ಉಡುಪಿ: ಪ್ರತೀ ತಾಲೂಕಲ್ಲೂ ಕ್ವಾರಂಟೈನ್ ನೋಂದಣಿ ಕೇಂದ್ರ
Team Udayavani, May 11, 2020, 11:45 AM IST
ಉಡುಪಿ: ಜಿಲ್ಲೆಗೆ ಹೊರರಾಜ್ಯದಿಂದ ಬರುವವರನ್ನು ಕ್ವಾರಂಟೈನ್‌ಗೆ ಒಳಪಡಿಸಲು ಎಲ್ಲ ತಾಲೂಕುಗಳಲ್ಲಿಯೂ ಕ್ವಾರಂಟೈನ್ ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಬೈಂದೂರು ತಾಲೂಕಿನಲ್ಲಿರುವ ಮಿಲಿಟರಿ ಮೈದಾನ, ಕುಂದಾಪುರ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬ್ರಹ್ಮಾವರ ಬೋರ್ಡ್ ಹೈಸ್ಕೂಲು, ಉಡುಪಿ ಬೋರ್ಡ್ ಹೈಸ್ಕೂಲು, ಕಾರ್ಕಳದ ಬಂಡೀಮಠ ಮೈದಾನ, ಕಾಪು ಪುರಸಭೆ ವಠಾರ, ಹೆಬ್ರಿ ಸರಕಾರಿ ಪ.ಪೂ. ಕಾಲೇಜುಗಳಲ್ಲಿ ನೋಂದಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.
6,000 ಮಂದಿ ನೋಂದಣಿ
ಹೊರರಾಜ್ಯದಿಂದ ಬರಲು ಪ್ರಥಮ ಹಂತದಲ್ಲಿ ಸುಮಾರು 6,000 ಮಂದಿ ನೋಂದಾಯಿಸಿಕೊಂಡಿದ್ದಾರೆ. ಮೊದಲಿಗೆ ಅವರನ್ನು ಜಿಲ್ಲಾ ಗಡಿಯಲ್ಲಿ ಆರೋಗ್ಯ ತಪಾಸಣೆ ಮಾಡಿ, ಪೊಲೀಸ್ ಎಸ್ಕಾರ್ಟ್‌ನೊಂದಿಗೆ ಸಂಬಂಧಪಟ್ಟ ತಾಲೂಕಿನ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಲಾಗುತ್ತದೆ. ಆರೋಗ್ಯ ಪರೀಕ್ಷೆಯಲ್ಲಿ ರೋಗ ಲಕ್ಷಣ ಕಂಡಲ್ಲಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಹೊಟೇಲ್‌ಗಳಲ್ಲಿ ಕ್ವಾರಂಟೈನ್ ಆಗಬಯಸುವವರು ವೆಚ್ಚವನ್ನು ತಾವೇ ಭರಿಸಬೇಕು. ಜಿಲ್ಲಾಡಳಿತ ವ್ಯವಸ್ಥೆ ಮಾಡುವ ಕೇಂದ್ರಗಳಲ್ಲಿ ಉತ್ತಮ ರೀತಿಯಲ್ಲಿ ಉಚಿತ ಊಟೋಪಚಾರ ಸೌಲಭ್ಯವಿರುತ್ತದೆ.
ವಿದೇಶದಿಂದ ಬರುವವರಿಗಾಗಿ ಸಿಂಗಲ್ ರೂಂಗಳಲ್ಲಿ ಕ್ವಾರಂಟೈನ್ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟಾರೆ ವಿದೇಶದಿಂದ ಮತ್ತು ಹೊರರಾಜ್ಯದಿಂದ ಜಿಲ್ಲೆಗೆ ಸುಮಾರು 20 ಸಾವಿರ ಮಂದಿ ಆಗಮಿಸುವ ನಿರೀಕ್ಷೆಯಿದೆ.
ಜನರ ಆರೋಗ್ಯಕ್ಕೆ ಆದ್ಯತೆ
ಜಿಲ್ಲೆಯಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಅತ್ಯಂತ ಶಿಸ್ತಿನಿಂದ ಅತ್ಯುತ್ತಮವಾಗಿ ಪಾಲಿಸಲಾಗುತ್ತಿದೆ. ಹೊರಭಾಗದಿಂದ ಬರುವ ವ್ಯಕ್ತಿಗಳಿಂದ ಜಿಲ್ಲೆಯ ಜನರಿಗೆ ಸೋಂಕು ಹರಡದಂತೆ ಜಿಲ್ಲಾಡಳಿದ ಜನರ ಆರೋಗ್ಯಕ್ಕೆ ಆದ್ಯತೆ ನೀಡಿ ಕರ್ತವ್ಯ ನಿರ್ವಹಿಸುತ್ತಿದೆ.
-ಜಿ. ಜಗದೀಶ್, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.