ಕೆಲಸಕ್ಕೆ ಬಂದವರಿಗೆ ಕ್ವಾರಂಟೈನ್‌ ಸೀಲ್‌!

Team Udayavani, May 14, 2020, 4:19 AM IST

kelasakke

ಬೆಂಗಳೂರು: ಕರ್ತವ್ಯಕ್ಕೆ ಹಾಜರಾಗಲು ಹೊರ ಜಿಲ್ಲೆಗಳಿಂದ ಬರುವ ಸಾರಿಗೆ ನೌಕರರಿಗೆ ಸ್ಥಳೀಯ ವಾಗಿ ಕ್ವಾರಂಟೈನ್‌ ಮಾಡಲಾಗುತ್ತಿದ್ದು, ಇದರಿಂದ ನೌಕರರು ಸೇವೆಗೆ ಮರಳಲು ಹಿಂದೇಟು ಹಾಕುವಂತೆ ಮಾಡುತ್ತಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ ಸುಮಾರು 60-65 ಸಾವಿರ ಸಾರಿಗೆ ನೌಕರರಿದ್ದಾರೆ. ಇದರಲ್ಲಿ ಬಹುತೇಕರು ಹೊರ ಜಿಲ್ಲೆಗಳು ಅದರಲ್ಲೂ ಉತ್ತರ ಕರ್ನಾಟಕದವರು ಅಧಿಕ ಸಂಖ್ಯೆಯಲ್ಲಿದ್ದಾರೆ.

ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಅವರೆಲ್ಲರೂ  ಊರುಗಳಿಗೆ ತೆರಳಿ ದ್ದರು. ಈಗ ಅಗತ್ಯ ಸೇವೆ, ಒಪ್ಪಂದಕ್ಕೊಳಪಟ್ಟ ಸೇವೆ ಸೇರಿದಂತೆ ಹಲವು ಉದ್ದೇ ಶ ಗಳಿಗಾಗಿ ಬಸ್‌ಗಳು ರಸ್ತೆಗಿಳಿಯುತ್ತಿವೆ. ಈ ಮಧ್ಯೆ ಲಾಕ್‌ಡೌನ್‌ ಸಡಿಲಿ ಕೆಯೂ ಆಗಿದೆ. ಈ ಹಿನ್ನೆಲೆ ಯಲ್ಲಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ಆಸಕ್ತಿ ತೋರಿಸುತ್ತಿದ್ದಾರೆ. ಬಾಗಲಕೋಟೆ, ಯಾದಗಿರಿ, ರಾಯಚೂರು, ಕಲ ಬುರಗಿ, ವಿಜಯಪುರ, ಹುಬ್ಬಳ್ಳಿ-ಧಾರವಾಡ, ದಾವ ಣ  ಗೆರೆ, ಮಂಡ್ಯ ಮತ್ತಿತರ ಕಡೆಗಳಿಂದ ಕೆಲಸಕ್ಕೆ ಹಾಜರಾಗಲು ಬೆಂಗಳೂರು, ಮೈಸೂರು  ಸೇರಿದಂತೆ ನಿಗಮಗಳ ವ್ಯಾಪ್ತಿಯಲ್ಲಿರುವ ಘಟಕಗಳತ್ತ ಮುಖ ಮಾಡುತ್ತಿದ್ದಾರೆ.

ಆದರೆ, ಹೀಗೆ ಬೇರೆ ಊರುಗಳಿಂದ ಬಂದವರ ಬಗ್ಗೆ ಸ್ಥಳೀಯರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಆ ಮೂಲಕ ಕ್ವಾರಂಟೈನ್‌ ಮುದ್ರೆ ಹಾಕುತ್ತಿರುವುದು  ಕಂಡುಬರುತ್ತಿದೆ. ಇದು ಸಾರಿಗೆ ನಿಗಮಗಳಿಗೆ ತಲೆನೋವಾಗಿ ಪರಿಣಮಿಸಿದೆ. ವಿಶೇಷವಾಗಿ ನಗರದಲ್ಲಿ ಕಾರ್ಯನಿರ್ವಹಿಸುವ ಸಾರಿಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಬಾಡಿಗೆ ಮನೆ ಗಳಲ್ಲಿ ದ್ದಾರೆ. ಲಾಕ್‌ಡೌನ್‌ ಸಡಿಲಿಕೆ  ಹಿನ್ನೆಲೆಯಲ್ಲಿ ನೌಕ ರರು ಕೆಲಸಕ್ಕೆ ಹಾಜರಾಗಲು ಆಗಮಿಸುತ್ತಿದ್ದಂತೆ, ಕ್ವಾರಂ ಟೈನ್‌ ಮಾಡಲಾಗುತ್ತಿದೆ. ಇದರಿಂದ ಕೆಲವರು ನಗರಕ್ಕೆ ಬರಲೂ ಹಿಂದೇಟು ಹಾಕುತ್ತಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಮೂಲಗಳು  “ಉದಯವಾಣಿ’ಗೆ ತಿಳಿಸಿವೆ.

