Punjalkatte ಪೋಕ್ಸೋ ಪ್ರಕರಣ: ಆರೋಪಿಗಳ ಖುಲಾಸೆ
Team Udayavani, Mar 26, 2024, 11:49 PM IST
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಪಾಂಡವರ ಕಲ್ಲು ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗಳಿಬ್ಬರನ್ನು ಜಿಲ್ಲಾ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ನಿವಾಸಿ ನೌಷದ್ ಮತ್ತು ಆತನ ತಾಯಿ ರಹಿಮತ್ ಖುಲಾಸೆಗೊಂಡ ಆರೋಪಿಗಳಾಗಿದ್ದಾರೆ. 2020 ರ ಆಕ್ಟೋಬರ್ 14 ರಂದು ಆರೋಪಿಗಳು ಸ್ಥಳೀಯ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.ಈ ಕೇಸಿನ ತನಿಖೆ ನಡೆಸಿದ ಪುಂಜಾಲಕಟ್ಟೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿ ಸಲ್ಲಿಸಿದ್ದರು. ಜಿಲ್ಲಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳ ಇಟ್ಟಿ ಅವರು ಪ್ರಕರಣ ವಿಚಾರಣೆ ನಡೆಸಿ ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ಆರೋಪಿಗಳು ನಿರ್ದೋಷಿ ಗಳಾಗಿದ್ದಾರೆ ಎಂದು ತೀರ್ಪು ನೀಡಿ ಬಿಡುಗಡೆಗೊಳಿಸಿರುತ್ತಾರೆ.
ಆರೋಪಿಗಳ ಪರವಾಗಿ ಬಿ.ಸಿ.ರೋಡಿನ ನ್ಯಾಯವಾದಿಗಳಾದ ಶ್ರೀಧರ ಪೈ ಮತ್ತು ಶುಭಶ್ರೀ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.