
Udupi: ಪುತ್ತಿಗೆ ಶ್ರೀಗಳಿಗೆ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಮ್ಮಾನ
Team Udayavani, Dec 29, 2023, 11:23 PM IST

ಉಡುಪಿ: ಹುಬ್ಬಳ್ಳಿಯ ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜ ವತಿಯಿಂದ ಹುಬ್ಬಳ್ಳಿ ಜನತೆಯ ಪರವಾಗಿ ಉಡುಪಿ ಶ್ರೀಕೃಷ್ಣ ಮಠದ ಭಾವೀ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ನಾಗರಿಕ ಸಮ್ಮಾನವು ಶುಕ್ರವಾರ ಹುಬ್ಬಳ್ಳಿ ದೇಶಪಾಂಡೆ ನಗರದ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ನೆರವೇರಿತು.
ಪುತ್ತಿಗೆ ಶ್ರೀಗಳು ಮಾತನಾಡಿ, ಭಗವದ್ಗೀತೆ ವಿಶ್ವಗ್ರಂಥ, ಇದು ಇಡೀ ವಿಶ್ವಕ್ಕೆ ಸಂವಿಧಾನವಿದ್ದಂತೆ. ಜಗತ್ತಿನ ಸಮಸ್ತ ಸಮಸ್ಯೆಗೆ ಪರಿಹಾರ ರೂಪವಾಗಿರುವ ಬದುಕಿನ ಸಾರ್ಥಕತೆಗೆ ಮಾಗದರ್ಶಿಯಾಗಿರುವ ಭಗವದ್ಗೀತೆಯನ್ನು ಜೀವನದಲ್ಲಿ ಒಮ್ಮೆಯಾದರೂ ಓದಲೇಬೇಕು ಎಂದು ಭಗವದ್ಗೀತೆಯ ವೈಶಿಷ್ಟéವನ್ನು ನಿರೂಪಿಸಿದರು.
ಭಕ್ತರನ್ನು ಪರ್ಯಾಯ ಮಹೋತ್ಸವಕ್ಕೆ ಆಹ್ವಾನಿಸಿ, ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ನೀಡಿದರು.
ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ ಸೆಂಟ್ರಲ್‌ನ ಶಾಸಕ ಮಹೇಶ್ ಟೆಂಗಿನಕಾಯಿ, ಹುಬ್ಬಳ್ಳಿ ನಗರದ ಮೇಯರ್ ವೀಣಾ ಭಾರದ್ವಾಜ್, ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜದ ಅಧ್ಯಕ್ಷ ಅನಂತಪದ್ಮನಾಭ ಐತಾಳ ಉಪಸ್ಥಿತರಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.