ರ್‍ಯಾಂಡಮ್‌ ಪರೀಕ್ಷೆ ಅಗತ್ಯ: ಎರಡೂ ನಿಗಮಗಳಲ್ಲಿ ಕಾರ್ಯನಿರ್ವಹಿಸುವ ನೌಕರರಲ್ಲಿ ಬಹುತೇಕ ಉತ್ತರ ಕರ್ನಾಟಕದವರಾಗಿದ್ದಾರೆ. ಆ ಪೈಕಿ ಕೆಲವು ಜಿಲ್ಲೆಗಳು ಈಗಾಗಲೇ ಕೆಂಪು ವಲಯದಲ್ಲಿದ್ದು, ಅತ್ಯಂತ ವೇಗ ವಾಗಿ ಹರಡುತ್ತಿದೆ.  ಅಂತಹ ಪ್ರದೇಶಗಳಿಂದ ನಗರಕ್ಕೆ ಸಾವಿರಾರು ಸಂಖ್ಯೆಯಲ್ಲಿ ಬರುತ್ತಾರೆ. ಆದ್ದರಿಂದ ರ್‍ಯಾಂಡಮ್‌ ಪರೀಕ್ಷೆ ಅಗತ್ಯವಿದೆ ಎಂಬ ಅಭಿಪ್ರಾಯ ಸ್ವತಃ ಬಿಎಂಟಿಸಿ ಅಧಿಕಾರಿಗಳ ವಲಯ ದಲ್ಲಿ ಕೇಳಿಬರುತ್ತಿದೆ. ಬರೀ ಬಿಎಂಟಿಸಿಯಲ್ಲೇ 35  ಸಾವಿರ ನೌಕರರು ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಚಾಲಕ ಮತ್ತು ನಿರ್ವಾಹಕರು ಹಾಗೂ ಮೆಕಾನಿಕ್‌ಗಳು ಅಧಿಕ ಸಂಖ್ಯೆ ಯಲ್ಲಿದ್ದಾರೆ.

ಈಗಾಗಲೇ ಕರ್ತವ್ಯಕ್ಕೆ ಹಾಜರಾಗಲು ವೈದ್ಯಕೀಯ ಪ್ರಮಾಣಪತ್ರ ಪಡೆಯುವುದು ಕಡ್ಡಾಯ  ಗೊಳಿಸಲಾಗಿದೆ. ಆದರೆ, ಪ್ರಮಾಣಪತ್ರ ನೀಡುವ ವೇಳೆ ಕೇವಲ ಜ್ವರ ಅಥವಾ ಶೀತದಂತಹ ಅಂಶಗಳನ್ನು ಪರೀಕ್ಷಿಸಿ ನೀಡಲಾಗುತ್ತದೆ. “ಕೋವಿಡ್‌-19’ರ ಪರೀಕ್ಷೆ ನಡೆಸುವುದಿಲ್ಲ; ಅದಕ್ಕೆ ಸಂಬಂಧಿಸಿದ ಉಪಕರಣಗಳ ಲಭ್ಯತೆಯೂ  ಅಲ್ಲಿಲ್ಲ. ಹೀಗಿರುವಾಗ, ಪರಿಣಾಮಕಾರಿ  ಯಾಗಿ ಆಗದು. ಹಾಗಂತ ಎಲ್ಲ ಸಿಬ್ಬಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ, ಪರೀಕ್ಷೆಗೊಳಪಡಿಸುವುದು ಕಷ್ಟ. ಈ ಹಿನ್ನೆಲೆಯಲ್ಲಿ ರ್‍ಯಾಂಡಮ್‌ ಪರೀಕ್ಷೆ ಸೂಕ್ತ. ಇದರಿಂ ದ ಮುಂದಿನ  ದಿನಗಳಲ್ಲಿ ಬಸ್‌ನಲ್ಲಿ ಸಂಚರಿ ಸುವ ಪ್ರಯಾ ಣಿಕರಿಗೂ ಮಾನಸಿಕಸ್ಥೈರ್ಯ ಹೆಚ್ಚು ತ್ತದೆ. ಒಂದು ವೇಳೆ ಯಾವುದಾದರೂ ಒಂದು ಪ್ರಕರಣ “ಪಾಸಿಟಿವ್‌’ ಆದರೂ ಸಮಸ್ಯೆ ಬಿಗಡಾಯಿ ಸುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ  ಇಂತಹ ದ್ದೊಂದು ಪರೀಕ್ಷೆ ಆಗಬೇಕಿದೆ ಎಂದು ಅಧಿಕಾರಿಗಳು ಪ್ರತಿಪಾದಿಸುತ್ತಾರೆ.

