Putturu: ಪುಡಾ ಅಧ್ಯಕ್ಷ ದಿಢೀರ್‌ ರಾಜೀನಾಮೆ

ಶಾಸಕ ಅಶೋಕ್‌ ರೈ ವಿರುದ್ಧ ಬಹಿರಂಗ ಅಸಮಾಧಾನ

Team Udayavani, Jul 14, 2024, 6:28 AM IST

Ashok-Rai

ಪುತ್ತೂರು : ಅಧಿಕಾರ ಸ್ವೀಕರಿಸಿದ ನಾಲ್ಕೇ ತಿಂಗಳಲ್ಲಿ ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಮಾತಿನಿಂದ ಬೇಸರಗೊಂಡು ಈ ನಿರ್ಧಾರ ತಳೆದಿರು ವುದಾಗಿ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕ ಟಿಸಿದ ಭಾಸ್ಕರ್‌, ಜು.11ರಂದು ಶಾಸಕರು ನನಗೆ ಕರೆ ಮಾಡಿ, ಪುಡಾ ಸತ್ತಿದೆ, ನಿಮ್ಮ ಕೆಲಸ ಸಾಲದು ಎಂದರು ನಾನು ಸ್ವಾಭಿಮಾನಿ. ಇಂದು ನನ್ನನ್ನು ಯಾರು ನೇಮಿಸಿದರೋ ಅವರಿಗೆ ಅಸಮಾಧಾನ ಇದೆಯೋ ಗೊತ್ತಿಲ್ಲ. ಆದರೆ ಶಾಸಕರ ಮಾತಿನಿಂದ ನನಗೆ ನೋವಾಗಿದೆ ಎಂದರು.

ನಾನು ಪದಗ್ರಹಣ ಸ್ವೀಕರಿಸಿದ್ದು ಮಾ.16ರಂದು. ಬಳಿಕ ಜಾರಿಯಾದ ಚುನಾವಣೆ ನೀತಿ ಸಂಹಿತೆ ಜೂ.5 ರ ವರೆಗೆ ಇತ್ತು. 22 ದಿನದಲ್ಲಿ ಕಟ್‌ ಕನ್ವರ್ಶನ್‌ ಸಹಿತ ಹಲವು ಕೆಲಸಗಳನ್ನು ಮಾಡಿದ್ದೇನೆ ಎಂದು ಹೇಳಿದರು. ನಾನು ಪುಡಾ ಅಧ್ಯಕ್ಷತೆಗೆ ಆಸೆ ಪಟ್ಟವನಲ್ಲ. ನನ್ನನ್ನು ಶಾಸಕರೇ ಆಯ್ಕೆ ಮಾಡಿದ್ದರು. ಅವರಿಗೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದಾಗ ರಾಜೀನಾಮೆ ಸೂಕ್ತ. ಹಾಗಾಗಿ ರಾಜೀ ನಾಮೆ ಪತ್ರವನ್ನು ಸರಕಾರಕ್ಕೆ ರಿಜಿಸ್ಟರ್‌ ಪೋಸ್ಟ್‌ ಮೂಲಕ ಕಳುಹಿಸಿದ್ದೇನೆ. ಅದನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಪಕ್ಷವು ನನಗೆ ಹಲವು ಹುದ್ದೆ ನೀಡಿದ್ದು, ನಿಭಾಯಿಸಿದ್ದೇನೆ ಎಂದರು.

ನೋವು ತರುವ ಹೇಳಿಕೆ ನೀಡಿಲ್ಲ:
ಕಟ್‌ ಕನ್ವರ್ಶನ್‌ ಸಮಸ್ಯೆ ಸಹಿತ ಹಲವು ವಿಷಯಗಳ ಬಗ್ಗೆ ನಿರ್ಣಯ ಕೈಗೊಂಡು ಸರಕಾರಕ್ಕೆ ಕಳುಹಿಸುವಂತೆ 3 ವಾರಗಳ ಹಿಂದೆಯೇ ತಿಳಿಸಿದ್ದೆ. ಆ ಕೆಲಸ ಆಗಿಲ್ಲ. ಇದನ್ನು ದೂರವಾಣಿ ಮೂಲಕ ಕೇಳಿದ್ದು ಬಿಟ್ಟರೆ, ನೋವಾ ಗುವಂತೆ ವರ್ತಿಸಿಲ್ಲ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

ಕಟ್‌ ಕನ್ವರ್ಶನ್‌ ಸಮಸ್ಯೆ ಬಗ್ಗೆ ನಿತ್ಯವೂ ನನಗೆ ಹತ್ತಾರು ಕರೆಗಳು ಬರುತ್ತಿದ್ದು, ಅವರ ಗಮನಕ್ಕೆ ತಂದಿ ದ್ದೇನೆ. ಇದು ನನ್ನ ಜವಾಬ್ದಾರಿ. ನಾನೂ ಸೇರಿದಂತೆ ಬೇರೆ ಬೇರೆ ಸಮಿತಿ ಅಧ್ಯಕ್ಷ, ಸದಸ್ಯರು ಜನರ ಸಮಸ್ಯೆಗೆ ಸ್ಪಂದಿಸಬೇಕು. ಅದರಲ್ಲಿ ವಿಳಂಬವಾದರೆ ನಾನು ಸುಮ್ಮನಿ ರಲಾರೆ. ಇದರಲ್ಲಿ ರಾಜಿ ಇಲ್ಲ ಎಂದು ತಿಳಿಸಿದ್ದಾರೆ. ಭಾಸ್ಕರ ಪಕ್ಷದ ಶಿಸ್ತಿನ ಕಾರ್ಯಕರ್ತ. ಅವರೊಂದಿಗೆ ಮಾತನಾಡುವೆ. ನೋವಾಗಿದ್ದರೆ ಕ್ಷಮೆ ಯಾಚಿಸುವೆ ಎಂದೂ ತಿಳಿಸಿದ್ದಾರೆ.

ಶಾಸಕರ ಸಮ್ಮುಖವೇ ಅಧಿಕಾರ ಸ್ವೀಕಾರ
ಭಾಸ್ಕರ ಕೋಡಿಂಬಾಳ ಅವರನ್ನು ಖುದ್ದು ಶಾಸಕರೇ ಪುಡಾ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಿದ್ದರು. ನ್ಯಾಯವಾದಿ ಆಗಿರುವ ಅವರು ಚುನಾವಣ ಸಂದರ್ಭದಲ್ಲಿ ಶಾಸಕರ ಪರವಾಗಿ ಕೆಲಸ ಮಾಡಿದ್ದರು. ಇಬ್ಬರೂ ಆತ್ಮೀಯರಾಗಿದ್ದರು. ಮಾ.16ರಂದು ಪುಡಾ ಅಧ್ಯಕ್ಷರಾಗಿ ಶಾಸಕರ ಉಪಸ್ಥಿತಿಯಲ್ಲೇ ಅಧಿಕಾರ ಸ್ವೀಕರಿಸಿದ್ದರು.

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.