1 ಲಕ್ಷಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನು ಒತ್ತುವರಿ : ಸಚಿವ ಆರ್.ಅಶೋಕ್
Team Udayavani, Sep 12, 2020, 12:50 PM IST
ತುಮಕೂರು: ಮುಂದಿನ ದಿನಗಳಲ್ಲಿ ಸರ್ಕಾರಿ ಜಮೀನು ಉಳಿಯುವುದು ಕಷ್ಟ. ಅದನ್ನು ಕಾಪಾಡಲು ಅಧಿಕಾರಿಗಳು ಹೆಚ್ಚು ಆಸಕ್ತಿ ತೋರಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಶಾಲಾ-ಕಾಲೇಜು, ಆಸ್ಪತ್ರೆ, ವಸತಿ ನಿಲಯ ಸೇರಿ ಸರ್ಕಾರಿ ಉಪಯೋಗಗಳಿಗೆ ಜಮೀನು ಮೀಸಲಿಡಬೇಕು. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ. ಆದ್ದರಿಂದ ಸರ್ಕಾರಿ ಜಮೀನನ್ನು ವಿವಿಧ ಉಪಯೋಗಗಳಿಗೆ ಮೀಸಲಿಟ್ಟರೆ ಸಂಬಂಧಿಸಿದ ಇಲಾಖೆಗಳು ಅವುಗಳನ್ನು ಸಂರಕ್ಷಿಸುತ್ತವೆ ಎಂದು ತಿಳಿಸಿದರು.
ಪ್ರತಿಯೊಂದು ಹಳ್ಳಿಯಲ್ಲಿಯೂ ಸಾರ್ವಜನಿಕ ಸ್ಮಶಾನವಿರಬೇಕು. ಸಮುದಾಯಕ್ಕೊಂದು ರುದ್ರಭೂಮಿಬೇಕು ಎಂದು ಕೇಳಿದರೆ ಅವರ ಸ್ವಂತ ಜಮೀನುಗಳಿದ್ದರೆ, ಅಂತಹವರು ರುದ್ರಭೂಮಿಗೆ ಸಮುದಾಯದ ಹೆಸರನ್ನು ಇಟ್ಟುಕೊಳ್ಳಬಹುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 333 ಗ್ರಾಮಗಳಲ್ಲಿ ರುದ್ರಭೂಮಿಗೆ ಅವಶ್ಯಕತೆಯಿದ್ದು, ಅವುಗಳನ್ನು ಮುಂದಿನ 2 ತಿಂಗಳೊಳಗಾಗಿ ವ್ಯವಸ್ಥೆ ಕಲ್ಪಿಸಬೇಕು.
ಜಾತಿಗಳಿಗೆ ಪ್ರತ್ಯೇಕವಾಗಿ ಸ್ಮಶಾನ ನೀಡಲು ನಿಯಮದಲ್ಲಿ ಅವಕಾಶವಿಲ್ಲ ಎಂದರು. ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‌ಕುಮಾರ್ ಮಾತನಾಡಿ, ಈ ತಿಂಗಳಲ್ಲಿ 4 ಸಾವಿರ ಟನ್ ಯೂರಿಯಾ ಗೊಬ್ಬರಕ್ಕೆ ಬೇಡಿಕೆಯಿದೆ. ನಮ್ಮಲ್ಲಿ 5 ಸಾವಿರ ಟನ್ ಗೊಬ್ಬರ ಸಂಗ್ರಹಣೆ ಮಾಡಲಾಗಿದೆ. ರೈತರಿಗೆ ಇದರಿಂದ ಯಾವುದೇ ರೀತಿಯ ಗೊಬ್ಬರದ ಕೊರತೆ ಇಲ್ಲ ಎಂದು ತಿಳಿಸಿದರು.
ಎಲ್ಲಾ ಪಿಂಚಣಿ ಯೋಜನೆಗಳಿಗೆ ಆಧಾರ್ ಲಿಂಕ್ ಕಡ್ಡಾಯವಾಗಿ ಮಾಡಿಸಬೇಕು. ಪೋಸ್ಟ್ ಆಫೀಸ್ ಬದಲಾಗಿ ಬ್ಯಾಂಕ್‌ಗಳಿಗೆ ಹಣ ಜಮೆಯಾಗುವಂತೆ ಮಾಡಬೇಕು ಎಂದು ಸಚಿವರು ತಹಶೀಲ್ದಾರ್‌ಗೆ ಸೂಚಿಸಿದರು.
ತಹಶೀಲ್ದಾರ್ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಬಗ್ಗೆ ಶಾಸಕ ಜಯರಾಂ ಸಚಿವರ ಗಮನಕ್ಕೆ ತಂದಾಗ, ಜಿಲ್ಲಾಧಿಕಾರಿಗಳು ಸ್ಕ್ಯಾಡ್ ರಚಿಸಿ ಅವರ ಮೂಲಕ ಮಾಹಿತಿ ಸಂಗ್ರಹಿಸಿ ತಹಶೀಲ್ದಾರ್ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿ ಎಂದು ಸೂಚಿಸಿದರು.
ಬೆಂಗಳೂರು ನಗರ ಸೇರಿ ವಿವಿಧೆಡೆಯಿಂದ ತುಮಕೂರು ಜಿಲ್ಲೆಗೆ ಆಗಮಿಸಿ ಬಗರಹುಕುಂ ಸಾಗುವಳಿಯ ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ಪಡೆದಿದ್ದು, ಈ ಬಗ್ಗೆ ತನಿಖೆ ಮಾಡಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಯರಾಂ, ನಾಗೇಶ್, ಎಸ್ಪಿ ಡಾ.ಕೊ.ನ.ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.