ಶೀಘ್ರ ಹೊಸ ಮಾಹಿತಿ ತಂತ್ರಜ್ಞಾನ ನೀತಿ


Team Udayavani, Dec 18, 2019, 3:07 AM IST

BSY1

ಬೆಂಗಳೂರು: ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳನ್ನು ಒಂದೇ ಅಧಿನಿಯಮದಡಿ ತರಲು ಮತ್ತು ನಾವಿನ್ಯತೆಗೆ ಕಾನೂನು ರೂಪಿಸಲು ರಾಜ್ಯ ಸರ್ಕಾರ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮಂಗಳವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನವೋದ್ಯಮ, ಉದ್ಯಮಗಳ ಜತೆ ಸಂವಾದ ಮತ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ನಾವಿನ್ಯತೆ ಜನರ ಸಬಲೀಕರಣಕ್ಕೆ ದಾರಿ ಮಾಡಿಕೊಡಲಿದೆ. ಕೌಶಲ್ಯ ವರ್ಧನೆ, ನವೋದ್ಯಮಗಳ ಪೋಷಣೆ, ಜಾಗತಿಕ ಒಕ್ಕೂಟಗಳ ಏರ್ಪಡಿಸಿಕೊಳ್ಳುವಿಕೆ ಹಾಗೂ ನಾವಿನ್ಯತೆ ಬೆಂಬಲಿಸಲು ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.

ಅವಕಾಶ: ರಾಜ್ಯ ಸರ್ಕಾರ ಶೀಘ್ರ ಹೊಸ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ ಜಾರಿಗೊಳಿಸಲಿದೆ. ಇದರಲ್ಲಿ ಹಂತ-2 ಮತ್ತು ಹಂತ-3 ರ ನಗರಗಳತ್ತ ಹಾಗೂ ಶೈಕ್ಷಣಿಕ ಸಂಸ್ಥೆ ಬಲಪಡಿಸುವತ್ತ ಹೆಚ್ಚಿನ ಗಮನ ನೀಡಲಾಗುತ್ತದೆ. ನವೋದ್ಯಮ ಅಥವಾ ಉದ್ಯಮಕ್ಕೆ ನಿಯಂತ್ರಣಾತ್ಮಕ ತಪಾಸಣಾ ಪರಿಸರದಲ್ಲಿ ನಿಬಂಧನಾ ಅಗತ್ಯತೆ ಸಡಿಲಗೊಳಿಸಿ, ನವ ನೂತನ ತಂತ್ರಜ್ಞಾನ ಪರೀಕ್ಷೆಗೊಳಪಡಿಸಬಹುದಾದ ನಿಬಂಧನಾ ಅಂಗವನ್ನು ಸೃಜಿಸಲು ಕರಡು ಕರ್ನಾಟಕ ನಾವೀನ್ಯತಾ ಪ್ರಾಧಿಕಾರ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಸರ್ಕಾರ ಮಾಹಿತಿ ತಂತ್ರಜ್ಞಾನ ವಲಯದ ಉನ್ನತಿಗೆ, ಅಗ್ರಶ್ರೇಣಿ ಕಾಪಾಡಲು ಕ್ರಮ ಕೈಗೊಳ್ಳಲಿದೆ. ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ನಿಮ್ಮೆಲ್ಲರ ಪಾಲುದಾರಿಕೆ ಹಾಗೂ ಬೆಂಬಲ ಅತಿ ಅಗತ್ಯ ಎಂದು ಹೇಳಿದರು.

ಸರ್ಕಾರದ ಪ್ರಯತ್ನ: ಕ್ರಿಯಾಶೀಲ ಸರ್ಕಾರ, ಉದ್ಯಮ ಸ್ನೇಹಿ ಕಾನೂನು, ಅತ್ಯುನ್ನತ ಕೌಶಲ್ಯವುಳ್ಳ ವೃತ್ತಿಪರ ಮಾನವ ಸಂಪನ್ಮೂಲ ಹಾಗೂ ನಗರಗಳ ಕಾಸ್ಮೋಪಾಲಿಟನ್‌ ಜೀವನ ಶೈಲಿ ಮೊದಲ ಅಂಶಗಳಿಂದ ಕರ್ನಾಟಕ ನವೋದ್ಯಮಗಳಿಗೆ, ಸಂಶೋಧಕರಿಗೆ ಹಾಗೂ ಜಾಗತಿಕ ಕಾರ್ಪೊರೇಟ್‌ ದಿಗ್ಗಜರಿಗೆ ನೆಚ್ಚಿನ ತಾಣ. ನೀತಿ ಆಯೋಗದಿಂದ ಇತ್ತೀಚೆಗೆ ರಾಜ್ಯಗಳಿಗೆ ನೀಡಲಾದ ಪ್ರಪ್ರಥಮ ನಾವಿನ್ಯತಾ ಶ್ರೇಯಾಂಕದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಅಗ್ರ ಶ್ರೇಯಾಂಕ ಲಭಿಸಿದೆ. ಈ ಅಗ್ರ ಸ್ಥಾನ ಉಳಿಸಿಕೊಳ್ಳಲು ಮತ್ತು ಜಾಗತಿಕ ಆರ್ಥಿಕತೆಯಲ್ಲಿ ತನ್ನ ಸ್ಥಾನ ಹೆಚ್ಚಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಪ್ರಯತ್ನ ಮುಂದುವರಿಸಲಿದೆ ಎಂದು ಹೇಳಿದರು.

