Kukke Shree Subrahmanya 7 ಲ. ರೂ. ಮೌಲ್ಯದ ಪುಂಗನೂರು ಹಸುಗಳು
Team Udayavani, Aug 22, 2023, 12:44 AM IST
ಸುಬ್ರಹ್ಮಣ್ಯ: ನಾಗರಪಂಚಮಿಯಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ಷೇತ್ರದ ಭಕ್ತ ಮತ್ತು ಹೈದರಾಬಾದ್‌ನ ಎಎಂಆರ್ ಗ್ರೂಪ್‌ನ ಆಡಳಿತ ನಿರ್ದೇಶಕ ಎ. ಮಹೇಶ್ ರೆಡ್ಡಿ ಸುಮಾರು 7 ಲಕ್ಷ ರೂ. ಮೌಲ್ಯದ ಪುಂಗನೂರು ತಳಿಯ 4 ಗೋವುಗಳನ್ನು ದಾನವಾಗಿ ನೀಡಿದರು.
ಶ್ವೇತ ವರ್ಣದ ಹಾಲು ಕರೆಯುವ 3 ಗೋವುಗಳು ಹಾಗೂ 1 ಕರುವನ್ನು ದೇವಸ್ಥಾನದ ನಾಗಪ್ರತಿಷ್ಠಾ ಮಂಟಪದ ಬಳಿಗೆ ತಂದು ಗೋವುಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ನೆರವೇರಿಸಿ ವೈದಿಕ ವಿಧಿ ವಿಧಾನಗಳ ಮೂಲಕ ದೇಗುಲಕ್ಕೆ ಹಸ್ತಾಂತರಿಸಲಾಯಿತು.
ಮಹೇಶ್ ರೆಡ್ಡಿ ಈ ಹಿಂದೆ 27 ಲಕ್ಷ ರೂ. ವೆಚ್ಚದಲ್ಲಿ ಭೋಜನ ಪ್ರಸಾದ ತಯಾರಿ ಮತ್ತು ಲಡ್ಡು ಪ್ರಸಾದ ತಯಾರಿ ಯಂತ್ರೋಪಕರಣಗಳನ್ನು ಹಾಗೂ ಷಣ್ಮುಖ ಪ್ರಸಾದ ಭೋಜನ ಶಾಲೆಗೆ ಭೋಜನ ಪ್ರಸಾದ ವಿತರಣೆಗೆ ಗಾಡಿಗಳನ್ನು ಕಾಣಿಕೆ ರೂಪದಲ್ಲಿ ಅರ್ಪಿಸಿದ್ದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಎಸ್. ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ| ನಿಂಗಯ್ಯ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಪಿಜಿಎಸ್‌ಎನ್ ಪ್ರಸಾದ್, ಮನೋಹರ ರೈ, ಲೋಕೇಶ್ ಮುಂಡುಕಜೆ, ವನಜಾ ವಿ. ಭಟ್, ಶೋಭಾ ಗಿರಿಧರ್, ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಮೊದಲಾದವರಿದ್ದರು.
ಚಂದ್ರಯಾನ ಯಶಸ್ಸಿಗೆ ಕುಕ್ಕೆಯಲ್ಲಿ ಸೇವೆ
ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನ ಕ್ಷೇತ್ರದಲ್ಲಿ ಇಸ್ರೋ ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯ ಶುಭದಿನವಾದ ಸೋಮವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇಗುಲದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಲಾಯಿತು.
ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ 3 ನೌಕೆಯು ಚಂದ್ರನಲ್ಲಿಳಿದು ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ನಮ್ಮ ರಾಷ್ಟ್ರದ ಹೆಸರು ಪ್ರಪಂಚದಲ್ಲೇ ಅಗ್ರಗಣ್ಯವಾಗಲಿ ಎಂದು ಕುಕ್ಕೆ ಸುಬ್ರಹ್ಮಣ್ಯನಿಗೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಇಸ್ರೋ ಸಂಸ್ಥೆಯ ಪರವಾಗಿ ನಾಗರಾಜನಿಗೆ ಹಾಲು ಅರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.