PSI ಮರು ಪರೀಕ್ಷೆಗೆ ಸಿದ್ಧ: ಪರಮೇಶ್ವರ್‌

ಸರಕಾರದ ಅಭಿಪ್ರಾಯ ಕೋರ್ಟಿಗೆ ಸಲ್ಲಿಕೆ ಒಪ್ಪಿದರೆ ತಿಂಗಳಲ್ಲೇ ಪರೀಕ್ಷೆ

Team Udayavani, Aug 18, 2023, 11:01 PM IST

dr g param

ಧಾರವಾಡ: ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆದಿದ್ದು, ಈಗಾಗಲೇ ಹಿರಿಯ ಪೊಲೀಸ್‌ ಅಧಿಕಾರಿಗಳನ್ನೇ ಬಂಧಿಸಲಾಗಿದೆ. ಈ ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಕೋರ್ಟ್‌ದಿಂದ ಸ್ಪಷ್ಟ ಆದೇಶದ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮರು ಪರೀಕ್ಷೆ ನಡೆಸಲು ಸರಕಾರ ಸಿದ್ಧವಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ಪ್ರಕರಣದಲ್ಲಿ ನ್ಯಾಯಾಲಯವು ಸರಕಾರದ ಅಭಿಪ್ರಾಯ ಕೇಳಿದ್ದು, ನಾವು ಮರು ಪರೀಕ್ಷೆ ಮಾಡುವುದಾಗಿ ಸ್ಪಷ್ಟವಾಗಿ ಹೇಳಿದ್ದೇವೆ. ನಮ್ಮ ಅಭಿಪ್ರಾಯವನ್ನು ಪುರಸ್ಕರಿಸಿದರೆ, ನ್ಯಾಯಾಲಯದ ಆದೇಶ ಹೊರಬಿದ್ದ ಒಂದು ತಿಂಗಳಲ್ಲೇ ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ಆದೇಶ ಹೊರಡಿಸಲಾಗುವುದು. ಇನ್ನು 545 ಪಿಎಸ್‌ಐ ನೇಮಕಾತಿ ಹಗರಣ ಆದ ಬಳಿಕ 490 ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ದೈಹಿಕ ಪರೀಕ್ಷೆ ಮುಗಿದಿವೆ. ಆದರೆ ಲಿಖೀತ ಪರೀಕ್ಷೆಗಳು ನಡೆದಿಲ್ಲ. 545 ಪಿಎಸ್‌ಐ ನೇಮಕಾತಿ ಆದ ಮೇಲೆಯೇ ಎರಡನೇ ಬ್ಯಾಚ್‌ನ ಲಿಖೀತ ಪರೀಕ್ಷೆಗಳು ನಡೆಯಲಿವೆ ಎಂದರು.

ಹುಬ್ಬಳ್ಳಿ ಗಲಭೆ ಸಂಪುಟದಲ್ಲಿ ಚರ್ಚೆ
ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ಮೇಲಿನ ಪ್ರಕರಣವನ್ನು ಹಿಂಪಡೆಯಲು ಆಗುವುದಿಲ್ಲ. ಆ ಕುರಿತು ಸಂಪುಟದಲ್ಲಿ ಚರ್ಚೆಯಾಗ ಬೇಕು. ರಾಜ್ಯದಲ್ಲಿ ಮಾದಕ ವಸ್ತುಗಳ ಕಡಿವಾಣಕ್ಕೆ ಸಮರ ಸಾರಿದ್ದೇವೆ. ಈಗ ಬಹಳ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್‌ ಬಳಕೆಯಾಗುತ್ತಿದೆ. ಇದನ್ನು ಸಂಪೂರ್ಣವಾಗಿ ಸ್ಥಗಿತ ಮಾಡಬೇಕಿದೆ. ಇನ್ನು ಆರು ತಿಂಗಳಲ್ಲಿ ಡ್ರಗ್ಸ್‌ ಮುಕ್ತ ಕರ್ನಾಟಕ ಘೋಷಣೆ ಮಾಡಬೇಕು ಎಂದು ಇಲಾಖೆಗೆ ಸೂಚನೆ ಕೊಟ್ಟಿದ್ದೇನೆ. ಸೈಬರ್‌ ಅಪರಾಧ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 2,500 ಹಾಗೂ ರಾಜ್ಯವ್ಯಾಪ್ತಿ 3,500 ಪೊಲೀಸ್‌ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ಒಂದು ಸ್ಥಳದಲ್ಲಿ ವರ್ಷಕ್ಕೆ 350ಕ್ಕಿಂತಲೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾದರೆ ಅಲ್ಲಿ ಪೊಲೀಸ್‌ ಠಾಣೆಗಳನ್ನು ಮಾಡಬಹುದು. ಎಲ್ಲಿ ಠಾಣೆಗಳ ಅಗತ್ಯ ಇದೆ ಎಂಬುದನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದರೆ ಪರಿಶೀಲಿಸಿ ಅನುಮತಿ ನೀಡಲಾಗುವುದು ಎಂದರು.

ಸೌಜನ್ಯಾ ಪ್ರಕರಣದ ಮರು ತನಿಖೆ ಚಿಂತನೆ ಇಲ್ಲ
ಸೌಜನ್ಯಾ ಪ್ರಕರಣದ ಮರು ತನಿಖೆ ಆಗಬೇಕೆಂಬ ಬೇಡಿಕೆ ಸಾರ್ವಜನಿಕ ವಲಯದಲ್ಲಿದೆ. ಈ ಬಗ್ಗೆ ಪರ-ವಿರೋಧವೂ ಇದೆ. ಈಗಾಗಲೇ ಪ್ರಕರಣವು ಕಾನೂನಾತ್ಮಕವಾಗಿ ಮುಗಿದು ಹೋಗಿದ್ದು, ಇದರಲ್ಲಿ ಸರಕಾರ ಏನೂ ಮಾಡಲು ಆಗದು. ಮರು ತನಿಖೆ ಮಾಡುವ ವಿಚಾರ ಸರಕಾರದ ಮುಂದಿಲ್ಲ ಎಂದು ಗೃಹ ಸಚಿವರು ಹೇಳಿದರು.

ಟಾಪ್ ನ್ಯೂಸ್

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.