ಐಟಿ, ಬಿಟಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ಯುವ ಉದ್ಯಮಿಗಳಿಗೆ ಸರ್ಕಾರ ಅಗತ್ಯ ವೇದಿಕೆ ಕಲ್ಪಿಸುತ್ತಿದೆ. ವಿಷನ್‌ ಗ್ರೂಪ್‌ ವರದಿ ಆಧರಿಸಿ ನವೋದ್ಯಮದ ಉತ್ತೇಜನಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲಿದ್ದೇವೆ. ವಿವಿ ಮತ್ತು ಕಾಲೇಜು ಹಂತದಲ್ಲಿ ಗುಣಮಟ್ಟದ ಕೋರ್ಸ್‌ ಒದಗಿಸಲು ಕ್ರಮ ತೆಗೆದುಕೊಳ್ಳಲಿದ್ದೇವೆ. ಈ ನಿಟ್ಟಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕೆಲಸ ಮಾಡಬೇಕು ಎಂದರು.

ಉತ್ತಮ ಆಡಳಿತ ಮತ್ತು ಆಡಳಿತ ಸುಧಾರಣೆಗೆ ಉತ್ತಮ ತಂತ್ರಜ್ಞಾನ ಅತಿ ಅವಶ್ಯಕ. ಕರ್ನಾಟಕ ಇನ್ನೋವೇಷನ್‌ ಪ್ರಾಧಿಕಾರ ಜಾರಿಗೆ ತರುವ ಮೂಲಕ ಐಟಿ, ಬಿಟಿಗೆ ಹೊಸ ಆಯಾಮ ನೀಡಿದ್ದೇವೆ. ಪ್ರಾಜೆಕ್ಟ್ ಅಭಿವೃದ್ಧಿಯಲ್ಲಿ ಕರ್ನಾಟಕ ಮುಂಚುಣಿಯಲ್ಲಿದೆ ಎಂದು ಹೇಳಿದರು. ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ ಮಾತನಾಡಿ, ಕೈಗಾರಿಕೆ ಹಾಗೂ ಕಾಲೇಜುಗಳ ನಡುವೆ ಸಮನ್ವಯ ಅತಿ ಅಗತ್ಯ.

ಕಾಲೇಜುಗಳಲ್ಲಿ ಬೋಧನಾ ಕ್ರಮ ಬದಲಾಗಬೇಕು ಮತ್ತು ಪಠ್ಯಕ್ರಮದಲ್ಲೂ ಬದಲಾವಣೆ ತರಬೇಕಿದೆ. ಕೈಗಾರಿಕೆಗಳಿಗೆ ಹೊಂದಿಕೊಳ್ಳಲುವ ಪಠ್ಯಕ್ರಮಗಳು ಅಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ಟಾರ್ಟ್‌ಅಪ್‌ ವಿಷನ್‌ ಗ್ರೂಪ್‌ ಅಧ್ಯಕ್ಷ ಪ್ರಶಾಂತ್‌ ಪ್ರಕಾಶ್‌, ಇಲಾಖೆ ನಿರ್ದೇಶದ ಪ್ರಶಾಂತ್‌ ಕುಮಾರ್‌ ವಿಶ್ರಾ, ಪ್ರಾನ್ಸ್‌ ಕಾನ್ಸುಲೇಟ್‌ ಜನರಲ್‌ ಮಾಜೋರಿ ವಾನ್‌ ಬೆಲಿಜೆಮ್‌ ಮತ್ತಿತರರಿದ್ದರು.

ಉನ್ನತ ತಂತ್ರಜ್ಞಾನದಿಂದ ಉತ್ಕೃಷ್ಟತಾ ಕೇಂದ್ರ: ನಾವಿನ್ಯತೆಯುಳ್ಳ ವಾಣಿಜ್ಯೋದ್ಯಮಿಗಳಿಗೆ ಎಲಿವೇಟ್‌ ಮುಂತಾದ ಅನುದಾನ ಬೆಂಬಲ ಕಾರ್ಯಕ್ರಮಗಳ ಮೂಲಕ ಸರ್ಕಾರ ಅವುಗಳನ್ನು ಪ್ರೋತ್ಸಾಹಿಸುತ್ತಿದೆ. ಕೈಗಾರಿಕೆ, ಶಿಕ್ಷಣ, ಉದ್ಯಮ ಹಾಗೂ ನವೋದ್ಯಮಗಳಿಗೆ ಸಹಭಾಗಿತ್ವಕ್ಕಾಗಿ ವೇದಿಕೆ ಕಲ್ಪಿಸಲು ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಉನ್ನತ ತಂತ್ರಜ್ಞಾನಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್‌ .ಯಡಿ ಯೂರಪ್ಪ ಹೇಳಿದರು.

ಶೀಘ್ರ ಐಟಿ ನೀತಿ ಜಾರಿಗೆ ತರಲಿದ್ದೇವೆ. ಡೀಪ್‌ ತಂತ್ರಜ್ಞಾನ ಅಳವಡಿಕೆಗೆ ಸರ್ಕಾರ ನಿರ್ಧಾರ ಮಾಡಿದೆ. ಇದು ಯುವಕ-ಯುವತಿಯರಿಗೆ ಅನುಕೂಲವಾಗಲಿದ್ದು ತಂತ್ರಜ್ಞಾನದಲ್ಲಿ ಕನ್ನಡ ಭಾಷೆ ಅಳವಡಿಕೆ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ.
-ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.