ಜರ್ಮನ್ ಓಪನ್ ಬ್ಯಾಡ್ಮಿಂಟನ್: ಸಿಂಧು, ಶ್ರೀಕಾಂತ್ ಮೇಲೆ ನಿರೀಕ್ಷೆ
Team Udayavani, Mar 7, 2022, 10:45 PM IST
ಹೊಸದಿಲ್ಲಿ: ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧು, ಭರವಸೆಯ ಆಟಗಾರರಾದ ಕೆ. ಶ್ರೀಕಾಂತ್ ಮತ್ತು ಲಕ್ಷ್ಯ ಸೇನ್ ಅವರು ಮಂಗಳ ವಾರ ಆರಂಭವಾಗುವ “ಜರ್ಮನ್ ಓಪನ್ ಸೂಪರ್-300 ಬ್ಯಾಡ್ಮಿಂಟನ್ ಟೂರ್ನಿ’ಯಲ್ಲಿ ಭಾರತದ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ.
ಮುಂಬರುವ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಂತಹ ಮಹತ್ವದ ಕೂಟಗಳ ದೃಷ್ಟಿಯಿಂದ ಭಾರತದ ಆಟಗಾರರು ಇಲ್ಲಿ ಉತ್ತಮ ಸಾಮರ್ಥ್ಯ ತೋರುವ ಅಗತ್ಯವಿದೆ. 7à ಶ್ರೇಯಾಂಕದ ಸಿಂಧು ಈ ಟೂರ್ನಿಯ ಮಹಿಳಾ ಸಿಂಗಲ್ಸ್ ನಲ್ಲಿ ಥಾಯ್ಲೆಂಡ್ ಆಟಗಾರ್ತಿ ಬುಸಾನನ್ ಒಂಗ್ಬಾಮ್ರುಂಗಫಾನ್ ವಿರುದ್ಧ ಅಭಿಯಾನ ಆರಂಭಿಸಲಿದ್ದಾರೆ.
ಎರಡು ಬಾರಿಯ ಕಾಮನ್‌ವೆಲ್ತ್ ಗೇಮ್ಸ್ ಚಿನ್ನ ವಿಜೇತೆ ಸೈನಾ ನೆಹ್ವಾಲ್ ಮೊದಲ ಪಂದ್ಯದಲ್ಲಿ ಸಿಂಗಾಪುರದ ಯೊ ಜಿಯಾ ಮಿನ್ ಸವಾಲು ಎದುರಿಸಲಿದ್ದಾರೆ.
ಪುರುಷರ ಸಿಂಗಲ್ಸ್
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್ ಮೊದಲ ಸುತ್ತಿನಲ್ಲಿ ಥಾಯ್ಲೆಂಡ್‌ನ ಕಾಂತಫೊನ್ ವಾಂಗcರೊಯಿನ್ ಎದುರು ಕಣಕ್ಕಿಳಿಯುವರು. ಶ್ರೀಕಾಂತ್ ಅವರಿಗೆ ಮೊದಲ ಸುತ್ತಿನಲ್ಲಿ ಫ್ರಾನ್ಸ್‌ನ ಬ್ರೈಸ್ ಲೆವರ್ಡೆಜ್ ಸವಾಲು ಎದುರಾಗಿದೆ.
ಉಳಿದಂತೆ ಪುರುಷರ ಸಿಂಗಲ್ಸ್‌ನಲ್ಲಿ ಎಚ್.ಎಸ್. ಪ್ರಣಯ್, ಪಿ. ಕಶ್ಯಪ್ ಕೂಡ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.
ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ-ಚಿರಾಗ್ ಶೆಟ್ಟಿ, ಧ್ರುವ್ ಕಪಿಲ-ಎಂ.ಆರ್. ಅರ್ಜುನ್, ಮಹಿಳಾ ಡಬಲ್ಸ್‌ನಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ-ಎನ್. ಸಿಕ್ಕಿ ರೆಡ್ಡಿ, ತ್ರೀಶಾ ಜೋಲಿ- ಗಾಯತ್ರಿ ಗೋಪಿಚಂದ್ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.