Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು
Team Udayavani, May 5, 2024, 12:52 AM IST
ಪುತ್ತೂರು: ಪುತ್ತೂರು ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮ ಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆಯ ನಿರ್ದೇಶಕ ಜಿ.ಎಂ. ಗಂಗಾಧರ ಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.
ರಾಮಚಂದ್ರ ಅವರು ಸಮಿತಿಯ ತರಕಾರಿ ವ್ಯಾಪಾರಸ್ಥರಿಗೆ ಪದೇಪದೆ ಕಿರುಕುಳ ನೀಡಿರುವ, ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸಿರುವ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು 2023ರ ಜ. 4ರಂದು ಕೃಷಿ ಮಾರಾಟ ಇಲಾಖೆಯ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು. ದೂರಿನ ತನಿಖೆಗಾಗಿ ಅಧಿಕಾರಿಗಳ ವಿಶೇಷ ತಂಡವೊಂದನ್ನು ರಚಿಸಲಾಗಿತ್ತು.
ಕೆಎಟಿಗೆ ಹೋಗಿದ್ದರು
ರಾಮಚಂದ್ರ ಅವರನ್ನು 2023ರ ಜ. 16ರಿಂದ ಮುಂದಿನ 2 ತಿಂಗಳ ತನಕ ಅಥವಾ ಮುಂದಿನ ಆದೇಶದ ತನಕ ಕಡ್ಡಾಯ ರಜೆಯ ಮೇಲೆ ತೆರಳುವಂತೆ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರು ಆದೇಶ ನೀಡಿದ್ದರು. ಇಲಾಖಾ ವಿಚಾರಣೆ ನಡೆಸಲು ಅನುಗುಣವಾಗಿ ರಾಮಚಂದ್ರ ಅವರನ್ನು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖಾಲಿ ಇರುವ ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ವರ್ಗಾಯಿಸಲಾಗಿತ್ತು.
ಇದರ ವಿರುದ್ಧ ರಾಮಚಂದ್ರ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯ(ಕೆಎಟಿ)ಕ್ಕೆ ದೂರು ಸಲ್ಲಿಸಿದ್ದರು. ಕೆಎಟಿ ಅವರ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದರಿಂದ ಮೇ 2ರಂದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಮೇ 2ರಂದು ಮಧ್ಯಾಹ್ನ ಕರ್ನಾಟಕ ಕೃಷಿ ಮಾರಾಟ ಇಲಾಖೆಯ ನಿರ್ದೇಶಕ ಜಿ.ಎಂ. ಗಂಗಾಧರ ಸ್ವಾಮಿ ಅವರು ಹೊರಡಿಸಿದ ಇಲಾಖಾ ಆದೇಶದಲ್ಲಿ ರಾಮಚಂದ್ರ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್ ಪ್ಲ್ಯಾನ್
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.