ಪಂಪ್‌ವೆಲ್- ಪಡೀಲ್ ಸ್ಮಾರ್ಟ್ ರಸ್ತೆ ನಿರ್ಮಾಣಕ್ಕೆ ಚಾಲನೆ
ರಾಜ್ಯದ 2ನೇ ಸ್ವಚ್ಛ , ಸುಂದರ ನಗರವಾಗಿ ಮಂಗಳೂರು: ನಳಿನ್
Team Udayavani, Feb 14, 2022, 5:55 AM IST
ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ 1 ಸಾವಿರ ಕೋ.ರೂ. ಮೊತ್ತದ ಕಾಮಗಾರಿಗಳನ್ನು ಗುರುತಿಸಲಾಗಿದ್ದು, 360 ಕೋಟಿ ರೂ.ಗಳ ಕಾಮಗಾರಿ ಈಗಾಗಲೇ ನಡೆದಿದೆ.
2023- 24ರ ವೇಳೆಗೆ ಎಲ್ಲವೂ ಪೂರ್ಣಗೊಂಡು ಮಂಗಳೂರು ರಾಜ್ಯದ 2ನೇ ಸ್ವಚ್ಛ, ಸುಂದರ ನಗರವಾಗಿ ಮೂಡಿ ಬರಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಅವರು ರವಿವಾರ ಸ್ಮಾರ್ಟ್ ಸಿಟಿ ಅಡಿಯಲ್ಲಿ ನಗರದ ಪಂಪ್‌ವೆಲ್ ನಿಂದ ಪಡೀಲ್ ವರೆಗಿನ 2,800 ಮೀ. ಉದ್ದದ, 24 ಮೀ. ಅಗಲದ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಬಿ.ಸಿ.ರೋಡ್- ಅಡ್ಡಹೊಳೆ ರಾ.ಹೆ. ಕಾಮಗಾರಿ 2023ರ ಡಿಸೆಂಬರ್ ಒಳಗೆ ಪೂರ್ಣಗೊಳ್ಳಲಿದೆ. ಕೆಪಿಟಿ, ನಂತೂರು ಜಂಕ್ಷನ್‌ಗಳಲ್ಲಿ ಫ್ಲೈಓವರ್ ಆಗಲಿವೆ. ಮಹಾಕಾಳಿಪಡು³ ರಸ್ತೆ ಅಭಿವೃದ್ಧಿ ನಡೆಯುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಕ್ರೀಡಾ ಸಂಕೀರ್ಣ, ಅಂತಾರಾಷ್ಟ್ರೀಯ ಈಜು ಕೊಳ, ರಿವರ್ ಫ್ರಂಟ್ ಇತ್ಯಾದಿ ಕಾರ್ಯಗತಗೊಳ್ಳಲಿವೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ 3 ಸಾವಿರ ಕೋ.ರೂ. ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದೆ ಎಂದರು.
ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಪಂಪ್‌ವೆಲ್- ಪಡೀಲ್ ರಸ್ತೆ ಅಭಿವೃದ್ಧಿಗೆ ಈ ಹಿಂದೆ ರಾ.ಹೆ. ಪ್ರಾಧಿಕಾರವು 45 ಮೀ. ಅಗಲ ಬೇಕೆಂದಿತ್ತು. ಈಗ ಈ ರಸ್ತೆ ಮನಪಾ ಸುಪರ್ದಿಗೆ ಬಂದಿದ್ದು, ಅಗಲವನ್ನು 45 ಮೀ.ನಿಂದ 30 ಮೀ.ಗೆ ಇಳಿಸಲು ಪ್ರಸ್ತಾವನೆ ಕಳುಹಿಸಲಾಗಿದೆ. ಇದಾದರೆ ರಸ್ತೆ ಬದಿಯ ಭೂ ಮಾಲಕರಿಗೆ ಅನುಕೂಲವಾಗಲಿದೆ ಎಂದರು.
ಮೂಡ ಅಧ್ಯಕ್ಷ ರವಿಶಂಕರ ಮಿಜಾರು, ವಿವಿಧ ನಿಗಮಗಳ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ನಿತಿನ್ ಕುಮಾರ್, ಸಂತೋಷ್ ಕುಮಾರ್ ರೈ ಬೋಳಿಯಾರ್, ಕಾರ್ಪೊರೇಟರ್‌ಗಳಾದ ಸಂದೀಪ್ ಗರೋಡಿ, ರೂಪಶ್ರೀ ಪೂಜಾರಿ, ಶೋಭಾ ಪೂಜಾರಿ, ಪ್ರವೀಣ್‌ಚಂದ್ರ ಆಳ್ವ, ಪಾಲಿಕೆಯ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಮಾಜಿ ಕಾರ್ಪೊರೇಟರ್‌ಗಳಾದ ವಿಜಯ ಕುಮಾರ್, ಜೇಮ್ಸ್ ಡಿ’ಸೋಜಾ, ಆಶಾ ಡಿ’ಸಿಲ್ವ, ಪ್ರಭಾ ಮಾಲಿನಿ, ಭಾಸ್ಕರಚಂದ್ರ ಶೆಟ್ಟಿ ಇದ್ದರು. ಸ್ಮಾರ್ಟ್ ಸಿಟಿಯ ಜ. ಮ್ಯಾನೇಜರ್ ಅರುಣ್ ಪ್ರಭಾ ಸ್ವಾಗತಿಸಿದರು.
ಚತುಷ್ಪಥ ರಸ್ತೆ ಹೀಗಿರಲಿದೆ
ಈ ರಸ್ತೆ ಸ್ಮಾರ್ಟ್ ಸಿಟಿ ಅಡಿ 24 ಮೀ. ಅಗಲದ ಚತುಷ್ಪಥ ಕಾಂಕ್ರೀಟ್ ರಸ್ತೆ ಆಗಲಿದೆ. ಇದರಲ್ಲಿ 3.50 ಮೀ. ಅಗಲದ 4 ಲೇನ್ ಕಾಂಕ್ರೀಟ್ ವೇ, ಇಕ್ಕೆಲದಲ್ಲಿ 3 ಮೀ. ಅಗಲ ಇಂಟರ್‌ಲಾಕ್ ಅಳವಡಿಸಲಾಗುತ್ತದೆ. ಮುಗ್ರೋಡಿ ಕನ್‌ಸ್ಟ್ರಕ್ಷನ್ಸ್ ಕಾಮಗಾರಿ ಗುತ್ತಿಗೆ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.