PSI ಹಗರಣ: ಇಂದು ಎಚ್‌ಡಿಕೆ, ಯತ್ನಾಳ್ ವಿಚಾರಣೆ
ಸಾಕ್ಷಿ ಸಲ್ಲಿಸಲು ಅಶ್ವತ್ಥನಾರಾಯಣರಿಗೂ ಸೂಚನೆ
Team Udayavani, Dec 27, 2023, 12:52 AM IST
ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಅಥವಾ ಸಾಕ್ಷ್ಯಗಳಿದ್ದರೆ ಸಲ್ಲಿಸುವಂತೆ ಸೂಚಿಸಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಾಜಿ ಡಿಸಿಎಂ ಡಾ| ಅಶ್ವತ್ಥನಾರಾಯಣ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಶಾಸಕ ಬಸವರಾಜ ಧಡೆಸೂಗೂರು ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ನ್ಯಾ| ಬಿ. ವೀರಪ್ಪ ನೇತೃತ್ವದ ವಿಚಾರಣ ಆಯೋಗವು ಬುಧವಾರ ವಿಚಾರಣೆಗೆ ಬರುವಂತೆ ಈ ನಾಯಕರಿಗೆ ತಿಳಿಸಿದೆ.
ಎಚ್.ಡಿ. ಕುಮಾರಸ್ವಾಮಿ, ಅಶ್ವತ್ಥ ನಾರಾಯಣ, ಯತ್ನಾಳ್, ಧಡೆಸೂಗೂರು ಮತ್ತಿತರು ನೇಮಕಾತಿ ಹಗರಣದ ಬಗ್ಗೆ ತಮ್ಮ ಬಳಿ ದಾಖಲೆಗಳಿವೆ ಎಂದು ಹೇಳಿಕೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಕರೆಸಬೇಕು ಎಂದು ಆಯೋಗದ ಮುಂದೆ ಕೆಲವು ವಕೀಲರು ಮನವಿ ಸಲ್ಲಿಸಿ ಕೋರಿದ್ದರು. ಆ ಮನವಿಯನ್ನು ಆಯೋಗ ಪರಿಗಣಿಸಿದೆ.
“ವಕೀಲರು ಮನವಿ ಮಾಡಿಕೊಂಡಿದ್ದರು. ಅದರಂತೆ ಮಾಜಿ ಸಿಎಂ ಎಚ್.ಡಿ. ಕುಮಾರ ಸ್ವಾಮಿ, ಮಾಜಿ ಡಿಸಿಎಂ ಅಶ್ವತ್ಥನಾರಾಯಣ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ಬಸವರಾಜ ಧಡೆಸೂಗೂರು ಮತ್ತಿತರ ಕೆಲವು ರಾಜಕೀಯ ನಾಯಕರಿಗೆ ಸಮನ್ಸ್ ಜಾರಿಗೊಳಿಸಿ ತಮ್ಮ ಬಳಿ ಇರುವ ದಾಖಲೆ ಮತ್ತು ಸಾಕ್ಷ್ಯಗಳನ್ನು ಆಯೋಗಕ್ಕೆ ಸಲ್ಲಿಸಲು ಬುಧವಾರ ವಿಚಾರಣೆ ಬರುವಂತೆ ತಿಳಿಸ ಲಾಗಿದೆ. ಯತ್ನಾಳ್ ಅವರನ್ನು ಹೊರತುಪಡಿಸಿ ಉಳಿದವರಿಗೆ ಸಮನ್ಸ್ ತಲುಪಿದೆ. ಯತ್ನಾಳ್ ಅವರಿಗೆ ಪುನಃ ರಿಜಿಸ್ಟರ್ ಪೋಸ್ಟ್ ಮೂಲಕ ಸಮನ್ಸ್ ಜಾರಿಗೊಳಿಸಿ, ವಿಚಾರಣೆಗೆ ಬರಲು ದಿನಾಂಕ ನೀಡಲಾಗುವುದು’ ಎಂದು ನ್ಯಾ| ಬಿ. ವೀರಪ್ಪ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.