ಪುತ್ತೂರು: ಬೃಹತ್ ಮೆರವಣಿಗೆ- ಭ್ರಷ್ಟಾಚಾರ ಮುಕ್ತ ಆಡಳಿತ -ಅಶೋಕ್ ಕುಮಾರ್ ರೈ
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ
Team Udayavani, Apr 20, 2023, 12:23 PM IST
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ಬುಧವಾರ ಸಾವಿರಾರು ಕಾರ್ಯ ಕರ್ತರು, ಬೆಂಬಲಿಗರು, ಹಿತೈಷಿಗಳೊಂದಿಗೆ ಬೃಹತ್ ಮೆರವಣಿಗೆಯ ಮೂಲಕ ಸಾಗಿ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.
ಕೋಡಿಂಬಾಡಿ ಮಹಿಷಮರ್ದಿನಿ, ಪುತ್ತೂರು ಮಹಾಲಿಂಗೇಶ್ವರ ದೇಗುಲಗಳಲ್ಲಿ ಪ್ರಾರ್ಥನೆ ಸಲ್ಲಿಸಿ ದರ್ಬೆಯಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ಜಯಘೋಷ ಮೊಳಗಿಸುತ್ತಾ ಸಾಗಿದರು. ವಿವಿಧ ಕಲಾ
ಪ್ರಕಾರ, ಚೆಂಡೆ ಬಳಗ, ನಾಸಿಕ್ ಬ್ಯಾಂಡ್ ಮೆರವಣಿಗೆಗೆ ಮೆರುಗು ತುಂಬಿದವು.
ಮೊಳಗಿದ ಘೋಷಣೆ
ಮೆರವಣಿಗೆಯಲ್ಲಿ ಕಾಂಗ್ರೆಸ್ ಸಾಧನೆಗಳ ಕುರಿತು ಘೋಷಣೆ ಮೊಳಗಿತು. ಅಶೋಕ್ ಕುಮಾರ್ ರೈ ಪರ ಕಾರ್ಯ ಕರ್ತರು ಜೈಕಾರ ಹಾಕಿದರು. ಬಳಿಕ ಮೈದಾನದಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಸಮಾಗಮಗೊಂಡರು.
ಭ್ರಷ್ಟಾಚಾರ ಮುಕ್ತ ಆಡಳಿತ
ಅಶೋಕ್ ಕುಮಾರ್ ರೈ ಮಾತನಾಡಿ, ನನಗೆ ಹಣದ ಆಸೆ ಇಲ್ಲ. ಈಗಾಗಲೇ ದುಡಿದ ಹಣದಲ್ಲಿ ಒಂದು ಪಾಲನ್ನು ಸಮಾಜಕ್ಕೆ ಮೀಸಲಿಟ್ಟಿದ್ದೇನೆ. 22 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ನೆರವಾಗಿದ್ದೇನೆ. ಜಾತಿ, ಮತ, ಧರ್ಮ ಮೀರಿ ಸರ್ವಧರ್ಮದ ಕಟ್ಟಕಡೆಯ ವ್ಯಕ್ತಿಗೆ ಸ್ಪಂದಿಸಿದ್ದೇನೆ. ಕಳೆದ 5 ವರ್ಷದ ಬಿಜೆಪಿ ಆಡಳಿತದಲ್ಲಿ ಅಕ್ರಮ-ಸಕ್ರಮ, 94ಸಿಯಲ್ಲಿ ಬಡವರನ್ನು ಲೂಟಿ ಮಾಡಲಾಗಿದೆ.ಶಾಸಕನಾಗಿ ಆಯ್ಕೆಯಾದ ಬಳಿಕ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿ ಸರ್ವ ಸಮಾಜದ ಹಿತಕ್ಕಾಗಿ ದುಡಿಯುವೆ ಎಂದರು.
ಕಾಂಗ್ರೆಸ್ ವಕ್ತಾರರಾದ ಭವ್ಯಾ ನರಸಿಂಹಮೂರ್ತಿ ಮಾತನಾಡಿ, ಮಂಗಳೂರಿಗೆ ಮುಕುಟ ಪ್ರಾಯವಾಗಿದ್ದ ವಿಜಯ ಬ್ಯಾಂಕನ್ನು ಗುಜರಾತಿನ ಬರೋಡ ಬ್ಯಾಂಕ್ ಜತೆ ವಿಲೀನಗೊಳಿಸಿ, ಮಂಗಳೂರು ವಿಮಾನ ನಿಲ್ದಾಣವನ್ನು ಆದಾನಿಯ ತೆಕ್ಕೆಗೆ ನೀಡಿ ಬಿಜೆಪಿ ಜಿಲ್ಲೆಗೆ ದ್ರೋಹ ಬಗೆದಿದೆ. ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರಿಡದೆ ಅವಗಣಿಸಿದೆ. ಇದು ದ.ಕ. ಜಿಲ್ಲೆಗೆ ಬಿಜೆಪಿ ಮಾಡಿದ ಅವಮಾನ ಎಂದರು.
ವಿಧಾನಪರಿಷತ್ ಸದಸ್ಯ ಮಂಜು ನಾಥ ಭಂಡಾರಿ ಮಾತನಾಡಿ, ಬಿಜೆಪಿಯು ಈ ಬಾರಿಯ ಚುನಾವಣೆಯು ಭಯೋತ್ಪಾದಕರು ಹಾಗೂ ರಾಷ್ಟ್ರಭಕ್ತರ ನಡುವಿನ ಹೋರಾಟ ಎಂದಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ್ದು ಕಾಂಗ್ರೆಸ್ ಪಕ್ಷದವರು. ಆದರೆ ಬಿಜೆಪಿ ತನ್ನ ಆಡಳಿತದಲ್ಲಿ ಭಯೋತ್ಪಾದಕರನ್ನು ವಿಮಾನದಲ್ಲಿ ಕರೆದು ಕೊಂಡು ಹೋಗಿತ್ತು. ಕಾಂಗ್ರೆಸ್ ಎಂದೆಂದಿಗೂ ನೈಜ ರಾಷ್ಟ್ರಭಕ್ತ ಪಕ್ಷವಾಗಿದೆ ಹೊರತು ಬಿಜೆಪಿ ಅಲ್ಲ ಎಂದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಜಿಲ್ಲಾ ಉಸ್ತುವಾರಿ ಶಿಭಾ ರಾಮಚಂದ್ರನ್, ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಜಿಲ್ಲಾ ಯುವಕ ಕಾಂಗ್ರೆಸ್ ಅಧ್ಯಕ್ಷ ಲುಕಾ¾ನ್ ಬಂಟ್ವಾಳ, ಕೆಪಿಸಿಸಿ ಸದಸ್ಯ ಕಾವು ಹೇಮನಾಥ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಕೃಪಾ ಆಳ್ವ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ| ಕೆ.ವಿ. ರಾಜರಾಮ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.