ಅಕ್ರಮ-ಸಕ್ರಮ ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳ ಪರಿಶೀಲನೆ : ಸಚಿವ ಆರ್. ಅಶೋಕ್
Team Udayavani, Mar 18, 2021, 7:10 AM IST
ಬೆಂಗಳೂರು : ಅಕ್ರಮ ಸಕ್ರಮ ಯೋಜನೆಯಡಿ ಸಲ್ಲಿಕೆಯಾಗಿರುವ ಉಡುಪಿ ಜಿಲ್ಲೆಯ ರೈತರ ಅರ್ಜಿಗಳನ್ನು ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಪ್ರತಾಪಚಂದ್ರ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2019ರ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಯನ್ನು ಜಿಲ್ಲಾಧಿಕಾರಿಗಳು ಸ್ಥಗಿತಗೊಳಿಸಿದ್ದರು. ಆದರೆ ರೈತರ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ತಾಲೂಕು ಗಳಲ್ಲಿ 2019ರ ಮಾ. 11, ಬ್ರಹ್ಮಾವರ ಮಾ. 12, ಉಡುಪಿ ಮಾ. 13 ಮತ್ತು ಕಾಪು, ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಮಾ.14ರ ವರೆಗೆ ನಮೂನೆ-57ರ ಅರ್ಜಿಗಳನ್ನು ಸ್ವೀಕರಿಸಲಾಗಿರುತ್ತದೆ ಎಂದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಾಪಚಂದ್ರ ಶೆಟ್ಟಿ, ಅರ್ಜಿ ಸ್ವೀಕಾರಕ್ಕೆ ದಿನಾಂಕ ನೀಡಲಾಗಿದೆ. ಆದರೆ ಅರ್ಜಿ ಸ್ವೀಕರಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೋರ್ಡ್ ಹಾಕಿದರೆ ಯಾರು ಅರ್ಜಿ ಕೊಡುತ್ತಾರೆ? ಜಿಲ್ಲಾಧಿಕಾರಿಗಳು ಕಾನೂನು ಅರ್ಥ ಮಾಡಿಕೊಳ್ಳದೆ ಇರುವುದರಿಂದ ರೈತರಿಗೆ ಅನ್ಯಾಯವಾಗಿದೆ ಎಂದರು.
ಅರ್ಜಿಗಳು ಸಲ್ಲಿಕೆಯಾಗಿವೆ. ಅಂತಹ ಅರ್ಜಿಗಳನ್ನು ಅಪ್‌ಲೋಡ್ ಮಾಡಲು ಅವಕಾಶ ನೀಡಲಾಗುವುದು. ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ನಮೂನೆ-57ರಲ್ಲಿ ಈವರೆಗೆ 8.02 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.