ಪುತ್ತೂರು: ಮಹಿಳೆಗೆ ಕಿರುಕುಳ ನೀಡಿದ್ದ ಆರೋಪಿ ಸೆರೆ
Team Udayavani, Feb 15, 2023, 5:32 PM IST
ಪುತ್ತೂರು: ವರ್ಷದ ಹಿಂದೆ ಬಸ್ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈಶ್ವರಮಂಗಲ ದೇಂತಾಡಿ ನಿವಾಸಿ ಮೊಹಮ್ಮದ್ ಸತ್ತಾರ್ ಬಂಧಿತ ಆರೋಪಿ. 2022ರಲ್ಲಿ ಬಸ್ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಸತ್ತಾರ್ ಪೊಲೀಸರಿಂದ ಬಂಧಿತರಾಗಿದ್ದರು. ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿಯು ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.
ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ನಗರ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.