ರ್‍ಯಾಂಡಮ್‌ ಟೆಸ್ಟ್‌ ಕಷ್ಟ; ಎಂಡಿ: ಈಗಲೇ ಕರ್ತವ್ಯಕ್ಕೆ ಹಾಜರಾಗುವಂತೆ ಯಾರಿಗೂ ಸೂಚಿಸಿಲ್ಲ. ಸದ್ಯಕ್ಕೆ ಅಗತ್ಯ ಸೇವೆಗಳಿಗೆ ನೀಡಲಾಗಿರುವ ಬಸ್‌ಗಳಲ್ಲಿ ಸುಮಾರು ಐದು ಸಾವಿರ ನೌಕರರು ಕಾರ್ಯ ನಿರ್ವಹಿಸುತ್ತಿ ದ್ದಾರೆ. ಉಳಿದವರು  ಲಾಕ್‌ಡೌನ್‌ ತೆರವಾದ ನಂತರ ಹಂತ- ಹಂತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಅವರೆಲ್ಲರನ್ನೂ ತಪಾಸಣೆಗೊಳಪಡಿಸಲಾಗುತ್ತಿದೆ. ರ್‍ಯಾಂಡಮ್‌ ಟೆಸ್ಟ್‌ ಕಷ್ಟವಾಗಬಹುದು. ಆದರೆ, ಸಾಕಷ್ಟು ಸಮಯಾವಕಾಶ ಇರುವುದರಿಂದ ಸಾಮಾನ್ಯ  ಪರೀಕ್ಷೆಗೊಳಪಡಿಸಲಾಗು ವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಸ್ಪಷ್ಟಪಡಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲೇ ಸಾಕಷ್ಟು ಒತ್ತಡ ಇದೆ. ನಿತ್ಯ ಸಾವಿರಾರು ಜನ ಅಲ್ಲಿ ಪರೀಕ್ಷೆಗೊಳಪಡುತ್ತಿದ್ದಾರೆ. ಅಂತ ಹದ್ದರಲ್ಲಿ  ಸಿಬ್ಬಂದಿ ಪರೀಕ್ಷೆ ಮತ್ತಷ್ಟು ಒತ್ತಡ ಆಗಬಹುದು ಎಂಬ ಕಾರಣಕ್ಕೆ ನಮ್ಮಲ್ಲಿರುವ ವ್ಯವಸ್ಥೆಯಲ್ಲೇ ತಪಾಸಣೆ ನಡೆಸಲಾಗುತ್ತಿದೆ ಎಂದೂ ಅವರು ಹೇಳಿದರು.

ರ್‍ಯಾಂಡಮ್‌ ಟೆಸ್ಟ್‌ ಮಾಡಿದರೂ ಇಲ್ಲಿ ಸ್ಪಷ್ಟತೆ ಸಿಗುವುದಿಲ್ಲ. ಹಾಗಾಗಿ ಇದು ಉಪಯೋಗ ಆಗುವುದಿಲ್ಲ. ಇನ್ನು ಎಲ್ಲ ಸಿಬ್ಬಂದಿ ಪರೀಕ್ಷೆಗೊಳಪಡಿಸಲು ಸದ್ಯದ ಸ್ಥಿತಿಯಲ್ಲಿ ಕಷ್ಟವೂ ಇದೆ. ಆದ್ದರಿಂದ ಲಕ್ಷಣಗಳು  ಕಂಡುಬರುವಂತಹವರನ್ನು ಹಾಗೂ ಆಯಾ ಜಿಲ್ಲೆಗಳಲ್ಲಿ ಕಂಟೈನ್ಮೆಂಟ್‌ ವಲಯದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸ ಬೇಕಾಗುತ್ತದೆ.
-ಡಾ.ವಿ. ರವಿ, ವೈರಾಲಜಿ ವಿಭಾಗ ಮುಖ್ಯಸ್ಥರು, ನಿಮ್ಹಾನ್ಸ್‌

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqeqwe

Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.