಿ ಕೇಂದ್ರ ಸಚಿವರು ಸಾಂತ್ವನ ಹೇಳಿರುವುದು ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸಚಿವ ನಾರಾಯಣ ಸ್ವಾಮಿ ಅವರಿಗೆ ಅಧಿಕಾರ ಸಿಕ್ಕಿದೆ, ಆ ಬಗ್ಗೆ ನಮ್ಮ ತಕರಾರಿಲ್ಲ. ಅವರು ಬದುಕಿರುವ ಯೋಧನ ಮನೆಗೆ ಹೋಗಿ ಸಾಂತ್ವನ ಹೇಳಿರುವ ಸುದ್ದಿ ಕೇಳಿದೆ.
ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಾರ್ಯಕರ್ತರು ಏನು ಮಾಡುತ್ತಿದ್ದರು. ಅವರು ಯಾವ ಮಾಹಿತಿ ಕೊಟ್ಟರು ಎಂದು ಪ್ರಶ್ನಿಸಿದರು.
ಸರ್ಕಾರ ಸಂಪೂರ್ಣವಾಗಿ ಕುರುಡಾಗಿದೆ. ಒಬ್ಬ ಕೇಂದ್ರ ಸಚಿವರು ರಾಜ್ಯಕ್ಕೆ ಭೇಟಿ ನೀಡಿದರೆ ಅವರು ಅತಿಥಿ ಇದ್ದಂತೆ. ಅವರು ಎಲ್ಲೇ ಹೋದರೂ, ಅವರ ಜೊತೆ ಪೊಲೀಸರು, ಅಧಿಕಾರಿಗಳು ಇರುತ್ತಾರೆ. ಆದರೂ ಈ ರೀತಿ ಯಡವಟ್ಟು ಆಗಿರುವುದು ಸರ್ಕಾರದ ಕಾರ್ಯವೈಖರಿಗೆ ಸಾಕ್ಷಿ ಎಂದು ದೂರಿದರು.
ಇದನ್ನೂ ಓದಿ:60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಪೂರ್ಣಗೊಳಿಸಿ :ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ
ರಾಜಕಾರಣ ಏನೇ ಇರಲಿ, ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಪ್ರಧಾನಿಯಾಗಿದ್ದವರು. ಅವರ ಬಗ್ಗೆ ನಾವು ಎಂದಿಗೂ ಕೇವಲವಾಗಿ ಮಾತನಾಡಿಲ್ಲ.
ಬೆಂಗಳೂರಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಚರಿತ್ರೆಯನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ನೆಹರೂ ಹಾಗೂ ವಾಜಪೇಯಿ ಅವರ ವಿಚಾರವಾಗಿ ನಿತಿನ್ ಗಡ್ಕರಿ ಅವರ ಹೇಳಿಕೆಯನ್ನು ಯಾರೂ ಅಲ್ಲಗಳೆದಿಲ್ಲ. ಕೆಲವರು ತಾನು ದೊಡ್ಡ ನಾಯಕ ಎಂದು ಪ್ರಚಾರ ಪಡೆಯಲು ಮಾತನಾಡುತ್ತಿದ್ದಾರೆ, ಮಾತನಾಡಲಿ ಬಿಡಿ ಎಂದು ಪರೋಕ್ಷವಾಗಿ ಸಿ.ಟಿ.ರವಿ ವಿರುದ್ಧ ಗುಡುಗಿದರು.
ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್ ಕರೆತರುವುದು ಭಾರತ ಸರ್ಕಾರದ ಜವಾಬ್ದಾರಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.