ಪುಷ್ಕರ್‌ ಮಲ್ಲಿಕಾರ್ಜುನಯ್ಯ ಕೃಷಿ ಮಂತ್ರ!

Team Udayavani, Jun 2, 2020, 4:13 AM IST

push mantra

ಕನ್ನಡ ಚಿತ್ರರಂಗದಲ್ಲಿ ಒಂದರ ಹಿಂದೊಂದು ಚಿತ್ರಗಳನ್ನು ನಿರ್ಮಾಣ ಮಾಡುತ್ತ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಿರ್ಮಾಪಕರ ಪುಷ್ಕರ್‌ ಮಲ್ಲಿಕಾರ್ಜುನಯ್ಯ ಸದ್ಯ ಕೋವಿಡ್‌ 19 ಲಾಕ್ ಡೌನ್ ನಿಂದಾಗಿ ಈಗ ಕೃಷಿ ಕ್ಷೇತ್ರದಲ್ಲೂ ಒಂದಷ್ಟು ಪ್ರಯೋಗಕ್ಕೆ ಮುಂದಾಗಿದ್ದಾರೆ. ರೈತರಿಗೆ ನೆರವಾಗುವುದರ ಸಲುವಾಗಿ ವೈಜ್ಞಾನಿಕ ವಿಧಾನದ ಕೃಷಿಯಲ್ಲಿ ರೈತರಿಗೆ ಸಹಾಯ ಮಾಡಲು ತಮ್ಮದೇಯಾದ ತಂಡವೊಂದನ್ನು ಕಟ್ಟಿಕೊಂಡು ಪುಷ್ಕರ್ ಒಂದಷ್ಟು ಕೆಲಸ ಶುರು ಮಾಡಿದ್ದಾರೆ.

ತಮ್ಮ ಕೃಷಿ ಪ್ರಯೋಗದ ಬಗ್ಗೆ ಪುಷ್ಕರ್ ಹೇಳುವುದು ಹೀಗೆ, ನನ್ನ ತಂದೆ ಹೈಸ್ಕೂಲ್‌ ಟೀಚರ್‌. ತಾತ ಕೂಡ ಕೃಷಿ ಮಾಡುತ್ತಿದ್ದರು. ಆದರೆ ನಾನು ಬೇರೆ ಕಡೆ ತೊಡಗಿಸಿಕೊಂಡಿದ್ದರಿಂದ ಕೃಷಿಯಲ್ಲಿ ಸಕ್ರಿಯವಾಗಿರಲು ಆಗಿರಲಿಲ್ಲ. ಆದರೆ ಈಗ ನನಗೆ ಕೃಷಿಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅನಿಸಲು ಶುರುವಾಗಿದೆ. ಹಾಗಂತ ಸಿನಿಮಾ ಇಂಡಸ್ಟ್ರಿ ಬಿಡೋದಿಲ್ಲ. ಮುಂದೆ ಕೃಷಿ ಉತ್ತಮ ಬೇಡಿಕೆ ಪಡೆದುಕೊಂಡು ಒಳ್ಳೆಯ ಉದ್ಯಮವಾಗಲಿದೆ. ಈಗಾಗಲೇ ನನ್ನ ಸಮಾನ ಮನಸ್ಕ 10 ಮಂದಿ ಸ್ನೇಹಿತರ ಜೊತೆ ಸೇರಿಕೊಂಡು ಕೃಷಿ ಕ್ಷೇತ್ರದಲ್ಲಿ ಏನನ್ನಾದರೂ ಅಭಿವೃದ್ಧಿ ಮಾಡಬೇಕು ಎಂದುಕೊಂಡಿದ್ದೇವೆ ಎನ್ನುತ್ತಾರೆ.

