Puttur: ಬಾಲಕಿಗೆ ಕಿರುಕುಳ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ
Team Udayavani, Nov 30, 2024, 6:35 AM IST
ಪುತ್ತೂರು: ಎಂಟು ವರ್ಷಗಳ ಹಿಂದೆ ಪುತ್ತೂರಿನ ಮೊಟೆತ್ತಡ್ಕದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದ ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಮೊಟೆತ್ತಡ್ಕ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಹಿಮಾನ್ ಜೈಲು ಶಿಕ್ಷೆಗೆ ಒಳಗಾದ ಆರೋಪಿ. 2016ರ ನ. 18ರಂದು ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕದಲ್ಲಿ ಅಬ್ದುಲ್ ರಹಿಮಾನ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕಿಯು ನೀಡಿದ ಹೇಳಿಕೆಯಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.
ಪ್ರಕರಣದ ವಿಚಾರಣೆಯನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸರಿತಾ ಡಿ. ಅವರು ಕೈಗೆತ್ತಿಕೊಂಡು ಒಟ್ಟು 17 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಿದ್ದು, ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ್ದಾರೆ.
ವಿವಿಧ ಕಲಂಗಳ ಅಡಿಯಲ್ಲಿ ಒಟ್ಟು 5 ವರ್ಷ ಜೈಲು ಶಿಕ್ಷೆ, 40 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ 30 ಸಾವಿರ ರೂ. ಅನ್ನು ಬಾಲಕಿಗೆ ನೀಡುವಂತೆ ಹಾಗೂ ಹೆಚ್ಚುವರಿಯಾಗಿ ದ.ಕ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ 50 ಸಾವಿರ ರೂ. ಪರಿಹಾರ ಬಾಲಕಿಗೆ ನೀಡುವಂತೆ ಆದೇಶಿಸಿದೆ. ಸರಕಾರದ ಪರ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ಅವರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.