Puttur ತಾಳಮದ್ದಳೆಯಿಂದ ಬುದ್ಧಿಗೆ ಗ್ರಾಸ: ಎಡನೀರು ಶ್ರೀ
ತೋಳ್ಪಾಡಿತ್ತಾಯ, ಕುರಿಯ ಗಣಪತಿ ಶಾಸ್ತ್ರಿಗೆ ಪದ್ಯಾಣ, ಕುರಿಯ ಪ್ರಶಸ್ತಿ ಪ್ರದಾನ
Team Udayavani, Jul 8, 2024, 11:46 PM IST
ಪುತ್ತೂರು: ಯಕ್ಷಗಾನ ಬಯಲಾಟಗಳು ಮನಸ್ಸಿಗೆ ಮೋದಾ ನುಭವ ನೀಡಿದರೆ, ತಾಳಮದ್ದಳೆಯು ಬುದ್ಧಿಗೆ ಗ್ರಾಸ ಒದಗಿಸುತ್ತದೆ. ಭಾಷಾಶುದ್ಧತೆ, ಪುರಾಣ ಜ್ಞಾನ, ಅಂದವಾಗಿ ಮಾತನಾಡುವ ಶಕ್ತಿ, ಗ್ರಹಿಕೆ ಸಾಮರ್ಥ್ಯ ಮತ್ತು ಬದುಕಿಗೆ ಬೇಕಾದ ಸಂದೇಶಗಳನ್ನು ಯಕ್ಷಗಾನವು ಒದಗಿಸು ತ್ತದೆ. ಅಕ್ಷರಾಭ್ಯಾಸ ಇಲ್ಲದವರೂ ಆಟ, ಕೂಟಗಳನ್ನು ನೋಡಿಯೇ ಪುರಾಣ ಜ್ಞಾನವನ್ನು ಪಡೆದವರಿದ್ದಾರೆ. ಅದು ಯಕ್ಷಗಾನದ ಶಕ್ತಿ ಎಂದು ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾ ನಂದ ಭಾರತೀ ಸ್ವಾಮೀಜಿ ಹೇಳಿದರು.
ಪುತ್ತೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾ ಭವನದಲ್ಲಿ ಜರಗಿದ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಆಯೋಜನೆಯ ತಾಳ ಮದ್ದಳೆ ಸಪ್ತಾಹದ ಸಮಾರೋಪದಲ್ಲಿ ಮಾತನಾಡಿದ ಅವರು, ಎಡನೀರು ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭ ದಲ್ಲಿ ಹಿಂದಿನಿಂದಲೂ ತಾಳಮದ್ದಳೆ ಆರಾಧನೆಯ ರೂಪದಲ್ಲಿ ನಡೆಯುತ್ತದೆ ಎಂದರು.
ಪ್ರಶಸ್ತಿ ಪ್ರದಾನ
ಪದ್ಯಾಣ ಮನೆತನದ ಹಿರಿಯರಾದ ಪುಟ್ಟು ನಾರಾಯಣ ಭಾಗವತರ ಸ್ಮೃತಿಯಲ್ಲಿ ನೀಡುವ ಪದ್ಯಾಣ ಪ್ರಶಸ್ತಿಯನ್ನು ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಹಾಗೂ ಕುರಿಯ ವಿಠಲ ಶಾಸ್ತ್ರಿ ನೆನಪಿನ ಕುರಿಯ ಪ್ರಶಸ್ತಿಯನ್ನು ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಬಿ.ಸೀತಾರಾಮ ತೋಳ್ಪಾಡಿತ್ತಾಯರಿಗೆ ಶ್ರೀಗಳು ಪ್ರದಾನಿಸಿದರು. ಕುರಿಯ ಸ್ಮೃತಿ ಗೌರವವನ್ನು ಯಕ್ಷಗಾನ ಅರ್ಥದಾರಿಗಳಾದ ಕೆ.ಭಾಸ್ಕರ ರಾವ್ ಹಾಗೂ ಭಾಸ್ಕರ ನೂರಿತ್ತಾಯ ಬಾರ್ಯ ಇವರಿಗೆ ನೀಡಲಾಯಿತು.
ಪುತ್ತೂರು ಮುಳಿಯ ಜುವೆಲರ್ಸ್ ಆಡಳಿತ ನಿರ್ದೇಶಕ ಮುಳಿಯ ಕೇಶವ ಪ್ರಸಾದ್, ಯಕ್ಷಗಾನ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಷಿಯವರು ಪ್ರಶಸ್ತಿ ಪುರಸ್ಕೃತರನ್ನು ನುಡಿಹಾರಗಳ ಮೂಲಕ ಗೌರವಿಸಿದರು. ಶೀಲಾ ಗಣಪತಿ ಭಟ್ ಉಪಸ್ಥಿತರಿದ್ದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಡಾ| ಟಿ. ಶ್ಯಾಮ ಭಟ್ ಮಾತನಾಡಿ, ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರು ಕಾಲಮಿತಿ ಪ್ರದರ್ಶನವನ್ನು ಯಶಸ್ವಿಯಾಗಿ ನಿಭಾಯಿಸಿದವರು. ಪದ್ಯಾಣ ಮತ್ತು ಕುರಿಯ ಮನೆತನಗಳ ಯಕ್ಷಗಾನೀಯ ಕೊಡುಗೆಗಳಲ್ಲಿ ಸಮರ್ಪಣ ಭಾವವಿರುವುದನ್ನು ಕಾಣಬಹುದು ಎಂದರು.
ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ ಭಟ್ಟರು ಸಮ್ಮಾನಿತರನ್ನು ನುಡಿಹಾರಗಳ ಮೂಲಕ ಗೌರವಿಸಿದರು. ತಾಳಮದ್ದಳೆ ಸಪ್ತಾಹದುದ್ದಕ್ಕೂ ಭಾಗವತ ಪದ್ಯಾಣ ಗಣಪತಿ ಭಟ್ಟರ ಸ್ಮೃತಿಯನ್ನು ಮಾಡಲಾಗಿತ್ತು.
ಕಾರ್ಯಕ್ರಮಕ್ಕೆ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ಸಹಕಾರ ನೀಡಿತು.
ಪದ್ಯಾಣ ಪ್ರಶಸ್ತಿ ಸಮಿತಿಯ ಸ್ವಸ್ತಿಕ್ ಪದ್ಯಾಣ ವಂದಿಸಿದರು. ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ನಿರ್ವಹಿಸಿದರು. ಕೊನೆಯಲ್ಲಿ ಗಂಗಾ ಸಾರಥ್ಯ ಪ್ರಸಂಗದ ತಾಳಮದ್ದಳೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.