ಇಂದು ಎಲ್ಲಾ ಕ್ಷೇತ್ರಗಳು ಡಿಜಿಟಲೈಸ್‌ ಆಗಿ ಅಭಿವೃದ್ಧಿ ಹೊಂದುತ್ತಿವೆ. ಆದರೆ, ರೈತನಿಗೆ ಆ ಸೌಲಭ್ಯ ಇಲ್ಲ. ಹಾಗಾಗಿ ಗ್ರಾಹಕರಿಗೆ ರೈತರಿಂದ ನೇರವಾಗಿ ಸಂಪರ್ಕ ಕಲ್ಪಿಸಲು ಒಂದು ವೈಜ್ಞಾನಿಕ ವಿಧಾನದಲ್ಲಿ ವೇದಿಕೆ ಕಲ್ಪಿಸಲು ಆಲೋಚಿಸುತ್ತಿದ್ದೇವೆ. ರೈತರು ಯಾರು ಎಷ್ಟು ಏನನ್ನು ಬೆಳೆಯುತ್ತಿದ್ದಾರೆ ಎಂಬ ಡೇಟಾ ಒಂದು ಕಡೆ ಸಿಗುವಂತಿರಬೇಕು. ಸಾವಯವ ಕೃಷಿ ವಿಧಾನ ಅಳವಡಿಕೆ, ಕೋಲ್ಡ್‌ ಸ್ಟೋರೇಜ್‌ ವ್ಯವಸ್ಥೆ, ಕಟಾವಿನ ಮೊದಲು ಗ್ರಾಹಕರನ್ನು ಗುರುತಿಸುವುದು, ವರ್ಷಪೂರ್ತಿ ಹಣ್ಣು ತರಕಾರಿಗೆ ಒಂದೇ ಬೆಲೆ ನಿಗದಿ ಇತ್ಯಾದಿ ವಿಷಯದಲ್ಲಿ ಕಾರ್ಯಪ್ರವೃತ್ತರಾಗಲಿದ್ದೇವೆ. ಇದಕ್ಕಾಗಿ ಒಂದು ಆ್ಯಪ್‌ ಕೂಡ ಡೆವಲಪ್‌ ಮಾಡುತ್ತಿದ್ದೇವೆ ಎಂದಿದ್ದಾರೆ ಪುಷ್ಕರ್.

ಇನ್ನು ಇಸ್ರೇಲ್‌ ಮಾದರಿ ಕೃಷಿ ಪುಷ್ಕರ್ ಅವರ ಗಮನ ಸೆಳೆದಿದೆಯಂತೆ. ಈ ಬಗ್ಗೆ ಮಾತನಾಡುವ ಪುಷ್ಕರ್, ಇಸ್ರೇಲ್ ಮಾದರಿ ಕೃಷಿ ಅಧ್ಯಯನ ಮಾಡಿದ್ದೇವೆ. ಅಲ್ಲಿ ಬಹಳ ಬಿಸಿಲು. ಕೃಷಿ ಭೂಮಿಯೂ ಕಡಿಮೆ. ಆದರೂ ಕೃಷಿಯಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ನಮ್ಮ ದೇಶದಲ್ಲಿ ಹವಾಮಾನ, ನೀರು ಎಲ್ಲ ಬಹಳ ಚೆನ್ನಾಗಿದೆ. ಇದನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ನಮ್ಮ ಹಿರಿಯರು ಅನುಸರಿಸಿದ ವಿಧಾನ ಬಳಸಿಕೊಂಡರೂ ಸಾಕು ಪರಿಸ್ಥಿತಿ ಸುಧಾರಿಸುತ್ತೆ. ಇಲ್ಲಿನ ಕೃಷಿ ಅಧಿಕಾರಿಗಳು, ಕೃಷಿ ತಜ್ಞರು, ಪರಿಣಿತ ರೈತರನ್ನೂ ಭೇಟಿ ಮಾಡಿ ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎನ್ನುತ್ತಾರೆ.

ಕೃಷಿಯಿಂದಲೇ ಕೋಟಿಗಟ್ಟಲೆ ಸಂಪಾದಿಸುವವರೂ ಇದ್ದಾರೆ ಎನ್ನುವ ಪುಷ್ಕರ್, ಕೃಷಿಯ ವಾಣಿಜ್ಯ ಬೆಳೆಗಳನ್ನು ವಿದೇಶಗಳಿಗೆ ರಫ್ತು ಮಾಡುವ ಸಾಕಷ್ಟು ಅವಕಾಶಗಳು ನಮ್ಮಲ್ಲಿದೆ. ಈ ನಿಟ್ಟಿನಲ್ಲಿ ರೈತರನ್ನು ಮುಖ್ಯವಾಹಿನಿಗೆ ತರಬೇಕು ಅನ್ನೋದು ನಮ್ಮ ಉದ್ದೇಶ. ಇದನ್ನು ಹಂತಹಂತವಾಗಿ ಮಾಡಬೇಕು ಎನ್ನುತ್ತಾರೆ.

ಟಾಪ್ ನ್ಯೂಸ್

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.