Puttur: ಗಡೀಪಾರು ಆದೇಶಕ್ಕೆ ಮಾನದಂಡವೇನು- ಸಂಸದ ನಳಿನ್
Team Udayavani, Nov 17, 2023, 1:35 AM IST
ಪುತ್ತೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಪರಾಧ ಕೃತ್ಯಗಳಲ್ಲಿ ತೊಡಗಿರು ವವರ ಪಟ್ಟಿಯನ್ನು ಪೊಲೀಸ್ ಇಲಾಖೆ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿ ಅಲ್ಲಿಂದ ಗಡೀಪಾರಿಗೆ ನೋಟಿಸ್ ನೀಡುವ ಪ್ರಕ್ರಿಯೆ ಆಗಿಂದಾಗ್ಗೆ ನಡೆಯುತ್ತಿದ್ದು ಈ ಬಾರಿ ನೋಟಿಸ್ ಹೊರಡಿಸಲಾದ ಪುತ್ತೂರಿನ ನಾಲ್ವರನ್ನು ವಿನಾ ಕಾರಣಕ್ಕೆ ಗಡೀಪಾರಿನ ಪಟ್ಟಿಗೆ ಸೇರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
ಬಜರಂಗದಳ ಕಾರ್ಯಕರ್ತರ ಗಡೀಪಾರು ಆದೇಶಕ್ಕೆ ಮಾನದಂಡ ವೇನು? ಕೇವಲ ಒಂದು ಕೇಸು ಇದ್ದವರಿಗೂ ಗಡೀಪಾರು ನೋಟಿಸ್ ನೀಡಲಾಗಿದೆ. ಹಾಗಿದ್ದರೆ ನನ್ನನ್ನೂ ಗಡೀಪಾರು ಮಾಡಿ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಬಜರಂಗದಳದ ಐವರು ಕಾರ್ಯ ಕರ್ತರ ಗಡೀಪಾರಿಗೆ ಆದೇಶ ಬಂದ ಹಿನ್ನಲೆಯಲ್ಲಿ ಕಾರ್ಯಕರ್ತರು ಸಂಸದರನ್ನು ಭೇಟಿ ಮಾಡಿದ್ದು, ಅವರ ಸಮ್ಮುಖದಲ್ಲೇ ಅಧಿಕಾರಿಗಳ ಜತೆ ದೂರವಾಣಿ ಮೂಲಕ ಈ ಕುರಿತು ಮಾತನಾಡಿದರು. ಆದೇಶ ಮಾಡುವ ಮೊದಲು ಸರಿಯಾಗಿ ಪರಿಶೀಲಿಸಬೇಕು. ಅದನ್ನು ಬಿಟ್ಟು ಯಾರದ್ದೋ ಒತ್ತಡಕ್ಕೆ ಮಣಿದು ಕ್ರಮ ಕೈಗೊಳ್ಳಬೇಡಿ ಎಂದರು.
ಗಡೀಪಾರು ಆದೇಶ ಒಪ್ಪತಕ್ಕದ್ದಲ್ಲ: ಪೇಜಾವರ ಶ್ರೀ
ಮಂಗಳೂರು: ಹಿಂದೂ ಕಾರ್ಯಕರ್ತರನ್ನು ಗಡೀಪಾರು ಮಾಡುವ ಪ್ರಕ್ರಿಯೆ ಒಪ್ಪುವಂಥದ್ದಲ್ಲ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ. ಗಡೀಪಾರು ಮಾಡುವ ಕೆಲಸ ಸರಕಾರಕ್ಕೆ ಶೋಭೆ ತರುವಂಥದ್ದಲ್ಲ. ಒಂದು ಗುಂಪನ್ನು ಗುರಿ ಮಾಡಿ ಶಿಕ್ಷಿಸುವುದು ಸಮರ್ಥನೀಯವಲ್ಲ. ಇದಕ್ಕೆ ಸರಕಾರ ಉತ್ತರ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.